ಅರಬ್ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ | Siddaramaiah Slams US-Israel Strikes On Iran, Assures Safe Evacuation Of Kannadigas From ArabNations

Karnataka

oi-Madhusudhan KR

ಶಿವಮೊಗ್ಗ, ಮಾರ್ಚ್‌ 1: ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಯುದ್ಧದ ಭೀತಿಯ ಬಗ್ಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಇರಾನ್ ಮೇಲಿನ ಅಮೆರಿಕ-ಇಸ್ರೇಲ್ ದಾಳಿಯನ್ನು ಕಟುವಾಗಿ ಟೀಕಿಸಿದರು. ಶಾಂತಿ ಮಂತ್ರ ಪಠಿಸುತ್ತಲೇ ಯುದ್ಧಕ್ಕೆ ಪ್ರಚೋದನೆ ನೀಡುವ ಅಮೆರಿಕದ ದ್ವಂದ್ವ ನಿಲುವಿನ ವಿರುದ್ಧ ಆಕ್ರೋಶ ಹೊರಹಾಕಿದರು. ಇದೇ ವೇಳೆ ವಿದೇಶದಲ್ಲಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆಯೂ ಮಹತ್ವದ ಮಾಹಿತಿ ಹಂಚಿಕೊಂಡರು.

ಸಿಎಂ ಸಿದ್ದರಾಮಯ್ಯ ಅವರು ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆ ಆಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.

Siddaramaiah Slams US-Israel Strikes On Iran Assures Safe Evacuation Of Kannadigas From ArabNations

ಬಳ್ಳಾರಿಯ 30 ಜನರ ರಕ್ಷಣೆಗೆ ಆದ್ಯತೆ

ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ವಾಪಸ್ಸು ಕರೆತರಲಾಗುವುದು ಎಂದು ಹೇಳಿದರಲ್ಲದೆ, ದುಬೈನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದರು. ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ.

ದುಬೈ ವಿಮಾನ ನಿಲ್ದಾಣ ಬಂದ್

ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈದಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಅವರು ಹೋಟೆಲ್‌ನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದರು ಎಂದರು.

ಅಮೆರಿಕಾ ನಿಲುವಿನ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಅಮೆರಿಕಾ ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುವುದಾಗಿ ತಿಳಿಸಿದರು. ಇನ್ನೂ ಇರಾನ್ ಅಧ್ಯಕ್ಷ ಆಯಾತೊಲ್ಲಾ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.

ವಿದೇಶಾಂಗ ಇಲಾಖೆ ಅಧಿಕಾರಿಗಳ ಜೊತೆ ಸಂಪರ್ಕ

ಇಸ್ರೇಲ್-ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಮಾತನಾಡಿ, ಧೈರ್ಯ ತುಂಬಿದ್ದೇನೆ. ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ದುಬೈ ಸೇರಿದಂತೆ ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸದ್ಯದ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದು, ಬಳಿಕ ಅವರನ್ನು ತವರಿಗೆ ವಾಪಸ್ ಕರೆ ತರುವ ಸಂಬಂಧ ವಿದೇಶಾಂಗ ಇಲಾಖೆ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ.

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಇರುವ ಕನ್ನಡಿಗರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿರುವುದು ತುಸು ಸಮಾಧಾನಕರ ವಿಚಾರ. ಯಾರೊಬ್ಬರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಿರಂತರವಾಗಿರಲಿದೆ ಎಂದು ಟ್ವಿಟರ್ ಮೂಲಕ ತಿಳಿಸಿದ್ದಾರೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/siddaramaiah-slams-us-israel-strikes-on-iran-assures-safe-evacuation-of-kannadigas-from-arabnations-445563.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo