ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್‌ ಗೆಲುವು ಎಂದ ಡಿ.ಕೆ.ಶಿವಕುಮಾರ್ | Bagalkot Davanagere Assembly Bypolls Congress Confident of Big Win Says Deputy CM DK Shivakumar

Karnataka

oi-Manohara M

ಬೆಂಗಳೂರು: ಕರ್ನಾಟಕದ ಎರಡು ಪ್ರಮುಖ ಕ್ಷೇತ್ರಗಳಾದ ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ನಾವು ಜಂಟಿಯಾಗಿ ಸುದೀರ್ಘ ಚರ್ಚೆ ನಡೆಸಿ ಈ ತೀರ್ಮಾನಕ್ಕೆ ಬಂದಿದ್ದೇವೆ. ಈ ಬಾರಿ ಕಾಂಗ್ರೆಸ್ ಪಕ್ಷವು ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ ಎಂಬ ಆತ್ಮವಿಶ್ವಾಸ ನನಗಿದೆ ಎಂದಿದ್ದಾರೆ.

ಮೇಟಿ ಪುತ್ರ ಉಮೇಶ್‌ಗೆ ಟಿಕೆಟ್

ಬಾಗಲಕೋಟೆ ಕ್ಷೇತ್ರದಿಂದ ದಿವಂಗತ ಎಚ್.ವೈ.ಮೇಟಿ ಅವರ ಪುತ್ರ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ. ಈ ಆಯ್ಕೆಗೆ ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ಹಸಿರು ನಿಶಾನೆ ತೋರಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಅವರಿಗೆ ಅಧಿಕೃತವಾಗಿ ಟಿಕೆಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉಮೇಶ್ ಮೇಟಿ ಅವರ ಪರವಾಗಿ ಪಕ್ಷದ ಮುಖಂಡರಾದ ಮಂಜುನಾಥ್ ಅವರಿಗೆ ‘ಬಿ-ಫಾರ್ಮ್’ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಭ್ಯರ್ಥಿಯ ಗೆಲುವಿಗೆ ಶುಭ ಹಾರೈಸಿದ ಅವರು, ಪಕ್ಷದ ಸಂಘಟಿತ ಹೋರಾಟದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

Bagalkot Davanagere Assembly Bypolls

ಹಿರಿಯ ನಾಯಕ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಅವರ ಪುತ್ರ ಉಮೇಶ್ ಮೇಟಿ ಅವರನ್ನೇ ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ಅನುಕಂಪದ ಅಲೆ ಹಾಗೂ ಸ್ಥಳೀಯ ಬೆಂಬಲದ ನಿರೀಕ್ಷೆಯಲ್ಲಿದೆ. ದೆಹಲಿ ಮಟ್ಟದಲ್ಲಿ ನಡೆದ ಸುದೀರ್ಘ ಚರ್ಚೆಯ ನಂತರ ಹೈಕಮಾಂಡ್ ಉಮೇಶ್ ಮೇಟಿ ಹೆಸರನ್ನು ಅಂತಿಮಗೊಳಿಸಿದೆ. ಬಾಗಲಕೋಟೆಯಲ್ಲಿ ಉಮೇಶ್ ಮೇಟಿ ಅವರ ಗೆಲುವು ನಿಶ್ಚಿತ. ಪಕ್ಷದ ಮುಖಂಡ ಮಂಜುನಾಥ್ ಅವರ ಕೈಗೆ ಬಿ-ಫಾರ್ಮ್ ನೀಡಲಾಗಿದ್ದು, ಇಡೀ ಕಾಂಗ್ರೆಸ್ ತಂಡ ಒಗ್ಗಟ್ಟಿನಿಂದ ಕೆಲಸ ಮಾಡಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಶಾಮನೂರು ಮೊಮ್ಮಗನಿಗೆ ದಾವಣಗೆರೆ ಟಿಕೆಟ್

ದಾವಣಗೆರೆ ಕ್ಷೇತ್ರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿದ್ದ ಹಾಗೂ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಂತೋಷ್ ಸಾಮತ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಶಾಮನೂರು ಶಿವಶಂಕರಪ್ಪ ಅವರು ಪಕ್ಷದ ಎಲ್ಲಾ ಬಿಕ್ಕಟ್ಟಿನ ಸಮಯದಲ್ಲೂ ಗಟ್ಟಿಯಾಗಿ ನಿಂತಿರುವ ಮಹಾನ್ ನಾಯಕರು. ಅವರ ಕುಟುಂಬದ ಕುಡಿಗೆ ಈ ಬಾರಿ ಅವಕಾಶ ನೀಡಲಾಗಿದೆ ಎಂದೂ ಡಿ.ಕೆ.ಶಿವಕುಮಾ ರ್ ಸ್ಪಷ್ಟಪಡಿಸಿದ್ದಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಯನ್ನು ಅಂತಿಮಗೊಳಿಸಿದ್ದು, ಇಂದು ಅಭ್ಯರ್ಥಿಗಳ ಪರವಾಗಿ ಬಿ-ಫಾರಂಗಳನ್ನು ಹಸ್ತಾಂತರಿಸುವ ಮೂಲಕ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಮಲ್ಲಿಕಾರ್ಜುನ ಅವರ ಹೆಸರನ್ನು ಘೋಷಿಸಲಾಗಿದೆ. ಇಂದು ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಹಿರಿಯ ನಾಯಕ ಹಾಗೂ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರಿಗೆ ಅಭ್ಯರ್ಥಿಯ ಪರವಾಗಿ ಬಿ-ಫಾರಂ ಹಸ್ತಾಂತರಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೆಲುವಿಗೆ ಶುಭ ಹಾರೈಸಿದರು. ಶಾಮನೂರು ಶಿವಶಂಕರಪ್ಪ ಅವರ ಕುಟುಂಬದ ಕುಡಿಗೆ ಈ ಬಾರಿ ಮಣೆ ಹಾಕುವ ಮೂಲಕ ಕ್ಷೇತ್ರದಲ್ಲಿ ಭದ್ರವಾದ ಅಡಿಪಾಯ ಹಾಕಲು ಕಾಂಗ್ರೆಸ್ ನಿರ್ಧರಿಸಿದೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/bagalkot-davanagere-assembly-bypolls-congress-confident-of-big-win-says-deputy-cm-dk-shivakumar-447967.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo