T20 World Cup 2026: ಸಂಜು ಸ್ಯಾಮ್ಸನ್ ಅಬ್ಬರದ ಬ್ಯಾಟಿಂಗ್; ವೆಸ್ಟ್ ಇಂಡೀಸ್ ಮಣಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಭಾರತ | T20 World Cup 2026: Team India Storm into Semi-Finals After Thrilling Chase Against West Indies

Sports

oi-Madhusudhan KR

T20 World Cup 2026: ಭಾನುವಾರ ನಡೆದ ಟಿ20 ವಿಶ್ವಕಪ್‌ನ ಸೂಪರ್ 8 ಹಂತದ ಅಂತಿಮ ಪಂದ್ಯದಲ್ಲಿ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡರೆ, ವೆಸ್ಟ್ ಇಂಡೀಸ್ ಟೂರ್ನಿಯಿಂದ ಹೊರಬಿದ್ದಿದೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ವೆಸ್‌ ಇಂಡೀಸ್‌ ತಂಡವು ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 195 ರನ್‌ಗಳನ್ನು ಬೃಹತ್ ಮೊತ್ತ ಕಲೆಹಾಕಿತು. ಈ ಗುರಿಯನ್ನು ಟೀಂ ಇಂಡಿಯಾವು 19.2 ಓವರ್‌ಗಳಿಗೆ ಮುಟ್ಟಿ ಸೆಮಿಫೈನಲ್‌ ಸ್ಥಾನವನ್ನು ಖಚಿತಪಡಿಸಿಕೊಂಡಿತು. ಕೇವಲ 50 ಎಸೆತಗಳಲ್ಲಿ ಅಜೇಯ 97 ರನ್ ಸಿಡಿಸಿದ ಸಂಜು ಸ್ಯಾಮ್ಸನ್, ಭಾರತದ ಗೆಲುವಿನ ರೂವಾರಿಯಾದರು. ಪಂದ್ಯದ ಅಂತ್ಯದವರೆಗೂ ಕ್ರೀಸ್‌ನಲ್ಲಿ ನಿಂತ ಅವರು ತಂಡವನ್ನು ಜಯದ ದಡ ಸೇರಿಸಿದರು.

T20 World Cup 2026 Team India Storm into Semi-Finals After Thrilling Chase Against West Indies

ಇಂಗ್ಲೆಂಡ್‌ ವಿರುದ್ಧ ಸಮರಕ್ಕೆ ಸಜ್ಜು

ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 195 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಭಾರತ, ಈಡನ್ ಗಾರ್ಡನ್ಸ್ ಮೈದಾನದಲ್ಲಿ ಟಿ20 ಇತಿಹಾಸದಲ್ಲೇ ಅತ್ಯಂತ ಯಶಸ್ವಿ ರನ್ ಚೇಸ್ ಮಾಡಿದ ದಾಖಲೆ ಬರೆಯಿತು. ಸೆಮಿಫೈನಲ್‌ಗೆ ಲಗ್ಗೆ ಇಟ್ಟಿರುವ ಭಾರತ ತಂಡವು, ಮಾರ್ಚ್ 5ರಂದು ಮುಂಬೈನಲ್ಲಿ ನಡೆಯಲಿರುವ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.

ಸಂಜು ಸ್ಯಾಮ್ಸನ್ ಅಬ್ಬರದ ಬ್ಯಾಟಿಂಗ್

ಸಂಜು ಸ್ಯಾಮ್ಸನ್ ಅವರ ಈ ಅಮೋಘ ಪ್ರದರ್ಶನವು ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಹೊಸ ಭರವಸೆ ಮೂಡಿಸಿದ್ದು, ಭಾರತ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಹೊರಹೊಮ್ಮಿದೆ. ಸಂಜು ಕೇವಲ 50 ಎಸೆತಗಳಲ್ಲಿ 12 ಬೌಂಡರಿ, 4 ಸಿಕ್ಸ್‌ರ್‌ಗಳೊಂದಿಗೆ ಅಜೇಯ 97 ರನ್‌ ಕಲೆಹಾಕಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಉಳಿದಂತೆ ತಿಲಕ್ ವರ್ಮಾ 27(15), ನಾಯಕ ಸೂರ್ಯಕುಮಾರ್ ಯಾದವ್ 18(16), ಇಶಾನ್ ಕಿಶನ್ 10(6), ಹಾರ್ದಿಕ್ ಪಾಂಡ್ಯ 17(14) ಅಭಿಷೇಕ್ ಶರ್ಮಾ 10(11), ಶಿವಂ ದುಬೆ ಅಜೇಯ 8 ರನ್‌ ಕಲೆಹಾಕಿದರು.

Disclaimer: This content was automatically imported from a third-party source via RSS feed. The original source is: https://kannada.oneindia.com/news/sports/t20-world-cup-2026-team-india-storm-into-semi-finals-after-thrilling-chase-against-west-indies-445611.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo