ರಾಜ್ಯದಲ್ಲಿ 16 ವರ್ಷದೊಳಗಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ: ಸಚಿವ ಮಧು ಬಂಗಾರಪ್ಪ ಮಹತ್ವದ ಮಾಹಿತಿ | Karnataka Government Mulls Ban on Mobile Phones for Students Below 16 Says Minister Madhu Bangarappa

Karnataka

oi-Madhusudhan KR

ಬೆಂಗಳೂರು, ಫೆಬ್ರವರಿ 27: ರಾಜ್ಯದಲ್ಲಿ 16 ವರ್ಷದ ಒಳಗಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮೊಬೈಲ್‌ ನಿಷೇಧ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದರು. ಇದೀಗ ಈ ಕುರಿತು ಮಾಯನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಹಾಗಾದ್ರೆ, ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯದಲ್ಲಿ 16 ವರ್ಷದೊಳಗಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣ ಬಳಕೆ ನಿಷೇಧಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಮಕ್ಕಳು, ಪೋಷಕರು ಮತ್ತು ತಜ್ಞರ ಅಭಿಪ್ರಾಯ ಪಡೆದು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

Karnataka Government Mulls Ban on Mobile Phones for Students Below 16 Says Minister Madhu Bangarappa

‘ಮೊಬೈಲ್ ಬಿಡಿ, ಪುಸ್ತಕ ಹಿಡಿ’ ಆಂದೋಲನ

ಮಕ್ಕಳಿಗೆ ಮೊಬೈಲ್ ಕೊಡುವವರೇ ಪೋಷಕರು. ಮೊಬೈಲ್ ಬಳಕೆ ಮತ್ತು ಸಾಮಾಜಿಕ ಜಾಲತಾಣಗಳಿಂದ ಮಕ್ಕಳು ದಾರಿ ತಪ್ಪುತ್ತಿರುವುದು ಇಡೀ ದೇಶದ ಸಮಸ್ಯೆ ಆಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ‘ಮೊಬೈಲ್ ಬಿಡಿ, ಪುಸ್ತಕ ಹಿಡಿ’ ಆಂದೋಲನ ರೂಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು, ಪೋಷಕರಿಂದ ಅಭಿಪ್ರಾಯ ಸಂಗ್ರಹ

ಮೊಬೈಲ್ ಬಳಕೆಯನ್ನು ನಿಯಂತ್ರಿಸುವ ವಿಷಯವನ್ನು ಕೇವಲ ತರಗತಿ ಕೊಠಡಿಗಳ ಮಟ್ಟಿಗೆ ಸೀಮಿತಗೊಳಿಸದೆ, ಜವಾಬ್ದಾರಿಯುತವಾಗಿ ಮತ್ತು ಸಮಗ್ರವಾಗಿ ಜಾರಿಗೆ ತರಬೇಕೆಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಈ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳುವ ಮೊದಲು ವಿದ್ಯಾರ್ಥಿಗಳು, ಪೋಷಕರು, ಶಿಕ್ಷಣ ತಜ್ಞರು ಮತ್ತು ಮನೋವೈದ್ಯರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುವುದು ಎಂದು ಹೇಳಿದ್ದಾರೆ.

ಸರ್ಕಾರದ ಉದ್ದೇಶ ಸಂಪೂರ್ಣ ನಿಷೇಧಕ್ಕಿಂತಲೂ, ಸಮತೋಲನ ಸಾಧಿಸುವತ್ತ ಇದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಶಿಕ್ಷಣಕ್ಕೆ ಅಗತ್ಯವಿರುವ ಡಿಜಿಟಲ್ ಉಪಕರಣಗಳ ಬಳಕೆಯನ್ನು ಉತ್ತೇಜಿಸುತ್ತಾ, ಅತಿಯಾದ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಕಡಿಮೆ ಮಾಡುವ ಉದ್ಧೇಶದಿಂದ ಮಾರ್ಗಸೂಚಿಗಳು ರೂಪುಗೊಳ್ಳುವ ಸಾಧ್ಯತೆಯಿ ಎನ್ನಲಾಗುತ್ತಿದೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/karnataka-government-mulls-ban-on-mobile-phones-for-students-below-16-says-minister-madhu-bangarappa-445305.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo