Gold Rate: ಮತ್ತೆ ಸತತ ಏರಿಕೆ ಕಂಡ ಚಿನ್ನ, ಬೆಳ್ಳಿ ದರ: ಫೆಬ್ರವರಿ 23ರ ಬೆಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ | Gold and Silver Rates Witness Huge Jump: Comprehensive Price List for February 23 Now Available

Business

oi-Pragathi S

ನವದೆಹಲಿ: ಜಾಗತಿಕ ಮಾರುಕಟ್ಟೆಯ ಏರಿಳಿತಗಳ ಬೆನ್ನಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಇಂದು ಚಿನ್ನದ ದರವು ಭಾರಿ ಜಿಗಿತ ಕಂಡಿದೆ. ಫೆಬ್ರವರಿ 23ರ ಸೋಮವಾರದಂದು ದೇಶದಾದ್ಯಂತ ಚಿನ್ನದ ಬೆಲೆಯಲ್ಲಿ ಗಣನೀಯ ಏರಿಕೆಯಾಗಿದೆ. ಹೂಡಿಕೆದಾರರಿಗೆ ಸಂತಸ ತಂದರೆ ಆಭರಣಪ್ರಿಯರಿಗೆ ಹೊಸ ಆತಂಕ ತಂದೊಡ್ಡಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೇಡಿಕೆ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯದ ವ್ಯತ್ಯಾಸಗಳು ಈ ಬೆಲೆ ಏರಿಕೆಗೆ ನೇರ ಕಾರಣವಾಗಿವೆ.

ಇಂದು ಭಾರತದಲ್ಲಿ ಪ್ರತಿ ಗ್ರಾಂ 24 ಕ್ಯಾರೆಟ್ (ಅಪ್ಪಟ ಚಿನ್ನ) ಬೆಲೆಯು 16,135 ರೂಪಾಯಿಗೆ ಏರಿಕೆಯಾಗಿದೆ. ಇದು ನಿನ್ನೆಯ ದರಕ್ಕಿಂತ 207 ರೂಪಾರಿಯಷ್ಟು ಹೆಚ್ಚಳವಾಗಿದೆ. ಅದೇ ರೀತಿ, ಆಭರಣ ತಯಾರಿಕೆಯಲ್ಲಿ ಹೆಚ್ಚಾಗಿ ಬಳಕೆಯಾಗುವ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 14,790 ರೂಪಾಯಿಗೆ ತಲುಪಿದ್ದು, 190 ರೂಪಾಯಿಯಷ್ಟು ಏರಿಕೆ ಕಂಡಿದೆ. ಇನ್ನು ಕಡಿಮೆ ಶುದ್ಧತೆಯ 18 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 12,101 ರೂಪಾಯಿಯಾಗಿದೆ.

Gold

ಭಾರತದ ವಿವಿಧ ನಗರಗಳಾದ ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈನಂತಹ ಮೆಟ್ರೋ ನಗರಗಳಲ್ಲಿ ಚಿನ್ನದ ದರವು ಹೆಚ್ಚು ಕಡಿಮೆ ಇದೇ ಮಾದರಿಯಲ್ಲಿದ್ದರೂ, ದಕ್ಷಿಣ ಭಾರತದ ನಗರಗಳಲ್ಲಿ ಬೇಡಿಕೆ ಹೆಚ್ಚಿರುವ ಕಾರಣ ಸಲ್ವ ಏರಿಕೆ ಕಂಡುಬಂದಿದೆ. 10 ಗ್ರಾಂ ಚಿನ್ನದ ಬೆಲೆಯು ಇಂದು ಸರಿಸುಮಾರು 1,61,350 ರೂ ಗಡಿ ದಾಟಿದೆ.

