
Karnataka
oi-Shankrappa Parangi
ಬೆಂಗಳೂರು: ರಾಜ್ಯಾದ್ಯಂತ ಉತ್ತಮ ಸಾರಿಗೆ ಸೇವೆ ನೀಡುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ಈ ಪ್ರಯುಕ್ತ 70 ಪಲ್ಲಕ್ಕಿ ಬಸ್ಸುಗಳಿಗೆ ಮತ್ತು 45 ಕರ್ನಾಟಕ ಸಾರಿಗೆ ಬಸ್ಗಳ ಕಾರ್ಯಾಚರಣೆಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಶುಕ್ರವಾರ ಚಾಲನೆ ನೀಡಿದರು. ಯಾವೆಲ್ಲ ಮಾರ್ಗಗಳಲ್ಲಿ ಬಸ್ಗಳು ಸಂಚರಿಸಲಿವೆ?, ಸಾರಿಗೆ ವ್ಯಾಪ್ತಿಯಲ್ಲಿ ಮಹಿಳಾ ಸಿಬ್ಬಂದಿಗೆ ಇರುವ ಸೌಲಭ್ಯ ಕುರಿತು ಸಚಿವರು ಮಹತ್ವದ ಮಾಹಿತಿ ವಿವರಿಸಿದರು.
ಕಾರ್ಯಕ್ಮರದಲ್ಲಿ ಮಾತನಾಡಿದ ಸಚಿವರು, ಮುಂದಿನ ಏಪ್ರಿಲ್, ಮೇ ಮತ್ತು ಜೂನ್-2026 ರಲ್ಲಿ ಕರ್ನಾಟಕ ಸಾರಿಗೆ ನಿಗಮಕ್ಕೆ ಒಟ್ಟು 805 ಸಂಖ್ಯೆಯ ಹೊಸ ಕರ್ನಾಟಕ ಸಾರಿಗೆ ಹಾಗೂ ನಗರ/ಗ್ರಾಮಾಂತರ ಸಾರಿಗೆ ವಾಹನಗಳು ಸೇರ್ಪಡೆ ಆಗಲಿವೆ. ಇಂದಿನಿಂದ ಸದರಿ ನೂತನ 70 ಹವಾನಿಯಂತ್ರಣ ರಹಿತ ಸ್ಲೀಪರ್ ಪಲ್ಲಕ್ಕಿ ಬಸ್ಸು ಹಾಗೂ 45 ಕರ್ನಾಟಕ ಸಾರಿಗೆ ಬಸ್ಗಳ ಸಂಚಾರ ಆರಂಭವಾಗಲಿದೆ ಎಂದು ಅವರು ತಿಳಿಸಿದೆ.

ರಾಜ್ಯ, ಅಂತಾರಾಜ್ಯಕ್ಕೆ ಪಲ್ಲಕ್ಕಿ ಬಸ್ ಸಂಚಾರ, ಮಾರ್ಗಗಳು
ನೂತನ ಕೆಎಸ್ಆರ್ಟಿಸಿ ಪಲ್ಲಕ್ಕಿ ಬಸ್ಸುಗಳು ಉಡುಪಿ, ಮಂಗಳೂರು, ಮೈಸೂರು, ಧರ್ಮಸ್ಥಳ, ಶೃಂಗೇರಿ, ಹೊರನಾಡು, ಆಗುಂಬೆ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಂಪಿ, ರಾಯಚೂರು, ಜಮಖಂಡಿ, ಪುತ್ತೂರು, ಕಾಣಿಯೂರು, ಕುಕ್ಕೆ ಸುಬ್ರಹ್ಮಣ್ಯ, ಕಾಸರಗೋಡು, ಮಂತ್ರಾಲಯ, ತಿರುಚಿ, ಕೊಜಿಕ್ಕೋಡ್, ಮುನ್ನಾರ್, ಪಾಂಡಿಚೇರಿ, ತಂಜಾವೂರು, ಕೊಟ್ಟಾಯಂ, ಹೈದಾರಬಾದ್, ಚೆನ್ನೈ, ಪಣಜಿ, ಮಧುರೈ, ಕುಂಭಕೋಣಂ, ಎರ್ನಾಕುಲಂಗೆ ಕಾರ್ಯಾಚರಣೆ ಮಾಡುತ್ತವೆ. ಈ ಮಾರ್ಗದ ಸಾವಿರಾರು ಪ್ರಯಾಣಿಕರಿಗೆ ಅನುಕೂಲ ಒದಗಿಸಲಿವೆ ಎಂದರು.
ನಿಗಮಗಳಲ್ಲಿ 8,956 ಮಹಿಳಾ ಸಿಬ್ಬಂದಿ ಕಾರ್ಯ
ಸದರಿ ರಾಜ್ಯ ಸಾರಿಗೆ ನಾಲ್ಕು ಸಂಸ್ಥೆಗಳಲ್ಲಿ ಸುಮಾರು 1.04 ಲಕ್ಷ ಸಿಬ್ಬಂದಿಗಳಿದ್ದಾರೆ. ಇವರಲ್ಲಿ 8,956 ಮಹಿಳಾ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರಲ್ಲಿ 3167 ನಿರ್ವಾಹಕರು, 2254-ತಾಂತ್ರಿಕ ಸಿಬ್ಬಂದಿಗಳು, 3535-ಆಡಳಿತ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.
ಮಹಿಳೆಯರಿಗಾಗಿ ಜಾರಿಗೆ ತಂದ ‘ಶಕ್ತಿ ಯೋಜನೆ’ ಯಲ್ಲಿ ಮಹಿಳೆಯರಿಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಿದೆ. ಮಾರ್ಚ್ 12ರವರೆಗೆ 688.83 ಕೋಟಿ ಮಹಿಳೆಯರು ಉಚಿತವಾಗಿ ಬಸ್ಗಳಲ್ಲಿ ಸಂಚರಿಸಿದ್ದಾರೆಂದು ಸಚಿವರು ಮಾಹಿತಿ ಕೊಟ್ಟರು.
ಇದೇ ಸಂದರ್ಭದಲ್ಲಿ ನಿಗಮದ 17 ವಿಭಾಗಗಳಿಂದ ತಲಾ ಒಬ್ಬರಂತೆ ಉತ್ತಮ ಕಾರ್ಯ ಸಾಧನೆ ತೋರಿದ, ತಾಂತ್ರಿಕ ಸಿಬ್ಬಂದಿ-19, ನಿರ್ವಾಹಕರು-15, ಹಾಗೂ ಕರಾಸಾ ಪೇದೆ-12, ಒಟ್ಟು 46 ಮಹಿಳಾ ಸಿಬ್ಬಂದಿಗೆ ಪ್ರಶಸ್ತಿ ನೀಡಿ ಗೌರವಿದ್ದು ಹೆಮ್ಮೆಯ ವಿಷಯ ಎಂದು ವಿಶ್ವ ಮಹಿಳಾ ದಿನಾಚರಣೆ, ಮಹಿಳೆಯರ ಸಾಧನೆ ಕುರಿತು ಮಾತನಾಡಿದರು.

ಸಾರಿಗೆ ಇಲಾಖೆ: ಮಹಿಳಾ ಸ್ನೇಹಿ ಉಪಕ್ರಮಗಳು
* ಮಹಿಳೆಯರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ. ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮಾರ್ಗ ನಿಯೋಜನೆಯಲ್ಲಿ ಪ್ರಾಶಸ್ತ್ಯ ಒದಗಿಸಲಾಗಿದೆ.
* ಕಳೆದ ಎರಡುವರೆ ವರ್ಷಗಳಲ್ಲಿ ಕರಾರಸಾ ನಿಗಮದಲ್ಲಿ 77 ವಿವಿಧ ಹುದ್ದೆಗಳಿಗೆ ಮಹಿಳೆಯರನ್ನು ಅನುಕಂಪದ ಆಧಾರದ ಮೇಲೆ (ಕಿರಿಯ ಸಹಾಯಕಿ – 44, ಕರಾಸಾ ಪೇದೆ-30 ಮತ್ತು ತಾಂತ್ರಿಕ ಸಹಾಯಕರು -02, ನಿರ್ವಾಹಕರು-1) ನೇಮಕಾತಿ ಮಾಡಿಕೊಳ್ಳಲಾಗಿದೆ.
* ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತಿ ಮಾಹೆಯಲ್ಲಿ ಒಂದು ದಿನದ ಋತುಚಕ್ರ ರಜೆ ಮಂಜೂರು ಮಾಡಲಾಗುತ್ತಿದೆ. ಮಹಿಳಾ ನೌಕರರಿಗೆ ರಾಜ್ಯ ಸರ್ಕಾರದ ಮಾದರಿಯಲ್ಲಿ 180 ದಿನಗಳ ಹೆರಿಗೆ ರಜೆ ಸೌಲಭ್ಯ ನೀಡಲಾಗಿದೆ.
* ಸರ್ಕಾರದ ಮಾದರಿಯಲ್ಲಿ ಕಿರಿಯ ಮಗುವಿಗೆ 18 ವರ್ಷ ತಲುಪುವವರೆಗೆ ಒಟ್ಟು ಸೇವಾವಧಿಯಲ್ಲಿ ಗರಿಷ್ಠ ಆರು ತಿಂಗಳವರೆಗೆ ‘ಶಿಶುಪಾಲನಾ ರಜೆ’ಗೆ ಅವಕಾಸ ಇದೆ. ಕರ್ತವ್ಯ ನಿರತ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಗೃಹ ವ್ಯವಸ್ಥೆ ಮಾಡಲಾಗಿದೆ.
* ಮಹಿಳಾ ನೌಕರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮಗುವಿಗೆ ಮೂರು ವರ್ಷ ತುಂಬುವವರೆಗೆ ರೂ.1250/- ಗಳನ್ನು ಮಾಸಿಕ ಶಿಶು ಪಾಲನಾ ಭತ್ಯೆ ನೀಡಲಾಗುತ್ತಿದೆ. ಈ ಸೌಲಭ್ಯವನ್ನು ಒಟ್ಟಾರೆ 160 ಮಹಿಳಾ ಸಿಬ್ಬಂದಿ ಪಡೆಯುತ್ತಿದ್ದಾರೆ.
* ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳಾ ನೌಕರರಿಗೆ ಆಗುವ ಲೈಂಗಿಕ ಕಿರುಕುಳವನ್ನು ತಡೆಯಲು Sexual Harassment of Women at Workplace (Prevention, Prohibition & Redressal) Act-2013 ರನ್ವಯ ಮಹಿಳಾ ನೌಕರರ ಆಂತರಿಕ ದೂರು ಸಮಿತಿ ರಚಿಸಲಾಗಿದೆ.
* ಬುದ್ಧಿಮಾಂದ್ಯ/ಅಂಗವಿಕಲ ಮಕ್ಕಳನ್ನು ನೋಡಿಕೊಳ್ಳಲು ಮಹಿಳಾ ನೌಕರರಿಗೆ ಒಟ್ಟು 730 ದಿವಸಗಳ ವೇತನ ಸಹಿತ ‘ಶಿಶು ಪಾಲನಾ ರಜೆ’ ನೀಡಲಾಗುತ್ತಿದೆ.
* ವಿದ್ಯಾಚೇತನ ಯೋಜನೆ ಯಡಿ, 1747 ಹೆಣ್ಣು ಮಕ್ಕಳಿಗೆ (ಸಿಬ್ಬಂದಿಗಳ ಮಕ್ಕಳು) (2022-23 ರಿಂದ 2025-26) ರೂ.88,54,500/ ವಿದ್ಯಾರ್ಥಿ ವೇತನ ನೀಡಲಾಗಿದೆ. (ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ-2, ವೈದ್ಯಕೀಯ-55, ಮಾಸ್ಟರ್ ಡಿಗ್ರಿ-139, ಡಿಗ್ರಿ-920, ಡಿಪ್ಲೋಮೋ-43)
* ‘ಕೆ.ಎಸ್ಆರ್.ಟಿ.ಸಿ ಆರೋಗ್ಯ’ ಯೋಜನೆ ಅಡಿಯಲ್ಲಿ 92,945 ಮಹಿಳಾ ಸಿಬ್ಬಂದಿಗಳು ಹಾಗೂ ಅವರ ಅವಲಂಬಿತರು ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಪಡೆದಿದ್ದಾರೆ. ಅದರ ವೆಚ್ಚವು ಅಂದಾಜು 29.87 ಕೋಟಿ ರೂ.ಆಗಿದೆ.
ಎಲ್ಲ ರಂಗದಲ್ಲೂ ಮಹಿಳೆಯರು ಸಾಧನೆ
ಕುಟುಂಬ, ಶಿಕ್ಷಣ, ವಿಜ್ಞಾನ, ಸಾಮಾಜಿಕ, ರಾಜಕೀಯ, ಆರ್ಥಿಕತೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ಮಹತ್ತರ ಸಾಧನೆಗಳನ್ನು ಮಾಡುತ್ತಿದ್ದಾರೆ. ಮಹಿಳೆಯರ ಸಬಲೀಕರಣವು ಸಮಾಜದ ಅಭಿವೃದ್ಧಿಗೆ ಅತ್ಯಂತ ಮುಖ್ಯವಾಗಿದ್ದು, ಅವರಿಗೆ ಸಮಾನ ಅವಕಾಶಗಳು ಮತ್ತು ಸುರಕ್ಷಿತ ವಾತಾವರಣವನ್ನು ಒದಗಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಮಹಿಳೆಯರ ಹಕ್ಕುಗಳು, ಸಮಾನತೆ ಹಾಗೂ ಗೌರವ ಉತ್ತೇಜಿಸಬೇಕಿದೆ ಎಂದು ಸಚಿವರು ಹೇಳಿದರು.
ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷ ಅವರು ಮಾತನಾಡಿ, ಪ್ರಸ್ತುತ ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಅಭಿವೃದ್ಧಿ ಹೊಂದುತ್ತಿರುವುದು ಸ್ವಾಗತಾರ್ಹ. ತಮ್ಮ ತಮ್ಮ ಮಕ್ಕಳಿಗೆ ಉತ್ತಮವಾದ ವಿದ್ಯಾಬ್ಯಾಸವನ್ನು ದೊರಕಿಸಿಕೊಟ್ಟು, ಸಬಲರನ್ನಾಗಿ ಮಾಡಬೇಕು ಎಂದು ತಿಳಿಸಿದರು.
-

ಶ್ರೀಶೈಲ ಮಲ್ಲಿಕಾರ್ಜುನನ ದರ್ಶನಕ್ಕೆ NWKRTC ವೇಗದೂತ ಬಸ್ಗಳ ವ್ಯವಸ್ಥೆ: ಟಿಕೆಟ್ ದರ, ಮಾರ್ಗ-ವೇಳಾಪಟ್ಟಿ
-

Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ
-

Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು
-

LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ
-

Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ – ಬೆಳ್ಳಿ ಬೆಲೆ
-

Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್
-

Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ – ಬಿಡಿಎ ಜಂಟಿ ಶಾಕ್
-

Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್
-

Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ
-

ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?
-

ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ
-

Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ
-

ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ
-

Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ
-

Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/ksrtc-launches-115-new-pallakki-and-karnataka-sarige-buses-check-routes-and-features-446977.html. xn--babytilbehr-pgb.com does not claim ownership of this content. All rights remain with the original publisher.
