ದಾವಣಗೆರೆ ಟಿಕೆಟ್ ವಿಚಾರವಾಗಿ ನಾನು ಮುನಿಸಿಕೊಂಡಿರಲಿಲ್ಲ: ಸಚಿವ ಜಮೀರ್ ಅಹಮದ್ ಖಾನ್‌ ಸ್ಪಷ್ಟನೆ | Zameer Ahmed Khan Clarifies Davanagere By Election Congress Ticket Row Denies Any Displeasure

Karnataka

oi-Manohara M

ದಾವಣಗೆರೆ ದಕ್ಷಿಣ ಉಪಚುನಾವಣೆಯ ಟಿಕೆಟ್ ಹಂಚಿಕೆ ಪ್ರಕ್ರಿಯೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರು ಅಸಮಾಧಾನಗೊಂಡಿದ್ದಾರೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿದ್ದವು. ಆದರೆ, ಈ ಬಗ್ಗೆ ಸ್ವತಃ ಜಮೀರ್ ಅವರೇ ಪ್ರತಿಕ್ರಿಯಿಸಿದ್ದು, ತಮಗೆ ಯಾವುದೇ ಮುನಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಟಿಕೆಟ್ ವಿಚಾರದಲ್ಲಿ ಗೊಂದಲವಿಲ್ಲ

ದಾವಣಗೆರೆ ಉಪಚುನಾವಣೆಯ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲಿ ತಮ್ಮ ಬೆಂಬಲಿಗರಿಗೆ ಅಥವಾ ತಮ್ಮ ಆಪ್ತರಿಗೆ ಟಿಕೆಟ್ ಸಿಗದ ಕಾರಣ ಜಮೀರ್ ಅಹಮದ್ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿತ್ತು. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ದಾವಣಗೆರೆ ಟಿಕೆಟ್ ವಿಚಾರದಲ್ಲಿ ನಾನು ಯಾವತ್ತೂ ಮುನಿಸಿಕೊಂಡಿರಲಿಲ್ಲ. ಪಕ್ಷದ ಹೈಕಮಾಂಡ್ ಮತ್ತು ನಾಯಕರು ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ. ಅಸಮಾಧಾನ ಎಂಬುದೆಲ್ಲಾ ಕೇವಲ ಸೃಷ್ಟಿಸಿದ ವದಂತಿಗಳು ಅಷ್ಟೇ” ಎಂದು ತಿಳಿಸಿದ್ದಾರೆ.

Zameer Ahmed Khan

ಪಕ್ಷದ ಗೆಲುವೇ ಮೊದಲ ಆದ್ಯತೆ

ಟಿಕೆಟ್ ಯಾರಿಗೆ ಸಿಕ್ಕಿದೆ ಎಂಬುದು ಮುಖ್ಯವಲ್ಲ, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದು ನಮ್ಮ ಮೊದಲ ಆದ್ಯತೆ ಎಂದು ಅವರು ಹೇಳಿದ್ದಾರೆ. “ಚುನಾವಣಾ ಸಂದರ್ಭದಲ್ಲಿ ಹಲವು ಆಕಾಂಕ್ಷಿಗಳು ಇರುವುದು ಸಹಜ. ಆದರೆ ಅಂತಿಮವಾಗಿ ಪಕ್ಷದ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ನಾವು ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುನಿಸಿನ ವದಂತಿಗಳ ನಡುವೆಯೂ ಜಮೀರ್ ಅಹಮದ್ ಅವರು ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾಣಿಸಿಕೊಳ್ಳುತ್ತಿದ್ದು, ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ವಿರೋಧ ಪಕ್ಷಗಳ ಟೀಕೆಗಳಿಗೆ ಉತ್ತರಿಸಿದ ಅವರು, “ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ, ಉಪಚುನಾವಣೆಯಲ್ಲಿ ನಾವು ಭರ್ಜರಿ ಜಯ ದಾಖಲಿಸಲಿದ್ದೇವೆ” ಎಂದಿದ್ದಾರೆ. ಜಮೀರ್ ಅಹಮದ್ ಅವರ ಈ ಸ್ಪಷ್ಟನೆಯಿಂದ ದಾವಣಗೆರೆ ಕಾಂಗ್ರೆಸ್ ಪಾಳಯದಲ್ಲಿ ಇದ್ದ ಎನ್ನಲಾದ ಸಣ್ಣಪುಟ್ಟ ಗೊಂದಲಗಳು ಬಗೆಹರಿದಂತಾಗಿದ್ದು, ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದೆ.

ಈ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ಕೈತಪ್ಪಿದ್ದು ಜಮೀರ್ ಅಹಮದ್ ಅವರ ಅಸಮಾಧಾನಕ್ಕೆ ಮೂಲ ಕಾರಣ ಎನ್ನಲಾಗಿತ್ತು. ಇದೇ ವಿಚಾರವಾಗಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಜಮೀರ್ ವಿರುದ್ಧ ಏಕವಚನದಲ್ಲೇ ಕಿಡಿಕಾರಿದ್ದರು. “ಜಮೀರ್ ಕ್ಷೇತ್ರಕ್ಕೆ ಬರುವುದು ಬೇಡ” ಎಂಬ ಮಲ್ಲಿಕಾರ್ಜುನ ಅವರ ಹೇಳಿಕೆ ಮುಸ್ಲಿಂ ಸಮುದಾಯದ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ಮಲ್ಲಿಕಾರ್ಜುನ ಅವರು ಜಮೀರ್ ಅವರ ಕ್ಷಮೆಯಾಚಿಸಬೇಕು ಎಂದು ಸಮುದಾಯದ ಮುಖಂಡರು ಪಟ್ಟು ಹಿಡಿದಿದ್ದರು.

ಜಮೀರ್ ಅಹಮದ್ ಅವರು ಪ್ರಚಾರದಿಂದ ದೂರ ಉಳಿದಿದ್ದರಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರಿಗೆ ದೊಡ್ಡ ಸಂಕಷ್ಟ ಎದುರಾಗಿತ್ತು. ಶಾಸಕರಾದ ಸಲೀಂ ಅಹ್ಮದ್, ರಿಜ್ವಾನ್ ಅರ್ಷದ್, ಎನ್.ಎ. ಹ್ಯಾರಿಸ್ ಪ್ರಚಾರಕ್ಕೆ ಹೋದ ಕಡೆಯಲ್ಲೆಲ್ಲ ಜನರು “ಜಮೀರ್ ಅಹಮದ್ ಅವರನ್ನು ಕರೆಸಿ” ಎಂದು ಘೋಷಣೆ ಕೂಗಿದ್ದರು. ಜಮೀರ್ ಬರದೇ ಇದ್ದರೆ ಮುಸ್ಲಿಂ ಮತಗಳು ಕೈತಪ್ಪುವ ಆತಂಕ ಹೈಕಮಾಂಡ್ ಅನ್ನು ಕಾಡಿತ್ತು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಕಾಂಗ್ರೆಸ್ ಹೈಕಮಾಂಡ್, ಕೂಡಲೇ ದಾವಣಗೆರೆಗೆ ತೆರಳುವಂತೆ ಜಮೀರ್ ಅವರಿಗೆ ಸೂಚನೆ ನೀಡಿದೆ ಎನ್ನಲಾಗಿದೆ.

ಅದರಂತೆ ಇಂದು ದಕ್ಷಿಣ ಕ್ಷೇತ್ರದ ಅಖಾಡಕ್ಕಿಳಿದ ಜಮೀರ್, “ಮಲ್ಲಿಕಾರ್ಜುನ ಅವರು ನನ್ನ ಅಣ್ಣನ ಸಮಾನ. ಸಿಟ್ಟಿನಲ್ಲಿ ಏನೋ ಬೈದಿದ್ದಾರೆ ಅಷ್ಟೇ, ಅದನ್ನು ದೊಡ್ಡದು ಮಾಡುವ ಅಗತ್ಯವಿಲ್ಲ” ಎಂದು ಹೇಳುವ ಮೂಲಕ ಮುನಿಸು ಮರೆತು ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್ ಪರ ಪ್ರಚಾರ ಆರಂಭಿಸಿದ್ದಾರೆ. ಜಮೀರ್ ಅವರ ಎಂಟ್ರಿಯಿಂದ ಕ್ಷೇತ್ರದಲ್ಲಿ ಮುಸ್ಲಿಂ ಮತಗಳನ್ನು ಸೆಳೆಯುವ ವಿಶ್ವಾಸದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಮಲ್ಲಿಕಾರ್ಜುನ ಅವರ ಪುತ್ರನ ಗೆಲುವಿಗಾಗಿ ಈಗ ಜಮೀರ್ ಅಹಮದ್ ಅಖಾಡಕ್ಕಿಳಿದಿರುವುದು ಕ್ಷೇತ್ರದ ರಾಜಕೀಯ ಲೆಕ್ಕಾಚಾರ ಬದಲಿಸುವ ಸಾಧ್ಯತೆ ಇದೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/zameer-ahmed-khan-clarifies-davanagere-by-election-congress-ticket-row-denies-any-displeasure-449441.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo