ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ | R Ashoka Slams Siddaramaiah Over rs10 Crore Special Grant to Wayanad Kerala Amid Karnataka’s Issues

Karnataka

oi-Shankrappa Parangi

ಬೆಂಗಳೂರು: ನಗರದ ಯಲಹಂಕ ಕೋಗಿಲು ಬಡಾವಣೆ ಅಕ್ರಮ ವಲಸಿಗರ ವಿಚಾರದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರತಿಕ್ರಿಯಿಸಿದ್ದರು. ಈ ವಿಚಾರದಲ್ಲಿ ಕರ್ನಾಟಕ ಸರ್ಕಾರ ತೆಗೆದುಕೊಂಡ ನಿರ್ಧಾರ ವ್ಯಾಪಕ ಚರ್ಚೆಗೆ, ವಿಪಕ್ಷ ನಾಯಕರ ಟೀಕೆಗೆ ಗುರಿಯಾಗಿತ್ತು. ಇದೀಗ ಕೇರಳ ಚುನಾವಣೆ ಹೊತ್ತಿನಲ್ಲಿ ಆ ರಾಜ್ಯದ ಲೋಕಸಭಾ ಕ್ಷೇತ್ರವೊಮದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬರೋಬ್ಬರಿ 10 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಿದ್ದು ಖಂಡನೀಯ ಎಂದು ವಿಪಕ್ಷ ನಾಯಕರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಮೊದಲು ಕರ್ನಾಟಕದ ಸಮಸ್ಯೆಗೆ ಕಿವಿ ಕೊಡಿ ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳಂ ರಾಜ್ಯದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ಹೆಚ್ಚುವರಿ ವಿಶೇಷ ಅನುದಾನ ನೀಡಿರುವ ಕೇರಳಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವರಿಗೆ ಅಭಿನಂದನೆಗಳು’ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಕಾರಿದ್ದಾರೆ. ನೀವು ಕರ್ನಾಟಕದ ಸಿಎಂ ಅಲ್ಲ, ಕೇರಳದ ಮುಖ್ಯಮಂತ್ರಿ ಎಂದು ಎಕ್ಸ್‌ ಪೊಸ್ಟ್ ಮಾಡಿ ಅವರು ಲೇವಡಿ ಮಾಡಿದ್ದಾರೆ.

R Ashoka

ರಾಜ್ಯದ ಕನ್ನಡಿಗರು ನತದೃಷ್ಟರು

ಕೇರಳಂ ಮುಖ್ಯಮಂತ್ರಿ ಸಿದ್ದರಾಮಯ್ಯನವರಂತಹ ಹೃದಯ ವೈಶಾಲ್ಯ ಇರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಕ್ಕುತ್ತಿತ್ತು. ಆದರೆ ನತದೃಷ್ಟ ಕನ್ನಡಿಗರು ಕೇರಳಂನವರಷ್ಟು ಅದೃಷ್ಟವಂತರಲ್ಲ ಬಿಡಿ! ಎಂದು ಸಿಎಂ ಸಿದ್ದರಾಮಯ್ಯರ ಅನುದಾನ ನಿರ್ಧಾರವನ್ನು ಖಂಡಿಸಿದ್ದಾರೆ.

2025-26ನೇ ಕಳೆದ ಹಣಕಾಸು ವರ್ಷದಲ್ಲಿ ಬಜೆಟ್ ಹೊರತಾಗಿ ವೆಚ್ಚ ಮಾಡಿರುವ ಮತ್ತು ಮಾಡಲಾಗುವ 14,767 ಕೋಟಿ ರೂಪಾಯಿ ಮೊತ್ತದ 3ನೇ ಮತ್ತು ಅಂತಿಮ ಕಂತಿನ ಪೂರಕ ಅಂದಾಜಿನಲ್ಲಿ ವಯನಾಡಿನ ಮುಪ್ಪಾಡಿಯಲ್ಲಿ ಉಂಟಾದ ಭೂಕುಸಿತದಿಂದ ಹಾನಿಗೊಳಗಾದ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ 10 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಿದೆ ಎಂದು ಅವರು ವಿವರಿಸಿದರು.

ಕರ್ನಾಕಟದ ಸಮಸ್ಯೆಗಳತ್ತ ಗಮನ ಕೊಡಿ

ಒಂದು ಕಡೆ ನಮ್ಮದೇ ರಾಜ್ಯದಲ್ಲಿ ಕಸ ವಿಲೇವಾರಿ ಮಾಡುವ ಸಂಸ್ಥೆಗಳಿಗೆ, ಸರ್ಕಾರಿ ನೌಕರರ ಸಂಬಳಕ್ಕೆ, ಗುತ್ತಿದೆಗಾರರ ಬಾಕಿ ಪಾವತಿ ಮಾಡಲು ಹಣವಿಲ್ಲ. ಸರ್ಕಾರಿ ಶಾಲೆಗಳ ದುರಸ್ತಿಗೆ, ಸರಿಯಾದ ಸಮಯಕ್ಕೆ ಮಕ್ಕಳ ಪಠ್ಯಪುಸ್ತಕ, ಯುನಿಫಾರ್ಮ್, ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ನೀಡಲು ದುಡ್ಡಿಲ್ಲ. ಆಸ್ಪತ್ರೆಗಳಲ್ಲಿ ಔಷಧಿಗಳಿಲ್ಲ, ಸ್ಕ್ಯಾನಿಂಗ್ ಸೇವೆ ಒದಗಿಸುವ ಕಂಪನಿಗಳ ಬಿಲ್ ಪಾವತಿಗೆ ಹಣವಿಲ್ಲ. ಶಾಸಕರಿಗೆ ಕ್ಷೇತ್ರದ ಯೋಜನೆ ಮತ್ತು ಅಭಿವೃದ್ಧಿಗೆ ಅನುದಾನವಿಲ್ಲ.

R Ashoka

ರಾಜ್ಯದ ಹಣಕಾಸು ಪರಿಸ್ಥಿತಿಯೇ ಇಷ್ಟು ಚಿಂತಾಜನಕವಾಗಿರುವಾಗ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ, ನೆರೆ ರಾಜ್ಯಕ್ಕೆ 10 ಕೋಟಿ ಹೆಚ್ಚುವರಿ ನೆರವು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ಲಜ್ಜತೆ, ಭಂಡತನಕ್ಕೆ ಅವರೇ ಸಾಟಿ ಎಂದು ಅವರು ವಾಗ್ದಾಳಿ ನಡೆಸಿದರು.

ಕೇರಳ ರಾಜಕೀಯಕ್ಕೆ ತುಪ್ಪ ಸುರಿದ ಸಿದ್ದರಾಮಯ್ಯ

ಕನ್ನಡಿಗರ ರಕ್ತ ಹೀರಿ ಬೇರೆ ರಾಜ್ಯದ ರಾಜಕೀಯಕ್ಕೆ ತುಪ್ಪ ಸುರಿಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಮಾನ-ಮರ್ಯಾದೆ ಇದೆಯೇ ಎಂಬುದು ಸಮಸ್ತ ಕನ್ನಡಿಗರ ಪ್ರಶ್ನೆಯಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ಕಿಡಿ ಕಾರಿದ್ದಾರೆ.

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ, ರಸ್ತೆಗಳಲ್ಲಿ ಗುಂಡಿ ಬಿದ್ದಿವೆ, ರೈತರು ಸಾಲಬಾಧೆಯಿಂದ ಸಾಯುತ್ತಿದ್ದಾರೆ. ಆದರೂ ಕೇರಳಂ ಚುನಾವಣಾ ಗಿಮಿಕ್‌ಗಾಗಿ, ಕನ್ನಡಿಗರ ಕೋಟಿ ಕೋಟಿ ಹಣ ಸುರಿಯಲು ನಿಮಗೆ ಯಾವ ನೈತಿಕತೆ ಇದೆ? ಇದು ಕನ್ನಡಿಗರಿಗೆ ಮಾಡುತ್ತಿರುವ ದ್ರೋಹವಲ್ಲದೆ ಮತ್ತೇನು? ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ.

ನನ್ನ ತೆರಿಗೆ ನನ್ನ ಹಕ್ಕು ಎಂದಿದ್ದ ಸಿದ್ದರಾಮಯ್ಯ!

ಕರ್ನಾಟಕ ಸರ್ಕಾರವು ಪೂರಕ ಅಂದಾಜುಗಳನ್ನು ಮಂಡಿಸಿದೆ, ಇದರಲ್ಲಿ ಕೇರಳ ಚುನಾವಣೆ ಹೊತ್ತಿನಲ್ಲಿ ಪ್ರಿಯಾಂಕಾ ಗಾಂಧಿ ಅವರ ವಯನಾಡಿಗೆ 10 ಕೋಟಿ ರೂ.ಗಳ ಹೆಚ್ಚುವರಿ ಅನುದಾನ ಸಿಎಂ ಸಿದ್ದರಾಮಯ್ಯ ಅವರು ಒದಗಿಸಿದ್ದಾರೆ. “ನನ್ನ ತೆರಿಗೆ, ನನ್ನ ಹಕ್ಕು” ಎಂದು ಗುಡುಗಿದ್ದ ಇದೇ ಸಿದ್ದರಾಮಯ್ಯ ಅವರು ಈಗ ತನ್ನ ಸ್ವಂತ ಕುರ್ಚಿಯನ್ನು ಉಳಿಸಿಕೊಳ್ಳಲು ಬೇರೆ ರಾಜ್ಯದ ಮತದಾರರಿಗೆ ಚೆಕ್ ಬರೆಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಬಿ.ವೈ.ವಿಜಯೇಂದ್ರ ಗುಡುಗಿದ್ದಾರೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/r-ashoka-slams-siddaramaiah-over-rs10-crore-special-grant-to-wayanad-kerala-amid-karnatakas-issues-448149.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo