ಆರೋಗ್ಯದಿಂದ ಅನಾರೋಗ್ಯದ ಕಡೆಗೆ ಕರ್ನಾಟಕ ರಾಜ್ಯದ ಆಡಳಿತ, ಕಿಕ್ ಕೊಡುವ ಇಲಾಖೆಗೆ, ಪ್ರಿಕ್ ಕೊಡುವ ವೈದ್ಯರು ಬೇಕಿತ್ತೇ? | Sudden Excise Department Transfer Sparks Row; RAshok Calls It Siddaramaiah’s Tughlaq Darbar

Karnataka

oi-Hitesh Y

ಕರ್ನಾಟಕ ಅಬಕಾರಿ ಇಲಾಖೆಯ ವಿಚಾರವಾಗಿ ಭಾರೀ ಚರ್ಚೆ ನಡೆದಿದೆ. ಇತ್ತೀಚಿಗೆ ಅಬಕಾರಿ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು. ಇದೀಗ ವರ್ಗಾವಣೆ ವಿಚಾರಕ್ಕೆ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಅಬಕಾರಿ ಇಲಾಖೆಗೆ ಆರೋಗ್ಯಾಧಿಕಾರಿ ವರ್ಗಾವಣೆ; ಇದು ಸಿದ್ದರಾಮಯ್ಯನವರ ತುಘಲಕ್ ದರ್ಬಾರ್ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಹೇಳಿದ್ದಾರೆ.

ಸರ್ಕಾರಿ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಪತ್ರ ಬರೆದು ನಿರ್ದೇಶನ ನೀಡಿರುವುದು ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ವರ್ಗಾವಣೆ ದಂಧೆ, ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಕಮಿಷನ್ ದಂಧೆಗೆ ಕನ್ನಡಿ ಹಿಡಿದಿದೆ.

Sudden Excise Department Transfer Sparks Row RAshok Calls It Siddaramaiah s Tughlaq Darbar

ಗೋಕುಲಾಷ್ಟಮಿಗೂ ಇಮಾಂ ಸಾಬಿಗೂ ಏನು ಸಂಬಂಧ ಎನ್ನುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೂ, ಅಬಕಾರಿ ಇಲಾಖೆಗೂ ಏನು ಸಂಬಂಧ ಸಿಎಂ ಸಿದ್ದರಾಮಯ್ಯ ನವರೇ, ಇಷ್ಟಕ್ಕೂ ಒಬ್ಬ ವೈದ್ಯರನ್ನ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡುವ ಅನಿವಾರ್ಯತೆ ಆದರೂ ಏನಿತ್ತು. ಮೊದಲೇ ಸರ್ಕಾರಿ ಆಸ್ಪತ್ರೆಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆಯಿಂದ ಬಡ ರೋಗಿಗಳು ಪರದಾಡುತ್ತಿದ್ದಾರೆ. ಹೊಸ ನೇಮಕಾತಿಯೂ ನಡೆಯುತ್ತಿಲ್ಲ. ಅಂತಹುದರಲ್ಲಿ ಸೇವೆಯಲ್ಲಿರುವ ವೈದ್ಯಾಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗ ಮಾಡುವ ಅನಿವಾರ್ಯತೆ, ಹಪಾಹಪಿ ಯಾಕೆ ಸಿದ್ದರಾಮಯ್ಯನವರೇ. ಇದರ ಹಿಂದಿರುವ ನಿಜವಾದ ಉದ್ದೇಶವಾದರೂ ಏನು ಎಂದು ಪ್ರಶ್ನೆ ಮಾಡಿದ್ದಾರೆ.

ಮುಂದುವರಿದು ಅದರಲ್ಲೂ ಸಹ ತಾವು ಖುದ್ದಾಗಿ ಶಿಫಾರಸ್ಸು ಮಾಡಿ ವರ್ಗಾವಣೆ ಮಾಡಿರುವ ಅಧಿಕಾರಿ ಡಾ. ಮೋಹನ್ ಅವರು ಕೃಷಿ ಸಚಿವ ಸಚಿವ ಚಲುವರಾಯಸ್ವಾಮಿ ಅವರ ಸಂಬಂಧಿ ಎನ್ನುವ ಮಾಹಿತಿ ಇದೆ. ಏನು ನಡೆಯುತ್ತಿದೆ ಸ್ವಾಮಿ ನಿಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ, ಇದೇನು ಸರ್ಕಾರವೋ ಅಥವಾ ತುಘಲಕ್ ದರ್ಬಾರೋ ಎಂದು ಆರ್. ಅಶೋಕ್ ಅವರು ಟೀಕೆ ಮಾಡಿದ್ದಾರೆ.

ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಹಳಿ ತಪ್ಪಿದ ಆಡಳಿತದ ಕ್ಲಾಸಿಕ್ ಉದಾಹರಣೆ. ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ.

