
Karnataka
oi-Shiddalingesh S
ಮೈಸೂರು: ದೇವರು ಎಲ್ಲೆಡೆಯೂ ಇದ್ದಾನೆ ಎಂದು ನಂಬುವವನು ನಾನು. ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ, ಬದಲಾಗಿ ಪ್ರೀತಿಯನ್ನೇ ಕಲಿಸುತ್ತದೆ. ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ ಹಾಗೂ ಸಮಾಜದ ಬಡವರು ಮತ್ತು ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಮಿಕವಾಗಿ ನುಡಿದರು.
ಮೈಸೂರು ತಾಲ್ಲೂಕಿನ ಪಿಲ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಆದಿಶಕ್ತತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ಕುಂಭಕಳಶದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಅಧ್ಯಾತ್ಮ, ಸಾಮಾಜಿಕ ನ್ಯಾಯ ಮತ್ತು ತಮ್ಮ ರಾಜಕೀಯ ಜೀವನದ ಏರಿಳಿತಗಳ ಕುರಿತು ಮನಬಿಚ್ಚಿ ಮಾತನಾಡಿದರು. ಬಾಲ್ಯದ ನೆನಪುಗಳನ್ನು ಮೆಲುಕು ಹಾಕುತ್ತಾ, ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದ ಜನತೆ ನೀಡಿದ ಬೆಂಬಲವೇ ತಮ್ಮನ್ನು ಇಂದು ಈ ಉನ್ನತ ಸ್ಥಾನಕ್ಕೆ ತಂದು ನಿಲ್ಲಿಸಿದೆ ಎಂದು ಕೃತಜ್ಞತೆ ಸಲ್ಲಿಸಿದರು.

ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರದ ಜನರನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ, ದೇವರು ದೇಗುಲಗಳಲ್ಲಿ ಇರುತ್ತಾರೆಂಬುದು ನಮ್ಮ ನಂಬಿಕೆ. ದೇವರ ಆರಾಧನೆಯಿಂದ ಒಳಿತಾಗುತ್ತದೆ ಎಂಬ ನಂಬಿಕೆಯನ್ನು ನಾನು ವಿರೋಧಿಸುವುದಿಲ್ಲ. ಆದರೆ ದೇವರು ಎಲ್ಲೆಡೆಯೂ ಇದ್ದಾನೆ ಎಂದು ನಾನು ನಂಬುವವನು ಮತ್ತು ಆಚರಿಸುವವನು. 1978 ರಲ್ಲಿ ತಾಲ್ಲೂಕು ಅಭಿವೃದ್ಧಿ ಮಂಡಳಿಯ ಪ್ರಥಮ ಬಾರಿಗೆ ಚುನಾವಣೆಯಲ್ಲಿ ಸ್ಪರ್ದಿಸಿದಾಗ ಇಲ್ಲಿನ ಜನರ ಆಶೀರ್ವಾದ ನನಗೆ ದೊರೆತಿತ್ತು. ನಂತರ ವಿಧಾನಸಭಾ ಚುನಾವಣೆಯಲ್ಲಿ ಜನರ ಸಹಕಾರ ದೊರೆಯಿತು.ಮೈಸೂರು ತಾಲ್ಲೂಕಿನ ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರದ ಜನರ ಆಶೀರ್ವಾದದಿಂದ ಈವರೆಗೆ 8 ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದು, ರಾಜ್ಯದ ಮುಖ್ಯಮಂತ್ರಿಯಾಗಲು ಸಾಧ್ಯವಾಗಿದೆ. ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಪಿಲ್ಲಹಳ್ಳಿ ಜನರ ಪ್ರೀತಿಯಿಂದಾಗಿ ಇಲ್ಲಿನ ದೇವಸ್ಥಾನದ ಉದ್ಘಾಟನೆಗೆ ಆಗಮಿಸಿದ್ದೇನೆ. 1978 ರಿಂದ ಇಂದಿನವರೆಗೂ ಹಾಗೂ ಮುಂದೆಯೂ ಈ ಭಾಗದ ಜನರ ಸಹಕಾರ ದೊರೆಯುವ ವಿಶ್ವಾಸವಿದೆ ಎಂದರು.
ಎಲ್ಲರಿಗೂ ಒಳಿತನ್ನು ಬಯಸುವುದೇ ಮುಖ್ಯ
ಶ್ರೀ ದಂಡಿಮಾರಮ್ಮ ದೇವಸ್ಥಾನಕ್ಕೆ ಬಾಲ್ಯದಿಂದಲೂ ಭೇಟಿ ನೀಡುತ್ತಿದ್ದ ನೆನಪನ್ನು ಮೆಲುಕು ಹಾಕಿದ ಮುಖ್ಯಮಂತ್ರಿಗಳು, ದೇವರನ್ನು ಕಷ್ಟ ಬಂದಾಗ ನೆನಪಿಸಿಕೊಳ್ಳದೇ, ಎಲ್ಲ ಸಂದರ್ಭದಲ್ಲಿಯೂ ಸ್ಮರಿಸಬೇಕು ಎಂದರು. ‘ದೇವನೊಬ್ಬ ನಾಮ ಹಲವು’ ಎಂದು ನಂಬಿ, ದೇವರು ನಮ್ಮೊಳಗೂ ಸೇರಿದಂತೆ ಎಲ್ಲ ಕಡೆಯೂ ಇದ್ದಾನೆ. ಎಲ್ಲರಿಗೂ ಒಳಿತನ್ನು ಬಯಸುವುದೇ ಮುಖ್ಯ. ಯಾವೊಂದು ಧರ್ಮ ಜಾತಿಗಳು ಪ್ರೀತಿಯನ್ನು ಬೋಧಿಸುತ್ತದೆಯೇ ಹೊರತು ದ್ವೇಷಿಸುವುದನ್ನು ಬೋಧಿಸುವುದಿಲ್ಲ ಎಂದರು.
ಸಮಾನತೆ ಸ್ಥಾಪಿಸುವುದೇ ಸರ್ಕಾರದ ಯೋಜನೆಗಳ ಗುರಿ
ಸಮಾಜದ ಅಸಮಾನತೆ ಕಡಿಮೆಯಾಗಬೇಕು. ಸಮಾನತೆಯ ಸ್ಥಾಪಿಸುವ ಉದ್ದೇಶವನ್ನು ಸರ್ಕಾರದ ಎಲ್ಲ ಯೋಜನೆಗಳು ಹೊಂದಿವೆ. ಸಮಾಜದ ಎಲ್ಲ ಜಾತಿ ಧರ್ಮ, ವರ್ಗಗಳಿಗೆ ಆರ್ಥಿಕ ಸಾಮಾಜಿಕ ಶಕ್ತಿ ದೊರೆಯಬೇಕು. ಲಿಂಗ ತಾರತಮ್ಯ ಹೋಗಲಾಡಿಸಿ, ಮಹಿಳೆಯರಿಗೆ ಶಕ್ತಿ ತುಂಬಲು ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಉದ್ದೇಶ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೌಲಭ್ಯಗಳು ದೊರೆತಾಗ ಮಾತ್ರ ಸಮಾಜಿಕ ನ್ಯಾಯ ಒದಗಿಸಲು ಸಾಧ್ಯ ಎಂದರು.
-

ಸಿದ್ದರಾಮಯ್ಯ ಬಜೆಟ್; ಹಣಕಾಸು ಶಿಸ್ತು, AI ಉತ್ತೇಜನ ಸ್ವಾಗತಾರ್ಹ:ರಂಗಸ್ವಾಮಿ ಮೂಕನಹಳ್ಳಿ
-

ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ
-

ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ
-

Karnataka Budget 2026: ಮಾ.6 ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ, ಸಮಯ, ನೇರ ಪ್ರಸಾರ ಲಿಂಕ್, ವಿವರ
-

”ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ”
-

ಕರ್ನಾಟಕ ಬಜೆಟ್ 2026: ಹೆಚ್.ಡಿ.ಕುಮಾರಸ್ವಾಮಿ ಟೀಕೆ: ಸಿದ್ದರಾಮಯ್ಯ ಬಜೆಟ್ ರಾಜ್ಯದ ಆರ್ಥಿಕತೆಗೆ ಅಪಾಯ
-

ಬಜೆಟ್ನಲ್ಲಿ ಜನರ ಮೇಲೆ ಸಾಲದ ಹೊರೆ, ಖಾಲಿ ಚೊಂಬು ನೀಡಿದ ಕಾಂಗ್ರೆಸ್ ಸರ್ಕಾರ: ಪ್ರತಿಪಕ್ಷ ನಾಯಕ ಆರ್.ಅಶೋಕ
-

ಮುಖ್ಯಮಂತ್ರಿಗಳಿಂದ ದಿಕ್ಕು-ದೆಸೆ ಇಲ್ಲದ ಅಭಿವೃದ್ಧಿ ಶೂನ್ಯ ಬಜೆಟ್ ಮಂಡನೆ: ಬಸವರಾಜ ಬೊಮ್ಮಾಯಿ
-

45,000 ಕೋಟಿ ರೂಪಾಯಿ ಸಂಗ್ರಹ ಗುರಿ, ಮದ್ಯಪ್ರಿಯರಿಗೆ ದಿಢೀರ್ ಎದುರಾಯ್ತು ಆಘಾತ… Karnataka Budget 2026
-

ಶ್ರೀ ಮಾತಾ ವೈಷ್ಟೋದೇವಿ ಭಕ್ತರಿಗೆ ಕರ್ನಾಟಕ ಸರ್ಕಾರದ ವತಿಯಿಂದ ಭರ್ಜರಿ ಸುದ್ದಿ | Karnataka Budget 2026
-

ರಾಜ್ಯ ಬಜೆಟ್ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್
-

5,00,00,000 ರೂಪಾಯಿ, ಕನ್ನಡ ನಾಡಿನ ಭಕ್ತರಿಗೆ ಭರ್ಜರಿ ಉಡುಗೊರೆ… Karnataka Budget 2026
-

Karnataka Budget 2026: 4.5 ಲಕ್ಷ ಕೋಟಿಯ ರಾಜ್ಯ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಗುವುದೇ ಭರ್ಜರಿ ಕೊಡುಗೆ?
-

ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಬಜೆಟ್ನಲ್ಲಿ ಘೋಷಣೆ
-

ಸಿನಿಮಾ ಚಿತ್ರೀಕರಣ ಅನುಮತಿಗೆ “ಸಿನಿ ಮಿತ್ರ” ಆನ್ಲೈನ್ ವ್ಯವಸ್ಥೆ: ಸ್ಯಾಂಡಲ್ವುಡ್ಗೆ ಸಿದ್ದರಾಮಯ್ಯ ಬಜೆಟ್ ಕೊಟ್ಟಿದ್ದೇನು?
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/siddaramaiah-recalls-childhood-in-mysuru-says-people-s-support-and-blessings-made-him-chief-minister-446289.html. xn--babytilbehr-pgb.com does not claim ownership of this content. All rights remain with the original publisher.
