
Sports
oi-Madhusudhan KR
BCCI Award: ಈ ಬಾರಿ ಬಿಸಿಸಿಐನ ಅತ್ಯುನ್ನತ ಗೌರವವಾದ ‘ಕರ್ನಲ್ ಸಿ. ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ’ಯು ಇಬ್ಬರು ಹೆಮ್ಮೆಯ ಕನ್ನಡಿಗರಿಗೆ ಒಲಿಯುತ್ತಿರುವುದು ವಿಶೇಷ. ಕರ್ನಾಟಕದ ಇಬ್ಬರು ಕ್ರಿಕಟ್ ದಿಗ್ಗಜರಾದ ರಾಹುಲ್ ದ್ರಾವಿಡ್ ಮತ್ತು ರೋಜರ್ ಬಿನ್ನಿ ಅವರಿಗೆ ಭಾನುವಾರ (ಮಾರ್ಚ್ 15) ನವದೆಹಲಿಯಲ್ಲಿ ನಡೆಯಲಿರುವ ‘ನಮನ್ ಅವಾರ್ಡ್ಸ್’ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಇದಕ್ಕೆ ಮಿಥಾಲಿ ರಾಜ್ ಕೂಡ ಭಾಜನರಾಗಿದ್ದಾರೆ.
ಭಾರತೀಯ ಕ್ರಿಕೆಟ್‌ಗೆ ಸಲ್ಲಿಸಿದ ಅಪ್ರತಿಮ ಸೇವೆಯನ್ನು ಪರಿಗಣಿಸಿ, ಬಿಸಿಸಿಐನ ಅತ್ಯುನ್ನತ ಗೌರವವಾದ ‘ಕರ್ನಲ್ ಸಿ. ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ’ಯನ್ನು ಈ ಬಾರಿ ದಿಗ್ಗಜರಾದ ಮಿಥಾಲಿ ರಾಜ್, ಕರ್ನಾಟಕದ ರೋಜರ್ ಬಿನ್ನಿ ಹಾಗೂ ರಾಹುಲ್ ದ್ರಾವಿಡ್ ಅವರಿಗೆ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭವು ಭಾನುವಾರ ನವದೆಹಲಿಯಲ್ಲಿ ನಡೆಯಲಿದೆ.

ರೋಜರ್ ಬಿನ್ನಿ ಸಾಧನೆಗಳ ವಿವರ
ಭಾರತೀಯ ಕ್ರಿಕೆಟ್‌ನ ಇತಿಹಾಸದಲ್ಲಿ ರೋಜರ್ ಬಿನ್ನಿ ಅವರ ಹೆಸರು ಸುವರ್ಣಾಕ್ಷರಗಳಲ್ಲಿ ದಾಖಲಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬಿನ್ನಿ ಅವರು ಭಾರತದ ಪರ 27 ಟೆಸ್ಟ್ ಮತ್ತು 72 ಏಕದಿನ (ODI) ಪಂದ್ಯಗಳನ್ನು ಆಡಿದ್ದಾರೆ. 1983ರಲ್ಲಿ ಭಾರತ ಮೊದಲ ಬಾರಿಗೆ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದಾಗ, ಆ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ (18) ಪಡೆದ ಹೆಗ್ಗಳಿಕೆ ಅವರದ್ದು. ಈ ಗೆಲುವು ಭಾರತೀಯ ಕ್ರಿಕೆಟ್‌ನ ಭವಿಷ್ಯವನ್ನೇ ಬದಲಿಸಿತು. ಬಿನ್ನಿ ಅವರು ಕರ್ನಾಟಕದ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು.
ಕೋಚ್ ಆಗಿ ಸೇವೆ ಸಲ್ಲಿಸಿದ ಬಿನ್ನಿ
1985ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ‘ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಕ್ರಿಕೆಟ್’ ಗೆದ್ದ ಭಾರತೀಯ ತಂಡದ ಪ್ರಮುಖ ಸದಸ್ಯರಾಗಿದ್ದರು. ಇನ್ನು ಕ್ರಿಕೆಟ್‌ನಿಂದ ನಿವೃತ್ತಿಯಾದ ನಂತರ, 2000ರಲ್ಲಿ ಅಂಡರ್-19 ವಿಶ್ವಕಪ್ ಗೆದ್ದ ಭಾರತೀಯ ತಂಡದ ಮುಖ್ಯ ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದರು. ಆ ತಂಡದಲ್ಲಿ ಮೊಹಮ್ಮದ್ ಕೈಫ್ ಮತ್ತು ಯುವರಾಜ್ ಸಿಂಗ್ ಕೂಡ ಇದ್ದಿದ್ದು ವಿಶೇಷ.
ಬಿಸಿಸಿಐ ಅಧ್ಯಕ್ಷರಾಗಿಯೂ ಸೇವೆ
ರಾಷ್ಟ್ರೀಯ ಪುರುಷರ ಕ್ರಿಕೆಟ್ ತಂಡದ ಆಯ್ಕೆಗಾರರಾಗಿ ಸೇವೆ ಸಲ್ಲಿಸಿದ್ದಾರೆ. ನಂತರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಹೀಗೆ ಕರ್ನಾಟಕ ಮೂಲದ ಅವರು ಕ್ರಿಕಟ್ ಇತಿಹಾಸದಲ್ಲಿ ಪ್ರಮುಖ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಸಾಧನೆ ಮಾಡಿದ್ದಾರೆ.
ರಾಹುಲ್ ದ್ರಾವಿಡ್ ಸಾಧನೆಗಳ ವಿವರ
ಭಾರತೀಯ ಕ್ರಿಕೆಟ್ ಕಂಡ ಅತ್ಯಂತ ಶಿಸ್ತಿನ ಮತ್ತು ನಿಸ್ವಾರ್ಥ ಆಟಗಾರರಲ್ಲಿ ಕರ್ನಾಟಕದ ರಾಹುಲ್ ದ್ರಾವಿಡ್ ಒಬ್ಬರು. ಒಟ್ಟು 509 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಅವರು ಎಲ್ಲಾ ಮಾದರಿಯ ಕ್ರಿಕೆಟ್ ಸೇರಿ 24,000ಕ್ಕೂ ಹೆಚ್ಚು ರನ್‌ಗಳನ್ನು ಸಿಡಿಸಿದ್ದಾರೆ.
ಕೇವಲ ಬ್ಯಾಟಿಂಗ್ ಮಾತ್ರವಲ್ಲದೆ, ಫೀಲ್ಡಿಂಗ್‌ನಲ್ಲೂ ಅಪ್ರತಿಮ ಚಾಕಚಕ್ಯತೆ ಹೊಂದಿದ್ದ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400ಕ್ಕೂ ಹೆಚ್ಚು ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ವಿಶೇಷವಾಗಿ ಸ್ಲಿಪ್‌ನಲ್ಲಿ ಉತ್ತಮ ಫೀಲ್ಡಿಂಗ್ ಮಾಡಿ ವಿಶ್ವ ದಾಖಲೆ ಬರೆದಿದ್ದಾರೆ. ಇವರ ನಾಯಕತ್ವದಲ್ಲಿ ಭಾರತ ತಂಡವು 2007ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಅವರದೇ ನೆಲದಲ್ಲಿ ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು.
ಕ್ರಿಕೆಟ್‌ನಿಂದ ನಿವೃತ್ತಿಯಾದ ನಂತರ ಅವರು ಭಾರತದ ಎ ಮತ್ತು ಅಂಡರ್-19 ತಂಡಗಳ ಮುಖ್ಯ ತರಬೇತುದಾರರಾಗಿ ಯುವ ಪ್ರತಿಭೆಗಳನ್ನು ಬೆಳೆಸಿದರು. ನಂತರ ಭಾರತೀಯ ರಾಷ್ಟ್ರೀಯ ಪುರುಷರ ತಂಡದ ಮುಖ್ಯ ತರಬೇತುದಾರರಾಗಿ ಜವಾಬ್ದಾರಿ ವಹಿಸಿಕೊಂಡು, 2024ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು.
ಮಿಥಾಲಿ ರಾಜ್ ಸಾಧನೆಗಳು
ಭಾರತೀಯ ಮಹಿಳಾ ಕ್ರಿಕೆಟ್ ಅನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಕೀರ್ತಿ ಮಿಥಾಲಿ ರಾಜ್ ಅವರಿಗೆ ಸಲ್ಲುತ್ತದೆ. ಮಿಥಾಲಿ ಅವರು ಭಾರತದ ಪರ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಒಟ್ಟು 333 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,000ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ ವಿಶ್ವದ ಮೊದಲ ಮಹಿಳಾ ಕ್ರಿಕೆಟರ್ ಎಂಬ ಐತಿಹಾಸಿಕ ದಾಖಲೆ ಇವರ ಹೆಸರಿನಲ್ಲಿದೆ.
ಇವರ ಸಮರ್ಥ ನಾಯಕತ್ವದಲ್ಲಿ ಭಾರತೀಯ ಮಹಿಳಾ ತಂಡವು ಎರಡು ಬಾರಿ (2005 ಮತ್ತು 2017) ವಿಶ್ವಕಪ್ ಫೈನಲ್ ತಲುಪುವ ಮೂಲಕ ಅದ್ಭುತ ಸಾಧನೆ ಮಾಡಿತ್ತು. ಎರಡು ದಶಕಗಳಿಗೂ ಹೆಚ್ಚು ಕಾಲ ಕ್ರಿಕೆಟ್ ಅಂಗಳದಲ್ಲಿ ಸಕ್ರಿಯರಾಗಿದ್ದ ಮಿಥಾಲಿ, ಮಹಿಳಾ ಕ್ರಿಕೆಟ್‌ನ ‘ಸಚಿವ ತೆಂಡೂಲ್ಕರ್’ ಎಂದೇ ಹೆಸರು ಪಡೆದಿದ್ದಾರೆ.
ಮಿಥಾಲಿ ರಾಜ್‌ಗೆ ಒಲಿದ ಪ್ರಶಸ್ತಿಗಳು
* ಅರ್ಜುನ ಪ್ರಶಸ್ತಿ- 2003
* ಪದ್ಮಶ್ರೀ – 2015
* ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ – 2021
-

ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ
-

Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್
-

Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ
-

ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion
-

ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ
-

Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು
-

ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ
-

ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ
-

Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ
-

Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ – ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು
-

Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ
-

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ
Disclaimer: This content was automatically imported from a third-party source via RSS feed. The original source is: https://kannada.oneindia.com/news/sports/bcci-rahul-dravid-roger-binny-and-mithali-raj-to-receive-ck-nayudu-lifetime-achievement-awards-447081.html. xn--babytilbehr-pgb.com does not claim ownership of this content. All rights remain with the original publisher.