ಜಾಗತಿಕವಾಗಿ ಕೇಂದ್ರ ಬ್ಯಾಂಕ್‌ಗಳು ಚಿನ್ನದ ದಾಸ್ತಾನು ಹೆಚ್ಚಿಸಿಕೊಳ್ಳುತ್ತಿರುವುದು ಮತ್ತು ಮಧ್ಯಪ್ರಾಚ್ಯದಲ್ಲಿನ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಕೂಡ ಬೆಲೆ ಏರಿಕೆಗೆ ಪುಷ್ಟಿ ನೀಡುತ್ತಿವೆ. ಇದರ ಜೊತೆಗೆ ಭಾರತದಲ್ಲಿ ಮದುವೆ ಸಮಾರಂಭಗಳ ಸೀಸನ್ ಆರಂಭವಾಗುತ್ತಿರುವುದರಿಂದ ಸ್ಥಳೀಯವಾಗಿ ಬೇಡಿಕೆ ಹೆಚ್ಚುತ್ತಿರುವುದು ಕೂಡ ದರ ಏರಿಕೆಗೆ ಪೂರಕ ಕಾರಣವಾಗಿದೆ.

ಬೆಳ್ಳಿ ದರದಲ್ಲೂ ಏರಿಕೆ

ಚಿನ್ನದ ಬೆಲೆಯೊಂದಿಗೆ ಹೆಜ್ಜೆ ಹಾಕುತ್ತಿರುವ ಬೆಳ್ಳಿಯ ದರವು ಕೂಡ ಇಂದು ಏರಿಕೆ ಹಾದಿಯಲ್ಲಿದೆ. ಇಂದು ಬೆಳ್ಳಿಯ ದರವು ಭಾರಿ ಏರಿಕೆ ಕಂಡಿದ್ದು, ಪ್ರತಿ ಗ್ರಾಂ ಬೆಳ್ಳಿಯ ಬೆಲೆ 300 ರೂಪಾಯಿಗೆ ತಲುಪಿದೆ. ನಿನ್ನೆ ಪ್ರತಿ ಗ್ರಾಂ ಬೆಳ್ಳಿಯು 275 ರೂಪಾಯಿಯಂತೆ ಮಾರಾಟವಾಗುತ್ತಿತ್ತು. ಅಂದರೆ ಒಂದೇ ದಿನದಲ್ಲಿ ಪ್ರತಿ ಗ್ರಾಂಗೆ 25 ರೂಪಾಯಿಯಷ್ಟು ಏರಿಕೆಯಾದಂತಾಗಿದೆ. ಇನ್ನು 10 ಗ್ರಾಂ ಬೆಳ್ಳಿಯ ಬೆಲೆ 3,000 ರೂಪಾಯಿ ಆಗಿದ್ದರೆ, ಪ್ರತಿ ಕೆಜಿ ಬೆಳ್ಳಿಯು ಇಂದು 3,00,000 ರೂಪಾಯಿಯಂತೆ ಮಾರಾಟವಾಗುತ್ತಿದೆ.

ಒಟ್ಟಾರೆಯಾಗಿ, ಜಾಗತಿಕ ಆರ್ಥಿಕ ಏರಿಳಿತಗಳು ಮತ್ತು ಮದುವೆಯ ಸೀಸನ್‌ನಿಂದಾಗಿ ಸ್ಥಳೀಯವಾಗಿ ಹೆಚ್ಚುತ್ತಿರುವ ಬೇಡಿಕೆಯು ಚಿನ್ನ ಮತ್ತು ಬೆಳ್ಳಿಯ ದರವನ್ನು ದಾಖಲೆ ಮಟ್ಟಕ್ಕೆ ಕೊಂಡೊಯ್ದಿದೆ. ಹೂಡಿಕೆದಾರರಿಗೆ ಇದು ಲಾಭದಾಯಕ ಎನಿಸಿದರೂ, ಆಭರಣ ಖರೀದಿದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/business/gold-and-silver-rates-witness-huge-jump-comprehensive-price-list-for-february-23-now-available-444783.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo