ಉರ್ದು ಜಾಹೀರಾತು ವಿವಾದ: ಬಿಜೆಪಿ ‘ಹಿಪೋಕ್ರಸಿ’ ಗೋಸುಂಬೆಯನ್ನೇ ನಾಚಿಸುವಂತಿದೆ: ಸಿ.ಎಂ ಸಿದ್ದರಾಮಯ್ಯ | Urdu Advertisement Row: Siddaramaiah Slams Bharatiya Janata Party ‘Hypocrisy’ as Embarrassing

Karnataka

oi-Hitesh Y

ಬೆಂಗಳೂರು: ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಆಡಿರುವ ವೀರಾವೇಶದ ಮಾತುಗಳನ್ನು ಆಲಿಸಿದೆ. ಹಿಂದೆ ತಾವೇ ಅಧಿಕಾರದಲ್ಲಿ ಇದ್ದಾಗ ಉರ್ದು ಭಾಷೆಯ ಜಾಹೀರಾತು ನೀಡಿ, ಈಗ ನಮ್ಮ ವಿರುದ್ಧ ಮುಗಿಬೀಳುವುದು ಆತ್ಮವಂಚನೆ ಮತ್ತು ಅಸಹ್ಯದ ಪರಮಾವಧಿ. ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಅಧಿಕಾರದಲ್ಲಿದ್ದಾಗ ಯಾರ ಓಲೈಕೆ ಮಾಡಲು ಉರ್ದು ಜಾಹೀರಾತು ನೀಡಿದ್ದರು? ಎಂದು ಹೇಳಿ ಪುಣ್ಯಕಟ್ಟಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಉದ್ದೇಶದಿಂದಲೇ ಸರ್ಕಾರ ಜಾಹೀರಾತು ನೀಡುತ್ತದೆ. ಹೆಚ್ಚೆಚ್ಚು ಜನರನ್ನು ತಲುಪುತ್ತದೆ ಎನ್ನುವ ಕಾರಣಕ್ಕಾಗಿ ಆಯಾ ಭಾಷೆಯ ಪತ್ರಿಕೆಗಳಲ್ಲಿ ಅದೇ ಭಾಷೆಯ ಜಾಹೀರಾತು ನೀಡುವುದು ಹಿಂದಿನಿಂದ ನಡೆದುಕೊಂಡು ಬಂದ ಪದ್ಧತಿ. ಇದರಿಂದ ಪತ್ರಿಕೆಯ ಓದುಗರಿಗೆ ಜಾಹೀರಾತಿನ ವಿಚಾರ ಅರ್ಥವಾಗಿ, ಜಾಹೀರಾತು ನೀಡಿದ ಉದ್ದೇಶವೂ ಈಡೇರುತ್ತದೆ.

Urdu Advertisement Row Siddaramaiah Slams Bharatiya Janata Party Hypocrisy as Embarrassing

ಬಿಜೆಪಿ ನಾಯಕರು ಒಂದಲ್ಲ, ಎರಡಲ್ಲ ಹತ್ತಾರು ಬಾರಿ ಉರ್ದು ಜಾಹೀರಾತುಗಳನ್ನು ನೀಡಿದ್ದಾರೆ, ಆಗ ಅವರಿಗೆ ಅದು ತುಷ್ಟೀಕರಣ ಅನ್ನಿಸಲಿಲ್ಲ. ಈಗ ನಮ್ಮ ಸರ್ಕಾರ ನೀಡಿರುವ ಉರ್ದು ಜಾಹೀರಾತು ಕಂಡೊಡನೆ ಅವರೊಳಗಿನ ಕನ್ನಡಪ್ರೇಮ ಇದ್ದಕ್ಕಿದ್ದಂತೆ ಎದ್ದುನಿಂತಿದೆ. ನಿಮ್ಮ ಈ ‘ಹಿಪೋಕ್ರಸಿ’ ಗೋಸುಂಬೆಯನ್ನೇ ನಾಚಿಸುವಂತಿದೆ.
ನೆಲ – ಜಲ – ಭಾಷೆಯ ಕಾಳಜಿಯ ಬಗ್ಗೆ ಬಿಜೆಪಿ ನಾಯಕರಿಂದ ಪಾಠ ಹೇಳಿಸಿಕೊಳ್ಳಬೇಕಾದ ದರಿದ್ರ ಸ್ಥಿತಿ ನಮಗೆ ಬಂದಿಲ್ಲ. ಕನ್ನಡ ಮತ್ತು ಕನ್ನಡಿಗರ ಹಿತ ಕಾಯುವ ವಿಚಾರ ಬಂದಾಗ ರಾಜಕೀಯ ಬದಿಗಿಟ್ಟು, ಹೋರಾಟದ ಮೊದಲ ಸಾಲಿನಲ್ಲಿ ನಿಂತವನು ನಾನು. ಇದಕ್ಕೆ ಇತಿಹಾಸ ಸಾಕ್ಷಿ. ಕನ್ನಡ ಕಾವಲು ಸಮಿತಿಯ ಅಧ್ಯಕ್ಷನಾಗಿಯೇ ರಾಜಕೀಯ ಜೀವನಕ್ಕೆ ಕಾಲಿರಿಸಿದ ನನಗೆ ಕನ್ನಡ ಬರಿ ಭಾಷೆಯಲ್ಲ, ಬದುಕು ಹೌದು. ಜೈ ಕರ್ನಾಟಕ, ಜೈ ಕನ್ನಡ.. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಪ್ರತಿಕ್ರಿಯೆಗೆ ಕನ್ನಡಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಮಾಡಲಿಲ್ಲ: ಸಿದ್ದರಾಮಯ್ಯ

ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧ ಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು 2 ಕೋಟಿ ಉದ್ಯೋಗ ನೀಡುವುದಾಗಿ ತಿಳಿಸಿದರೇ ಹೊರತು, ಯಾರಿಗೂ ಉದ್ಯೋಗ ದೊರೆಯಲಿಲ್ಲ. ರಾಜ್ಯದಲ್ಲಿ ಬಿಜೆಪಿಯವರು ಆಡಳಿತ ನಡೆಸಿದ ಸಂದರ್ಭದಲ್ಲಿ ಯಾವುದೇ ಉದ್ಯೋಗಗಳನ್ನು ನೀಡಲಿಲ್ಲ. ಆದ್ದರಿಂದ ನಮ್ಮ ಸರ್ಕಾರವನ್ನು ಪ್ರಶ್ನಿಸಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ.

ಸರ್ಕಾರಿ ನೇಮಕಾತಿಗಳಲ್ಲಿ ಒಳಮೀಸಲಾತಿಯ ಸಮಸ್ಯೆಯಿಂದ ವಿಳಂಬವಾಗಿತ್ತಾದರೂ, ಸದ್ಯದಲ್ಲಿಯೇ ನೇಮಕಾತಿಯನ್ನು ಪ್ರಾರಂಭಿಸಿ, ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ನಮ್ಮ ಸರ್ಕಾರ ನುಡಿದಂತೆ ನಡೆದು ಸರ್ಕಾರಿ ನೇಮಕಾತಿಗಳನ್ನು ಮಾಡಲಿದ್ದು, ಈ ಬಗ್ಗೆ ಬಜೆಟ್‌ನಲ್ಲಿಯೂ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/urdu-advertisement-row-siddaramaiah-slams-bharatiya-janata-party-hypocrisy-as-embarrassing-445217.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo