ಭಾರತದಲ್ಲಿ ಇಂಧನ ಭದ್ರತೆಗೆ ಒತ್ತು, ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ: ಮೋದಿ ನೇತೃತ್ವದಲ್ಲಿ ಸಭೆ, ಹಲವು ಮಹತ್ವದ ತೀರ್ಮಾನ | Narendra Modi Chairs High Level Meeting on Indias Energy Security Amid West Asia Tensions petroleum

India

oi-Manohara M

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧ ಸದೃಶ್ಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭದ್ರತಾ ಸಂಪುಟ ಸಮಿತಿಯ ಮಹತ್ವದ ಸಭೆ ನಡೆಸಿದರು. ಸಂಘರ್ಷದಿಂದ ಭಾರತದಲ್ಲಿ ಇಂಧನ ಮತ್ತು ರಸಗೊಬ್ಬರ ವಲಯಗಳ ಮೇಲೆ ಉಂಟಾಗಬಹುದಾದ ಪರಿಣಾಮಗಳನ್ನು ಎದುರಿಸಲು ಪ್ರಧಾನಿ ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಯಿತು. ದೇಶದ ಪೆಟ್ರೋಲಿಯಂ, ಕಚ್ಚಾ ತೈಲ, ನೈಸರ್ಗಿಕ ಅನಿಲ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಸ್ಥಿತಿಗತಿಗಳನ್ನು ಪರಾಮರ್ಶಿಸಿದರು.

ಸಭೆಯ ಪ್ರಮುಖ ನಿರ್ಧಾರಗಳು

ದೇಶದಲ್ಲಿ ವಿದ್ಯುತ್ ಅಭಾವ ಉಂಟಾಗದಂತೆ ನೋಡಿಕೊಳ್ಳಲು ಎಲ್ಲ ವಿದ್ಯುತ್ ಸ್ಥಾವರಗಳಲ್ಲಿ ಪೂರೈಕೆಗೆ ಅಗತ್ಯವಿರುವಷ್ಟು ಕಲ್ಲಿದ್ದಲು ದಾಸ್ತಾನು ಇರುವುದನ್ನು ಖಚಿತಪಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಸರ್ಕಾರ ಸರ್ವ ಸನ್ನದ್ಧವಾಗಿದೆ. ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ಸ್ ಸೇರಿದಂತೆ ವಿವಿಧ ಕೈಗಾರಿಕಾ ವಲಯಗಳಿಗೆ ಅಗತ್ಯವಿರುವ ಕಚ್ಚಾ ವಸ್ತುಗಳ ಆಮದನ್ನು ಕೇವಲ ಒಂದು ಪ್ರದೇಶಕ್ಕೆ ಸೀಮಿತಗೊಳಿಸದೆ, ಪರ್ಯಾಯ ದೇಶಗಳಿಂದ ಆಮದು ಮಾಡಿಕೊಳ್ಳುವ ಬಗ್ಗೆ ಚರ್ಚಿಸಲಾಗಿದೆ. ಹಾಗೆಯೇ ಭಾರತೀಯ ಉತ್ಪನ್ನಗಳ ರಫ್ತಿಗೆ ಹೊಸ ಮಾರುಕಟ್ಟೆಗಳನ್ನು ಕಂಡುಕೊಳ್ಳಲು ಪ್ರಧಾನಿ ಮೋದಿ ಸೂಚಿಸಿದ್ದಾರೆ.

Narendra Modi

ಯುದ್ಧದ ನೆಪದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಅಥವಾ ಕಾಳಸಂತೆ ನಡೆಯದಂತೆ ರಾಜ್ಯ ಸರ್ಕಾರಗಳೊಂದಿಗೆ ಸಮನ್ವಯ ಸಾಧಿಸಲು ಪ್ರಧಾನಿ ಮೋದಿ ತಿಳಿಸಿದ್ದಾರೆ. ಅಕ್ರಮ ದಾಸ್ತಾನು ಮಾಡಿಕೊಳ್ಳುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಈ ಪರಿಸ್ಥಿತಿಯನ್ನು ನಿಭಾಯಿಸಲು ‘ಹೋಲ್ ಆಫ್ ಗವರ್ನಮೆಂಟ್’ ಮಾದರಿಯಲ್ಲಿ ಸಚಿವರು ಮತ್ತು ಕಾರ್ಯದರ್ಶಿಗಳ ವಿಶೇಷ ಸಮಿತಿಯನ್ನು ರಚಿಸಲು ಪ್ರಧಾನಿ ಆದೇಶಿಸಿದ್ದಾರೆ. ಈ ಗುಂಪು ಎಲ್ಲ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಿದೆ ಎಂದಿದ್ದಾರೆ.

ನಾಗರಿಕರ ಹಿತರಕ್ಷಣೆ ಆದ್ಯತೆ

“ಪಶ್ಚಿಮ ಏಷ್ಯಾ ಸಂಘರ್ಷವು ಇಡೀ ಜಗತ್ತಿನ ಮೇಲೆ ಪರಿಣಾಮ ಬೀರುತ್ತಿದೆ. ಇಂತಹ ಸಮಯದಲ್ಲಿ ನಮ್ಮ ನಾಗರಿಕರನ್ನು ಸಂಕಷ್ಟದಿಂದ ರಕ್ಷಿಸುವುದು ಸರ್ಕಾರದ ಮೊದಲ ಕರ್ತವ್ಯ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಸರ್ಕಾರದ ಎಲ್ಲ ಅಂಗಗಳು ಒಗ್ಗಟ್ಟಿನಿಂದ ಕೆಲಸ ಮಾಡಿ ಸಾರ್ವಜನಿಕರಿಗೆ ಕನಿಷ್ಠ ತೊಂದರೆಯಾಗುವಂತೆ ನೋಡಿಕೊಳ್ಳಲು ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಳಿತಗಳನ್ನು ನಿರಂತರವಾಗಿ ಗಮನಿಸಲು ಮತ್ತು ದೇಶೀಯ ಮಾರುಕಟ್ಟೆಯ ಮೇಲೆ ಅದರ ಪ್ರಭಾವ ತಗ್ಗಿಸಲು ಅಗತ್ಯವಿರುವ ಆರ್ಥಿಕ ಕ್ರಮಗಳ ಬಗ್ಗೆ ಹಣಕಾಸು ಮತ್ತು ಇಂಧನ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಯುದ್ಧದ ಕಾರಣದಿಂದ ಕಲ್ಲಿದ್ದಲು ಅಥವಾ ಇಂಧನ ಬೆಲೆ ಏರಿಕೆಯಾದರೂ ದೇಶದ ವಿದ್ಯುತ್ ಸ್ಥಾವರಗಳಿಗೆ ಯಾವುದೇ ಅಡೆತಡೆಯಿಲ್ಲದೆ ಇಂಧನ ಪೂರೈಕೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ರೈತರಿಗೆ ರಸಗೊಬ್ಬರದ ಕೊರತೆಯಾಗದಂತೆ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾದರೂ ಅದರ ಹೊರೆ ದೇಶದ ರೈತರ ಮೇಲೆ ಬೀಳದಂತೆ ಸಬ್ಸಿಡಿ ಮತ್ತು ಪರ್ಯಾಯ ಆಮದು ಮಾರ್ಗಗಳ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು.

Disclaimer: This content was automatically imported from a third-party source via RSS feed. The original source is: https://kannada.oneindia.com/news/india/narendra-modi-chairs-high-level-meeting-on-indias-energy-security-amid-west-asia-tensions-petroleum-447981.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo