
Sports
oi-Madhusudhan KR
Rinku Singh’s Father Passes Away: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ರಿಂಕು ಸಿಂಗ್ ಅವರ ತಂದೆ ಖಾನ್ಚಂದ್ರ ಸಿಂಗ್ ಅವರು ಇಂದು ನಿಧನರಾಗಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ನಾಲ್ಕನೇ ಹಂತದ ಲಿವರ್ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಗ್ರೇಟರ್ ನೋಯಿಡಾದ ಯಥಾರ್ಥ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಖಚಂದ್ರ ಸಿಂಗ್ ಅವರ ಆರೋಗ್ಯ ಸ್ಥಿತಿ ಕಳೆದ ಕೆಲವು ದಿನಗಳಿಂದ ತೀವ್ರವಾಗಿ ಹದಗೆಟ್ಟಿತ್ತು. ವೈದ್ಯರು ಅವರನ್ನು ಉಳಿಸಲು ಎಲ್ಲ ಪ್ರಯತ್ನಗಳನ್ನೂ ಮಾಡಿದ್ದು, ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು. ಮೂತ್ರಪಿಂಡ ವೈಫಲ್ಯ ಉಂಟಾದ ಕಾರಣ ನಿರಂತರ ಮೂತ್ರಪಿಂಡ ಬದಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಕ್ಯಾನ್ಸರ್ ದೇಹದ ಹಲವು ಅಂಗಾಂಗಗಳಿಗೆ ಹರಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಟೂರ್ನಿ ಬಿಟ್ಟು ಮನೆಗೆ ಮರಳಿದ ರಿಂಕು ಸಿಂಗ್
ಟಿ20 ವಿಶ್ವಕಪ್ಗಾಗಿ ಭಾರತ ತಂಡದೊಂದಿಗೆ ಇದ್ದ ರಿಂಕು ಸಿಂಗ್ ಅವರಿಗೆ ತಂದೆಯ ಆರೋಗ್ಯ ಸ್ಥಿತಿ ಹದಗೆಟ್ಟಿರುವ ಮಾಹಿತಿ ತಿಳಿಯುತ್ತಿದ್ದಂತೆ ಅವರು ತಕ್ಷಣವೇ ತಂಡವನ್ನು ಬಿಟ್ಟು ಸ್ವಗ್ರಾಮಕ್ಕೆ ತೆರಳಿದ್ದರು. ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನವೇ ಅವರು ತುರ್ತಾಗಿ ಮನೆಗೆ ಪ್ರಯಾಣಿಸಿದ್ದರು.
ರಿಂಕು ಸಿಂಗ್ ತಂದೆ ನಿಧನಕ್ಕೆ ಗಣ್ಯರಿಂದ ಸಂತಾಪ
ಖಾನ್ಚಂದ್ರ ಸಿಂಗ್ ಅವರ ನಿಧನದ ಹಿನ್ನೆಲೆ ಕ್ರಿಕೆಟ್ ವಲಯದ ಹಲವಾರು ಗಣ್ಯರು, ಮಾಜಿ ಆಟಗಾರರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ರಿಂಕು ಸಿಂಗ್ ಹಾಗೂ ಅವರ ಕುಟುಂಬಕ್ಕೆ ಧೈರ್ಯ ತುಂಬುವ ಸಂದೇಶಗಳನ್ನು ಹಂಚಿಕೊಂಡಿದ್ದಾರೆ. ಈ ದುಃಖದ ಸಂದರ್ಭದಲ್ಲಿ ಕುಟುಂಬಕ್ಕೆ ಆತ್ಮಸ್ಥೈರ್ಯ ದೊರಕಲಿ ಎಂದು ಪ್ರಾರ್ಥಿಸಿದ್ದಾರೆ.
Disclaimer: This content was automatically imported from a third-party source via RSS feed. The original source is: https://kannada.oneindia.com/news/sports/rinku-singh-s-father-khanchandrasingh-passes-away-dignitaries-have-expressed-condolences-know-detai-445277.html. xn--babytilbehr-pgb.com does not claim ownership of this content. All rights remain with the original publisher.
