ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆ OPD ಸೇವೆ ಬಂದ್? ವೈದ್ಯರ ರಾಜ್ಯವ್ಯಾಪಿ ಪ್ರತಿಭಟನೆ | Karnataka Govt Doctors Protest from March 11; OPD Services May Shut in State Hospitals

Karnataka

oi-Shiddalingesh S

ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಮಾರ್ಚ 11 ರಿಂದ ರಾಜ್ಯಾದಂತ್ಯ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದ ಜಿಲ್ಲಾ ಆಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಹಾಗು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೊರ ರೋಗಿಗಳ ಸೇವೆ(ಓಪಿಡಿ) ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಇದರಿಂದ ಸಾಮಾನ್ಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುತ್ತಿರುವ ರೋಗಿಗಳಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ.

ಸರ್ಕಾರಿ ವೈದ್ಯರ ಸಂಘವು ಕಳೆದ ಹಲವು ದಿನಗಳಿಂದ ಸರ್ಕಾರದ ಗಮನಕ್ಕೆ ತಮ್ಮ ಸಮಸ್ಯೆಗಳನ್ನು ತಂದಿದ್ದರೂ, ಇನ್ನೂ ಸ್ಪಷ್ಟವಾದ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ ಈ ರೀತಿಯ ಪ್ರತಿಭಟನೆಗೆ ಮುಂದಾಗಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ತಮ್ಮ ಅಸಮಾಧಾನವನ್ನು ವ್ಯಕ್ತಡಿಸುವ ಉದ್ದೇಶದಿಂದ ವೈದ್ಯರು ಕರ್ತವ್ಯದ ವೇಳೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಲಿದ್ದಾರೆ.

Karnataka Govt Doctors Protest

ವೈದ್ಯರ ಪ್ರಕಾರ, ರಾಜ್ಯದಲ್ಲಿ ಹಲವಾರು ಸರ್ಕಾರಿ ಅಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಹೆಚ್ಚಾಗಿದೆ. ಅನೇಕ ಹುದ್ದೆಗಳು ಖಾಲಿಯಾಗಿರುವುದರಿಂದ ಕೆಲಸದ ಒತ್ತಡ ಹೆಚ್ಚಿದ್ದು, ಇದರಿಂದ ಸೇವೇಯ ಗುಣಮಟ್ಟಕ್ಕೂ ಪರಿಣಾಮ ಬೀಳುತ್ತಿದೆ. ಈ ಹಿನ್ನಲೆಯಲ್ಲಿ ವೇತನ ಶ್ರೇಣಿಯ ಸುಧಾರಣೆ, ಖಾಲಿ ಇರುವ ವೈದ್ಯರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವುದು ಹಾಗೂ ಕೆಲಸದ ಒತ್ತಡ ಕಡಿಮೆ ಮಾಡುವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ವೈದ್ಯರ ಪ್ರಮುಖ ಬೇಡಿಕೆಗಳಾಗಿದೆ.

ಇದರ ಜೊತೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಆಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವುದು, ಅಗತ್ಯ ಉಪಕರಣಗಳನ್ನು ಒದಗಿಸುವುದು ಹಾಗೂ ವೈದ್ಯಕೀಯ ಮೂಲಸೌಕರ್ಯವನ್ನು ಬಲಪಡಿಸುವುದು ಕೂಡ ಅವಶ್ಯಕವಾಗಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ವೈದ್ಯರ ಮೇಲಿನ ಹಲ್ಲೆಗಳ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈದ್ಯರ ಸುರಕ್ಷತೆಗಾಗಿ ಕಠಿಣ ಕಾನೂನು ಜಾರಿಗೊಳಿಸಿ ರಕ್ಷಣೆ ಒದಗಿಸಬೇಕು ಎಂದು ಕೂಡ ಅವರು ಆಗ್ರಹಿಸಿದ್ದಾರೆ.

ನಾಳೆ ಲಭ್ಯವಿರುವ ಸೇವೆಗಳು

ತುರ್ತು ಚಿಕಿತ್ಸೆ (Emergency) – ಲಭ್ಯ
ಐಸಿಯು (ICU) ಸೇವೆಗಳು – ಲಭ್ಯ
ಹೆರಿಗೆ ಸೇವೆಗಳು (Labor Room) – ಲಭ್ಯ

ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಲವು ಸೇವೆಗಳು ಸ್ಥಗಿತಗೊಳ್ಳಲಿದ್ದರೂ ಸಾರ್ವಜನಿಕರ ಹಿತದೃಷ್ಟಿಯಿಂದ ತುರ್ತು ಆರೋಗ್ಯ ಸೇವೆಗಳು ಮುಂದುವರಿಯಲಿವೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಹೊರ ರೋಗಿಗಳ ವಿಭಾಗ (OPD)

ಇದೇ ವೇಳೆ ಖಾಸಗಿ ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಹಿಸಲಿದ್ದು, ತುರ್ತು ಚಿಕಿತ್ಸೆ ಅಗತ್ಯವಿರುವವರು ಅಥವಾ ಸಾಮಾನ್ಯ ಚಿಕಿತ್ಸೆಗಾಗಿ ಹೋಗುವವರು ಅವುಗಳ ಸೇವೆಯನ್ನು ಬಳಸಿಕೊಳ್ಳಬಹುದಾಗಿದೆ.

ಸರ್ಕಾರಿ ವೈದ್ಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪರ್ಯಾಯ ವ್ಯವಸ್ಥೆಗಳ ಕುರಿತು ಚರ್ಚೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ. ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ಸಮಸ್ಯೆಯನ್ನು ಶೀಘ್ರ ಪರಿಹರಿಸಲು ಸರ್ಕಾರ ಮತ್ತು ವೈದ್ಯರ ಸಂಘದ ನಡುವೆ ಮಾತುಕತೆ ನಡೆಯುವ ಸಾಧ್ಯತೆಯೂ ಇದೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/karnataka-govt-doctors-protest-from-march-11-opd-services-may-shut-in-state-hospitals-446623.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo