
Karnataka
oi-Hitesh Y
ಕರ್ನಾಟಕದ 2026 – 2027ನೇ ಸಾಲಿನ ಬಜೆಟ್ ಮಂಡನೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಇದೇ ಮೊದಲ ಬಾರಿಗೆ ವಿಶೇಷ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026-27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್ ನಿಲ್ದಾಣಗಳಲ್ಲಿರುವ ಎಲ್ಇಡಿ ಮತ್ತು ಟಿವಿ ಪರದೆಗಳ ಮೂಲಕ ಮೊತ್ತ ಮೊದಲ ಬಾರಿಗೆ ನೇರ ಪ್ರಸಾರ ಮಾಡುತ್ತಿದೆ. ಇದು ಕರ್ನಾಟಕದ ಇತಿಹಾಸದಲ್ಲೇ ಮೊದಲಾಗಿದೆ.
ಆರ್ಥಿಕ ಸಚಿವ ಸಹ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸುತ್ತಿದ್ದಾರೆ. ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್, ಐಪಿಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್)ಯು ಬೆಂಗಳೂರು ಮೂಲದ ವೃತ್ತಿ ಮೀಡಿಯಾ ಸಲ್ಯೂಷನ್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಿರುವ ಡಿಜಿಟಲ್ ಡಿಸ್ಪ್ಲೇ (ಎಲ್ಇಡಿ) ಮತ್ತು ಟಿವಿ ಪರದೆಗಳ ಮೂಲಕ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ಮಾರ್ಚ್ 6 ರಂದು ಬೆಳಿಗ್ಗೆ 10.15 ಗಂಟೆಯಿಂದ ಪ್ರಸಾರ ಮಾಡಲಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ನಂತರ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯನ್ನೂ ಇದೇ ಪರದೆಗಳ ಮೂಲಕ ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ನೇರವಾಗಿ ಪ್ರಸಾರ ಮಾಡಲಾಗುತ್ತದೆ. ಇದರ ಮೂಲಕ ಸಾರ್ವಜನಿಕರು ಬಸ್ ನಿಲ್ದಾಣಗಳಲ್ಲಿಯೇ ಈ ಮಹತ್ವದ ಕಾರ್ಯಕ್ರಮವನ್ನು ವೀಕ್ಷಿಸುವ ಅವಕಾಶ ಇರಲಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಬಸ್ ನಿಲ್ದಾಣಗಳ ಮೂಲಕ ಜನಸಾಮಾನ್ಯರಿಗೆ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ತಲುಪಿಸುವ ಪ್ರಯತ್ನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೈಗೊಂಡಿದೆ. ಸಾರ್ವಜನಿಕರು ಈ ನೇರ ಪ್ರಸಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಯುಕ್ತರು ಮನವಿ ಮಾಡಿದ್ದಾರೆ.
ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
1. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 144 BS-VI ನಗರ ಸಾರಿಗೆ ಡೀಸೆಲ್ ಬಸ್ಸುಗಳನ್ನು 62.00 ಕೋಟಿ ರೂ. ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
Karnataka Budget 2026: 4.5 ಲಕ್ಷ ಕೋಟಿಯ ರಾಜ್ಯ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಗುವುದೇ ಭರ್ಜರಿ ಕೊಡುಗೆ?
2. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ವ್ಯಾಪ್ತಿಯ ವಿರಿಜಾ, ದೇವರಾಯ, ಆರ್.ಬಿ.ಎಲ್.ಎಲ್ ಮತ್ತು ಬಂಗಾರದೊಡ್ಡಿ ನಾಲೆಗಳ ವಿತರಣಾ ನಾಲೆಗಳ ಅಭಿವೃದ್ಧಿ ಕಾಮಗಾರಿಗಳನ್ನು 60 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.
3. ಬೀದರ್ ಜಿಲ್ಲೆಯಲ್ಲಿ ಮಾಂಜ್ರಾ ನದಿಗೆ ಅಡ್ಡಲಾಗಿ ಭಾಲ್ಕಿ ತಾಲ್ಲೂಕಿನಲ್ಲಿ ನಿರ್ಮಿಸಿರುವ ಜೀರಗಿಯಾಳ್, ಮಾಣಿಕೇಶ್ವರ ಮತ್ತು ಚಂದಾಪುರ ಹಾಗೂ ಔರಾದ್ ತಾಲ್ಲೂಕಿನಲ್ಲಿ ನಿರ್ಮಿಸಿರುವ ಹಾಲ್ಹಳ್ಳಿ ಒಟ್ಟು ನಾಲ್ಕು ಬ್ರಿಡ್ಜ್ ಕಂ ಬ್ಯಾರೇಜ್ಗಳ ಪುನಶ್ಚೇತನ ಕಾಮಗಾರಿಗಳನ್ನು 151.70 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.
4. ಈಗಾಗಲೇ ಗ್ರೇಟರ್ ಬೆಂಗಳೂರು ಕಾಯ್ದೆ, 2025ರಲ್ಲಿ ಕಲ್ಪಿಸಿರುವ ಅವಕಾಶಗಳಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಜಾಹೀರಾತುಗಳಿಗೆ ಶುಲ್ಕಗಳನ್ನು ಪಾವತಿಸಿಕೊಂಡು ಅನುಮತಿ ನೀಡಲು Karnataka Municipalities Act, 1964 and The Karnataka Municipal Corporations Act, 1976UÀ½UÉ ತಿದ್ದುಪಡಿ ತರಲು The Karnataka Municipalities and Certain Other Law (Amendment) Bill, 2026 ಗೆ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಧರಿಸಿದೆ.
5. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಲ್ಲಿ ಖಾಯಂ ಆಗಿ ಅಥವಾ ಗುತ್ತಿಗೆ ಆಧಾರದ ಮೇಲೆ ಅಥವಾ ತಾತ್ಕಾಲಿಕ ಆಧಾರದ ಮೇಲೆ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ವೈದ್ಯರು ಮತ್ತು ನೌಕರರುಗಳ ಸೇವೆಯನ್ನು ಅತ್ಯವಶ್ಯಕ ಸೇವೆಯೆಂದು ಪರಿಗಣಿಸುವ ವಿಷಯಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವರು ಸಭೆ ನಡೆಸಿ ಚರ್ಚಿಸಿದ ನಂತರ ಸೂಕ್ತ ನಿರ್ಧಾರ ಕೈಗೊಳ್ಳಲು ಸಚಿವ ಸಂಪುಟ ತೀರ್ಮಾನಿಸಿತು.
6. ರಾಜ್ಯ ಅಪರಾಧ ದಾಖಲಾತಿ ವಿಭಾಗ / ಪೊಲೀಸ್ ಗಣಕ ವಿಭಾಗಕ್ಕೆ ರಾಜ್ಯದಲ್ಲಿ ಪರಸ್ಪರ ಕಾರ್ಯನಿರ್ವಹಹಿಸಬಹುದಾದ ಅಪರಾಧ ನ್ಯಾಯ ವ್ಯವಸ್ಥೆ ಐ.ಸಿ.ಜೆ.ಎಸ್ (Inter-operable Criminal Justice System) ಹಾಗೂ ಐ.ಟಿ ಸೇವೆಗಳ ಅನುಷ್ಠಾನಕ್ಕೆ ವಿವಿಧ ಹಾರ್ಡ್ವೇರ್ ಮತ್ತು ಸಾಫ್ಟ್ವೇರ್ಗಳನ್ನು 227.58 ಕೋಟಿ ರೂ. ಗಳ ವೆಚ್ಚದಲ್ಲಿ ಪೊಲೀಸ್ ಆಧುನೀಕರಣ ಯೋಜನೆಯಡಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.
7. ನೇರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ಅಳವಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ವಿಷಯವಾಗಿ ಇಂದಿನ ಸಭೆಯಲ್ಲಿ ಚರ್ಚೆ ಮುಂದುವರೆದಿದ್ದು, ಸ್ವಲ್ಪ ಕಾಲ ವಿವರವಾಗಿ ಚರ್ಚೆ ನಡೆಸಲಾಗಿದೆ, ಆದರೂ ಇನ್ನಷ್ಟು ಸಚಿವರುಗಳು ಮಾತನಾಡಲು ಬಾಕಿ ಇರುವುದರಿಂದ ಆದರೆ ಪೂರ್ಣವಾದ ಚರ್ಚೆ ಆಗಿಲ್ಲ, ಈ ವಿಷಯದ ಕುರಿತಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮುಂದುವರಿದ ಚರ್ಚೆಗಾಗಿ ಸಭೆ ಸೇರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಯವನ್ನು ನಿಗದಿಪಡಿಸಲು ಸಚಿವ ಸಂಪುಟ ತೀರ್ಮಾನ ತೆಗೆದುಕೊಳ್ಳಲಾಗಿದೆ.
-

Karnataka Budget 2026: ಕರ್ನಾಟಕ ಬಜೆಟ್ 2026ಕ್ಕೆ ಕ್ಷಣಗಣನೆ: ದಾಖಲೆಯ 17ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ
-

ಕರ್ನಾಟಕ ಬಜೆಟ್ 2026: ನಮಗೆ ಹಣ ಬೇಡ, ಗುಣಮಟ್ಟದ ಶಾಲೆ, ಆಸ್ಪತ್ರೆ ಕೊಡಿ: ಸಾರ್ವಜನಿಕರ ಆಗ್ರಹ
-

Karnataka Budget 2026: ಮಾ.6 ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ, ಸಮಯ, ನೇರ ಪ್ರಸಾರ ಲಿಂಕ್, ವಿವರ
-

Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್
-

Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು
-

Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ
-

Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: “ಟಾಕ್ಸಿಕ್” ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ
-

ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ
-

Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ
-

Karna Serial: “ಕರ್ಣ” ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ
-

Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ
-

‘ವಂತಾರ’ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ
-

Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್
-

South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ
-

Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/first-time-in-state-history-cm-budget-speech-broadcast-live-at-230-bus-stands-across-karnataka-446111.html. xn--babytilbehr-pgb.com does not claim ownership of this content. All rights remain with the original publisher.
