
Entertainment
oi-Manohara M
ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಮದುವೆ ಕುರಿತ ವದಂತಿಗಳು ಮತ್ತೆ ಬಿರುಸುಗೊಂಡಿವೆ. ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವರದಿಗಳ ಪ್ರಕಾರ, ಈ ಜೋಡಿ ಶೀಘ್ರದಲ್ಲೇ ರಾಜಸ್ಥಾನದ ಉದಯಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಇದೀಗ ರಶ್ಮಿಕಾ ಅವರ ಮದುವೆ ದಿನಾಂಕವನ್ನು ಬದಲಾವಣೆ ಮಾಡಿರುವ ಬಗ್ಗೆ ಹೊಸ ಸುದ್ದಿ ಹರಿದಾಡುತ್ತಿದೆ.
ಇತ್ತೀಚೆಗೆ ವೈರಲ್ ಆದ ವಿಡಿಯೋದಲ್ಲಿ ರಶ್ಮಿಕಾ-ವಿಜಯ್ ಅವರ ಮದುವೆ ಫೆಬ್ರವರಿ 26ರಂದು ನಡೆಯಲಿದೆ ಎಂಬ ಸುದ್ದಿ ಹರಡಿತ್ತು. ಆದರೆ ಇದೀಗ ಮಿಡ್-ಡೆ ವರದಿ ಪ್ರಕಾರ ಮದುವೆ ದಿನಾಂಕವನ್ನು ಬದಲಾಯಿಸಲಾಗಿದೆ ಎನ್ನಲಾಗಿದೆ. ಹೊಸ ಮಾಹಿತಿಯಂತೆ, ಫೆಬ್ರವರಿ 5ರಂದು ಮದುವೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ವಿಶೇಷವೆಂದರೆ, ಕುಟುಂಬದ ಜ್ಯೋತಿಷ್ಯರ ಸಲಹೆಯಂತೆ ಫೆಬ್ರವರಿ 26ನ್ನು ತಪ್ಪಿಸಿ, ಫೆಬ್ರವರಿ 5ರಂದು ಶುಭ ದಿನಾಂಕ ಆಯ್ಕೆ ಮಾಡಲಾಗಿದೆ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿವೆ.

ಇಂದಿನಿಂದಲೇ ಮದುವೆ ಕಾರ್ಯಕ್ರಮಗಳು?
ವರದಿಗಳ ಪ್ರಕಾರ, ಫೆಬ್ರವರಿ 2ರಿಂದಲೇ ರಶ್ಮಿಕಾ ಮದುವೆಗೆ ಸಂಬಂಧಿಸಿದ ಕಾರ್ಯಕ್ರಮಗಳು ಆರಂಭವಾಗಲಿವೆ. ಮೊದಲಿಗೆ ಸಂಗೀತ್, ಹಳದಿ ಹಾಗೂ ಮೆಹಂದಿ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆ ಇದೆ ಎನ್ನಲಾಗುತ್ತಿದೆ. ಈ ಕಾರ್ಯಕ್ರಮಗಳ ಬಳಿಕ ಮದುವೆ ನೆರವೇರಲಿದ್ದು, ನಂತರ ಆರತಕ್ಷತೆ ಕೂಡ ನಡೆಯಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.
ಯಾರಿಗೆಲ್ಲ ಆಹ್ವಾನ?
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಅತ್ಯಂತ ಖಾಸಗಿ ಕಾರ್ಯಕ್ರಮವಾಗಿರಲಿದೆ ಎಂದು ಮೂಲಗಳು ತಿಳಿಸಿವೆ. ಕೇವಲ ಕುಟುಂಬದ ಸದಸ್ಯರು ಮತ್ತು ಆಪ್ತ ಸ್ನೇಹಿತರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗುತ್ತದೆ. ಮದುವೆ ತೀರಾ ಅದ್ಧೂರಿಯಾಗಿರುವುದಿಲ್ಲ ಎಂದು ನಟನ ಆಪ್ತರು ಹೇಳಿರುವುದಾಗಿ ವರದಿಯಾಗಿದೆ. ಮತ್ತೊಂದು ಅಚ್ಚರಿ ವಿಚಾರವೆಂದರೆ ಮದುವೆಗೆ ಬೇಕಾದ ಹೂವಿನ ಅಲಂಕಾರಕ್ಕಾಗಿ ಬೆಂಗಳೂರಿನಿಂದಲೇ ದೊಡ್ಡ ಪ್ರಮಾಣದಲ್ಲಿ ಹೂಗಳನ್ನು ರಾಜಸ್ಥಾನಕ್ಕೆ ಕಳುಹಿಸಲಾಗುತ್ತಿದೆ ಎಂಬ ಮಾತುಗಳು ಕೂಡ ಹರಿದಾಡುತ್ತಿವೆ.
ಇತ್ತೀಚೆಗೆ ಉದಯಪುರದಲ್ಲಿ ಮದುವೆ ಸಿದ್ಧತೆ ನಡೆಯುತ್ತಿದೆ ಎನ್ನುವ ವೈರಲ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಆ ವಿಡಿಯೋವನ್ನು ಚಿತ್ರೀಕರಿಸಿದ್ದ ಯುವತಿ, ಇದು ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಅವರ ಮದುವೆಗೆ ಸಂಬಂಧಿಸಿದ ಸಿದ್ಧತೆ ಎಂದು ಹೇಳಿಕೊಂಡಿದ್ದರು. ಅಲ್ಲದೆ ಮದುವೆ ಫೆಬ್ರವರಿ 2ರಂದು ನಡೆಯಲಿದೆ ಎಂದೂ ಹೇಳಿಕೊಂಡಿದ್ದರು. ಆದರೆ ಆ ವಿಡಿಯೋ ನಿಜವಾಗಿಯೂ ಈ ಜೋಡಿಯ ಮದುವೆಗೆ ಸಂಬಂಧಪಟ್ಟಿದ್ದಾ? ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.
ಈ ಎಲ್ಲ ವರದಿಗಳು ಮತ್ತು ಗಾಸಿಪ್ಗಳ ನಡುವೆಯೂ ರಶ್ಮಿಕಾ ಮಂದಣ್ಣ ಅಥವಾ ವಿಜಯ್ ದೇವರಕೊಂಡ ಅವರ ತಂಡದಿಂದ ಮದುವೆ ಬಗ್ಗೆ ಇನ್ನೂ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಇಬ್ಬರೂ ತಮ್ಮ ವೈಯಕ್ತಿಕ ಜೀವನವನ್ನು ಖಾಸಗಿಯಾಗಿ ಇರಿಸಿಕೊಂಡಿದ್ದು, ಈ ಕಾರಣದಿಂದಲೇ ಮದುವೆ ವಿಚಾರದ ಬಗ್ಗೆ ಮೌನ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ದಕ್ಷಿಣ ಭಾರತದ ಟಾಪ್ ನಟರಲ್ಲೊಬ್ಬರಾದ ವಿಜಯ್ ದೇವರಕೊಂಡ ಹಾಗೂ ‘ನ್ಯಾಷನಲ್ ಕ್ರಶ್’ ಖ್ಯಾತಿಯ ರಶ್ಮಿಕಾ ಮಂದಣ್ಣ ಅವರ ಮದುವೆ ಸುದ್ದಿ ಅಭಿಮಾನಿಗಳಲ್ಲಿ ಭಾರೀ ಸಂಚಲನ ಮೂಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಇದೇ ಸುದ್ದಿ ಚರ್ಚೆಯಾಗುತ್ತಿದೆ. ಆದರೆ ಅಧಿಕೃತ ದೃಢೀಕರಣ ಬರುವವರೆಗೆ, ಈ ಎಲ್ಲವೂ ಕೇವಲ ಊಹಾಪೋಹಗಳಷ್ಟೇ ಎನ್ನುವುದು ಸತ್ಯ.
Disclaimer: This content was automatically imported from a third-party source via RSS feed. The original source is: https://kannada.oneindia.com/entertainment/rashmika-mandanna-wedding-with-vijay-deverakonda-date-changed-new-muhurta-this-month-report-442185.html. xn--babytilbehr-pgb.com does not claim ownership of this content. All rights remain with the original publisher.