ಇದು ಅಬಕಾರಿ ಹಾಗೂ ಆರೋಗ್ಯ ಇಲಾಖೆಯ ವೃಂದ ನಿಯಮಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಸಿದ್ದರಾಮಯ್ಯನವರೂ ಇಂದ್ರೀಯ ವಶವಾಗಿ ಆಡಳಿತದ ಹದ ಕಳೆದುಕೊಂಡಿದ್ದಾರೆ ಎಂಬುದಕ್ಕೆ ಇದು ನಿದರ್ಶನವಾಗಿದೆ. ಅಬಕಾರಿ ಇಲಾಖೆಯಲ್ಲಿ ನಡೆದಿರುವ 6000 ಕೋಟಿ ರೂ.ಗೂ ಅಧಿಕ ಮೊತ್ತದ ಅವ್ಯವಹಾರ ಹಾಗೂ ಕಿಕ್ ಬ್ಯಾಕ್ ದಂಧೆಯ ಹಿಂದೆ ಇಂಥ ಅವೈಜ್ಞಾನಿಕ ಹಾಗೂ ನಿಯಮ ಬಾಹಿರ ವರ್ಗಾವಣೆಯ ಸೂಚನೆಗಳು ಕೆಲಸ ಮಾಡಿರುವ ಸಾಧ್ಯತೆಗಳು ದಟ್ಟವಾಗಿದೆ. ಮುಖ್ಯಮಂತ್ರಿಗಳೇ ಆಯಕಟ್ಟಿನ ಇಲಾಖೆಗೆ ಮಾತ್ರ ನೀವು ಈ ರೀತಿ ಎರವಲು ಸೇವೆಯ ಶಿಫಾರಸು ಮಾಡುತ್ತೀರಾ

ಅಥವಾ ನಿಮ್ಮಿಂದ ಮಾಡಿಸುತ್ತಾರಾ, ಆರೋಗ್ಯ ಇಲಾಖೆಯಲ್ಲಿ ವೈದ್ಯರ ಇಲ್ಲದೆ ಸಾರ್ವಜನಿಕರು ನರಳುತ್ತಿರುವಾಗ ಜಿಲ್ಲಾ ವೈದ್ಯಾಧಿಕಾರಿಯೊಬ್ಬನನ್ನು ಅಬಕಾರಿ ಇಲಾಖೆಗೆ ನಿಯೋಜನೆ ಮಾಡುವಂತೆ ನೀವೇ ನಿರ್ದೇಶನ ನೀಡುತ್ತೀರೆಂದರೆ ಅದೆಂತ ಒತ್ತಡ ಹಾಗೂ ವ್ಯಾಮೋಹ ನಿಮ್ಮನ್ನು ಕಾಡುತ್ತಿರಬಹುದು ಅಥವಾ ಅಧಿಕಾರ ಹಸ್ತಾಂತರದ ಚಿಂತೆ ನಿಮ್ಮನ್ನು ಆವರಿಸಿದೆಯೋ ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು ಬಿಜೆಪಿ ಶಾಸಕ ಸುರೇಶ್ ಕುಮಾರ್‌ ಅವರು, ಆರೋಗ್ಯದಿಂದ ಅನಾರೋಗ್ಯದ ಕಡೆಗೆ ಕರ್ನಾಟಕ ರಾಜ್ಯದ ಆಡಳಿತ. ಕಿಕ್ ಕೊಡುವ ಇಲಾಖೆಗೆ, ಪ್ರಿಕ್ ಕೊಡುವ ವೈದ್ಯರು ಬೇಕಿತ್ತೇ ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸಮುದ್ಯತಾ ಕಂಜರ್ಪಣೆ ಎನ್ನುವವರು, ಏನಾದ್ರೂ ಯೋಚಿಸಿ ಪೋಸ್ಟ್ ಹಾಕೋಣ ಅನ್ನೋದಾದ್ರೂ ಬೇಡ್ವ?
ಡೇಟ್ ಇಲ್ಲ, ಫೈಲ್ ನಂಬರ್‌ ಇಲ್ಲ, ಇಸವಿ ನೋಡಿದ್ರೆ 2024 ಇದೆ. ಅಷ್ಟು ಬೇಸಿಕ್‌ ಕೂಡ ನೋಡದೇ ಒಟ್ಟು ಏನೋ ಒಂದು ಹೇಳ್ಬೇಕು ಅನ್ನೋ ಹಪಾಹಪಿ. ದೂರುಗಳು, ಸಮರ್ಥನೆಗಳು ಎಲ್ಲವೂ ಇಂಥವೇ.. ಎಲ್ರೂ ಹಿಂಗೆ.. ಬರೀ ಫೇಕ್ ಸುದ್ದಿ ಹಬ್ಬಿಸೋದು, ಆಮೇಲೆ ಡಿಲೀಟ್ ಮಾಡೋದು ಅಥವಾ ಸಾರಿ ಕೇಳೋದು ಎಂದಿದ್ದಾರೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/sudden-excise-department-transfer-sparks-row-rashok-calls-it-siddaramaiah-s-tughlaq-darbar-443583.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo