
Karnataka
oi-Hitesh Y
Rain in Karnataka: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಕಳೆದ 15 ದಿನಗಳಿಂದ ಭಾರೀ ಬಿಸಿಲಿನ ವಾತಾವರಣವಿದೆ. ಇದೀಗ ಕರ್ನಾಟಕದ ವಿವಿಧ ಭಾಗದಲ್ಲಿ ಮಾರ್ಚ್ 15ರ ಭಾನುವಾರದಿಂದ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ ಯಾವ ಭಾಗದಲ್ಲಿ ಮಳೆ ಆಗಲಿದೆ, ಕರ್ನಾಟಕದಲ್ಲಿ ಇಂದಿನ ಹವಾಮಾನ ಹೇಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಮೇಲಿನ ವಾಯು ಚಂಡಮಾರುತದ ಪರಿಚಲನೆ ಮುಂದುವರಿದಿದೆ. ಬಂಗಾಳಕೊಲ್ಲಿಯ ನೈಋತ್ಯ ಮತ್ತು ಶ್ರೀಲಂಕಾದ ಉತ್ತರ ಭಾಗದಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀ ಎತ್ತರದಲ್ಲಿ ಮೇಲಿನ ವಾಯು
ಚಂಡಮಾರುತದ ಪರಿಚಲನೆ ಕಡಿಮೆಯಾಗಿದೆ.

ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಮೇಲಿನ ವಾಯು ಚಂಡಮಾರುತದ ಪರಿಚಲನೆ ಕಡಿಮೆಯಾಗಿದೆ. ಆದರೆ ಇದರ ಹೊರತಾಗಿಯೂ ಕರ್ನಾಟಕದ ವಿವಿಧ ಭಾಗದಲ್ಲಿ ಮುಂದಿನ ವಾರದಿಂದ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಉಲ್ಲೇಖಿಸಿದೆ.
ನಾಲ್ಕು ದಿನಗಳ ಕಾಲ ಈ ಭಾಗದಲ್ಲಿ ಮಳೆ
ಕರ್ನಾಟಕದ ವಿವಿಧ ಭಾಗದಲ್ಲಿ ಮಾರ್ಚ್ 15ರಿಂದ ಪ್ರಾರಂಭವಾಗಿ ಮಾರ್ಚ್ 18ರ ವರೆಗೆ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ ಆರ್ಭಟ ಶುರುವಾಗಲಿದೆ.
ಮಾರ್ಚ್ 15: ಕೊಡಗು, ಮೈಸೂರು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಬಳ್ಳಾರಿ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಮಾರ್ಚ್ 16: ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ರಾಮನಗರ ಜಿಲ್ಲೆ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಇನ್ನು ಮಾರ್ಚ್ 17 ಹಾಗೂ ಮಾರ್ಚ್ 18ರಂದು ಸಹ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
Rain in Karnataka ಕರ್ನಾಟಕದಲ್ಲಿ ಹೇಗಿದೆ ಹವಾಮಾನ
ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳ ವರೆಗೆ ಕರಾವಳಿಯಲ್ಲಿ ಬಿಸಿ ಹಾಗೂ ತೇವಾಂಶದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ವಿವಿಧ ಭಾಗದಲ್ಲಿ ಮುಂದಿನ ಐದು ದಿನಗಳ ವರೆಗೆ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ
ಇನ್ನು ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಅವಧಿಯಲ್ಲಿ ಬಹುತೇಕ ಶುಭ್ರ ಆಕಾಶ ಇರಲಿದೆ. ಗರಿಷ್ಠ ಮತ್ತ ಕನಿಷ್ಠ ತಾಪಮಾನವು ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್ ಮತ್ತು 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಒಣಹವೆ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಇನ್ನು ರಾಜ್ಯದ ಕಲುಬುರಗಿಯಲ್ಲಿ ಗರಿಷ್ಠ 37.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶ ದಾವಣಗೆರೆಯಲ್ಲಿ ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಹೆಚ್ಚಳವಾಗಿದ್ದು, 3.1 ಡಿಗ್ರಿ ಸೆಲ್ಸಿಯಸ್ನಿಂದ 5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಈ ಮೂಲಕ ತಾಪಮಾನವು ಗಮನಾರ್ಹವಾಗಿ ಹೆಚ್ಚಳವಾಗಿದೆ. ಉತ್ತರ ಒಳನಾಡಿನ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್ನಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ. ಉಳಿದ ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯವಾಗಿದೆ.
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/rain-in-karnataka-scorching-heat-to-ease-as-imd-predicts-four-days-of-rain-in-bengaluru-and-several-446905.html. xn--babytilbehr-pgb.com does not claim ownership of this content. All rights remain with the original publisher.
