ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ | Karnataka By-Elections: BJP Announces Candidates for Bagalkot and Davanagere South: Know details

Karnataka

oi-Madhusudhan KR

Karnarnataka Election: ರಾಜ್ಯದ ಕುತೂಹಲ ಕೆರಳಿಸಿರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಕಣಕ್ಕಿಳಿಯುವ ನಾಯಕರನ್ನು ಅಂತಿಮಗೊಳಿಸಿದೆ.

ಬಾಗಲಕೋಟೆಯಿಂದ ನಿರೀಕ್ಷೆಯಂತೆ ವೀರಭದ್ರಯ್ಯ ಚರಂತಿಮಠ ಅವರಿಗೆ ಟಿಕೆಟ್ ನೀಡಲಾಗಿದ್ದರೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶ್ರೀನಿವಾಸ ಟಿ.ದಾಸಕರಿಯಪ್ಪ ಅವರಿಗೆ ಅವಕಾಶ ನೀಡುವ ಮೂಲಕ ಪಕ್ಷವು ಅಚ್ಚರಿಯ ನಡೆ ಪ್ರದರ್ಶಿಸಿದೆ.
ಬಾಗಲಕೋಟೆ ಕ್ಷೇತ್ರದಲ್ಲಿ ನೋಡುವುದಾದರೆ, ಹಿರಿಯ ನಾಯಕ ಎಚ್.ವೈ.ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಬಿಜೆಪಿಯಲ್ಲಿ ಹೆಚ್ಚಿನ ಗೊಂದಲ ಇರಲಿಲ್ಲ.

Karnataka By-Elections BJP Announces Candidates for Bagalkot and Davanagere South Know details

ಬಾಗಲಕೋಟೆ ಕ್ಷೇತ್ರದಿಂದ ವೀರಭದ್ರಯ್ಯಗೆ ಟಿಕೆಟ್

ಈ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಭದ್ರಯ್ಯ ಚರಂತಿಮಠ ಅವರ ಹೆಸರು ಮೊದಲಿನಿಂದಲೂ ಮುಂಚೂಣಿಯಲ್ಲಿತ್ತು. ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ಸ್ಪರ್ಧಿಸಲು ಆಸಕ್ತಿ ತೋರದ ಹಿನ್ನೆಲೆಯಲ್ಲಿ ಚರಂತಿಮಠ ಅವರ ಆಯ್ಕೆ ಸುಗಮವಾಗಿದೆ ಎಂದು ಹೇಳಲಾಗುತ್ತಿದೆ.

ದಾವಣಗೆರೆ ದಕ್ಷಿಣದಿಂದ ದಾಸಕರಿಯಪ್ಪಗೆ ಟಿಕೆಟ್

ಮತ್ತೊಂದೆಡೆ, ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಇಲ್ಲಿ ಬಿಜೆಪಿಯ ಟಿಕೆಟ್‌ಗಾಗಿ ಭಾರಿ ಪೈಪೋಟಿ ಇತ್ತು. ಯುವ ನಾಯಕ ಬಿ.ಜಿ. ಅಜಯ್ ಕುಮಾರ್ ಅವರಿಗೆ ಟಿಕೆಟ್ ಸಿಗಬಹುದು ಎಂಬ ಲೆಕ್ಕಾಚಾರವಿತ್ತು. ಆದರೆ, ಕೊನೆ ಕ್ಷಣದಲ್ಲಿ ಎಸ್‌ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿರುವ ಶ್ರೀನಿವಾಸ ದಾಸಕರಿಯಪ್ಪ ಅವರಿಗೆ ಮನ್ನಣೆ ನೀಡುವ ಮೂಲಕ ಹೈಕಮಾಂಡ್ ಸ್ಥಳೀಯ ಮಟ್ಟದ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿದೆ ಅಂತಲೇ ಹೇಳಬಹುದು.

ಕಾಂಗ್ರೆಸ್‌ನಲ್ಲಿ ಮುಂದುವರೆದ ಟಿಕೆಟ್‌ ಪೈಪೋಟಿ

ಮತ್ತೊಂದೆಡೆ, ಆಡಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ ಅಭ್ಯರ್ಥಿ ಆಯ್ಕೆಯ ಗೊಂದಲ ಮುಂದುವರಿದಿದೆ. ಬಾಗಲಕೋಟೆಯಲ್ಲಿ ಮೇಟಿ ಕುಟುಂಬದವರೇ ಟಿಕೆಟ್‌ಗಾಗಿ ಪಟ್ಟು ಹಿಡಿದಿದ್ದರೆ, ದಾವಣಗೆರೆಯಲ್ಲಿ ಶಾಮನೂರು ಕುಟುಂಬದ ಮೂರನೇ ತಲೆಮಾರಿನ ಸಮರ್ಥ್ ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ನೀಡಲು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮತ್ತು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ದೆಹಲಿ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ನಾಯಕರು ಶಾಮನೂರು ಕುಟುಂಬದ ಪಾರುಪತ್ಯಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದು ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಒಟ್ಟಿನಲ್ಲಿ ಕರ್ನಾಟಕದ ಈ ಎರಡು ಕ್ಷೇತ್ರಗಳ ಜೊತೆಗೆ ಗೋವಾ, ನಾಗಾಲ್ಯಾಂಡ್ ಮತ್ತು ತ್ರಿಪುರಾದ ತಲಾ ಒಂದು ಕ್ಷೇತ್ರಗಳಿಗೂ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಮೇ 4ರಂದು ಫಲಿತಾಂಶ ಪ್ರಕಟವಾಗಲಿದ್ದು, ಈ ಉಪಚುನಾವಣೆಯು ರಾಜ್ಯ ರಾಜಕಾರಣದ ಮುಂದಿನ ದಿಕ್ಸೂಚಿಯಾಗುವ ಸಾಧ್ಯತೆಯಿದೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/karnataka-by-elections-bjp-announces-candidates-for-bagalkot-and-davanagere-south-know-details-447623.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo