GruhaLakshmi Scheme: ರಾಜ್ಯದಲ್ಲಿ ಮೃತಪಟ್ಟವರ ಹೆಸರಲ್ಲಿ ಗೃಹಲಕ್ಷ್ಮಿ ಹಣ ಪಡೆದವರಿಗೆ ಸರ್ಕಾರ ಬಿಗ್‌ ಶಾಕ್ | Karnataka Government to Recover ₹79 Cr. Credited to Deceased Beneficiaries Under Gruhalakshmi Scheme

Karnataka

oi-Madhusudhan KR

GruhaLakshmi Scheme: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮೀ ಯೋಜನೆ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡುವ ಈ ಯೋಜನೆಯಲ್ಲಿ ದುರುಪಯೋಗ ಆಗಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಸತ್ತವರ ಹೆಸರಿನಲ್ಲಿ ಯಾರೆಲ್ಲಾ ಹಣ ಪಡೆದಿದ್ದಾರೆಯೋ ಅವರಿಗೆ ಬಿಗ್ ಶಾಕ್‌ ನೀಡಿದೆ.

ಪರಿಶೀಲನೆ ವೇಳೆ ಸುಮಾರು 69,000ಕ್ಕೂ ಅಧಿಕ ಮೃತ ವ್ಯಕ್ತಿಗಳ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆ ಆಗಿರುವುದು ಪತ್ತೆಯಾಗಿದೆ. ಒಟ್ಟು 79 ಕೋಟಿ ರೂಪಾಯಿ ಮೊತ್ತ ವರ್ಗಾವಣೆ ಆಗಿರುವುದಾಗಿ ತಿಳಿದುಬಂದಿದೆ. ಇದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ತಂದಿರುವುದಾಗಿ ಮೂಲಗಳು ಸೂಚಿಸಿವೆ. ಈ ಹಿನ್ನೆಲೆ ತಪ್ಪಾಗಿ ಜಮೆಯಾದ ಹಣವನ್ನು ಮರಳಿ ಪಡೆಯಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳದುಬಂದಿದೆ.

Karnataka Government to Recover 79 Cr Credited to Deceased Beneficiaries Under Gruhalakshmi Scheme

ಸಂಬಂಧಿತ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಂವಹನ ನಡೆಸಿ, ಮೃತರ ಖಾತೆಗಳಿಗೆ ಜಮೆಯಾದ ಮೊತ್ತವನ್ನು ವಾಪಸ್ ಪಡೆಯುವ ಪ್ರಕ್ರಿಯೆ ಆರಂಭಿಸಲಾಗಿದೆ. ಜೊತೆಗೆ, ಮುಂದಿನ ದಿನಗಳಲ್ಲಿ ಇಂತಹ ತಪ್ಪುಗಳು ಮರುಕಳಿಸದಂತೆ ದತ್ತಾಂಶ ಪರಿಶೀಲನೆ ಹಾಗೂ ಫಲಾನುಭವಿಗಳ ಮಾಹಿತಿ ನವೀಕರಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಯೋಜನೆಯ ಪಾರದರ್ಶಕತೆ ಮತ್ತು ನಿಖರತೆಯನ್ನು ಹೆಚ್ಚಿಸಲು ಕ್ರಮಗಳನ್ನ ಬಲಪಡಿಸುವುದಾಗಿ ತಿಳಿಸಿದೆ.

ಅರ್ಜಿ ಸಲ್ಲಿಸುವ ವಿಧಾನಗಳು

* ಅರ್ಜಿ ಸಲ್ಲಿಕೆಗೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ

* ನಂತರ ಹೊಸ ನೋಂದಣಿಯನ್ನು ಆಯ್ಕೆ ಮಾಡಿಕೊಂಡು ಆಧಾರ್ ಕಾರ್ಡ್‌ ಮತ್ತು ಮೊಬೈಲ್‌ ನಂಬರ್ ಬಳಸಿ ಲಾಗಿನ್‌ ಆಗಿ.

* ಅಲ್ಲಿ ಕೇಳಲಾಗುವ ವೈಯಕ್ತಿಯ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ.

* ಎಲ್ಲಾ ಮಾಹಿತಿ ಸರಿಯಾಗಿದ್ದರೆ ಸಬ್ಮಿಟ್‌ ಬಟನ್‌ ಮೇಲೆ ಕ್ಲಿಕ್‌ ಮಾಡಿ, ಆಗ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

* ಅಲ್ಲದೆ, ಅಧಿಕೃತ ಸೇವಾ ಸಿಂಧು ಗ್ಯಾರಂಟಿ ಯೋಜನೆಗಳ ಪೋರ್ಟಲ್ ಅಥವಾ ಸೇವಾ ಸಿಂಧು ಸೇವಾ ಪ್ಲಸ್ ವೆಬ್‌ಸೈಟ್‌ಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು.

* ಹತ್ತಿರದ ಕರ್ನಾಟಕ ಒನ್, ಬೆಂಗಳೂರು ಒನ್, ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು.

ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು

* ಪಡಿತರ ಚೀಟಿ

* ಆಧಾರ್ ಕಾರ್ಡ್‌

* ಬ್ಯಾಂಕ್‌ ಖಾತೆಯ ವಿವರ

* ವಿಳಾಸ ಪುರಾವೆ

* ಇತ್ತೀಚಿನ ಭಾವಚಿತ್ರ

* ಆಧಾರ್‌ಗೆ ಲಿಂಕ್ ಆಗಿರುವ ಸಕ್ರಿಯ ಮೊಬೈಲ್ ಸಂಖ್ಯೆ

ಅರ್ಜಿ ಸಲ್ಲಿಕೆಗೆ ಅರ್ಹತೆಗಳು

* ಅರ್ಜಿದಾರ ಮಹಿಳೆ ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.

* ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕು.

* ಮಹಿಳೆ ಅಥವಾ ಅವರ ಪತಿ ಆದಾಯ ತೆರಿಗೆ ಪಾವತಿಸುತ್ತಿದ್ದರೆ ಅಥವಾ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುತ್ತಿದ್ದರೆ ಅರ್ಹರಲ್ಲ.

* ಕೇಂದ್ರ ಅಥವಾ ರಾಜ್ಯ ಸರ್ಕಾರದ ಇತರ ಯಾವುದೇ ಕಲ್ಯಾಣ ಯೋಜನೆಯ ಫಲಾನುಭವಿಗಳು ಆಗಿರಬಾರದು.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/karnataka-government-to-recover-79-cr-credited-to-deceased-beneficiaries-under-gruhalakshmi-scheme-445453.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo