
Karnataka
oi-Madhusudhan KR
ಬಾಗಲಕೋಟೆ, ಮಾರ್ಚ್ 14: ರಾಜ್ಯದ ಮಹತ್ವಾಕಾಂಕ್ಷೆಯ ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ತುಂಗಭದ್ರಾ ನೀರಾವರಿ ಯೋಜನೆಗೆ ಆಂಧ್ರ ಪ್ರದೇಶ ಸರ್ಕಾರ ಒಡ್ಡುತ್ತಿರುವ ಅಡ್ಡಿಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನೆರೆಯ ರಾಜ್ಯದ ತಗಾದೆಗೆ ತಿರುಗೇಟು ನೀಡಲು ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಈ ವಿಷಯವಾಗಿ ರಾಜ್ಯದ ಸಂಸದರೊಂದಿಗೆ ದೆಹಲಿಯಲ್ಲಿ ತುರ್ತು ಸಭೆ ನಡೆಸಲು ನಿರ್ಧರಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, “ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾದ ಯುಕೆಪಿ 3ನೇ ಹಂತಕ್ಕೆ ತಕರಾರು ಎತ್ತಿರುವ ಹಾಗೂ ತುಂಗಭದ್ರಾ ಅಣೆಕಟ್ಟಿನ ನೀರು ಪೋಲು ತಡೆಯಲು ಸಹಕಾರ ನೀಡದಿರುವ ಆಂಧ್ರ ಪ್ರದೇಶದ ನಡೆ ವಿರುದ್ಧ ಧ್ವನಿ ಎತ್ತಲಾಗುವುದು. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಹಿನ್ನೆಲೆಯಲ್ಲಿ ರಾಜ್ಯದ ಸಂಸದರ ಜೊತೆ ದೆಹಲಿಯ ಕರ್ನಾಟಕ ಭವನದಲ್ಲಿ ಮುಂಬರುವ ಮಂಗಳವಾರ ಸಭೆ ನಡೆಸಲಾಗುವುದು,” ಎಂದು ತಿಳಿಸಿದರು.

26,000 ಕೋಟಿ ಮೊತ್ತದ ಕಾಮಗಾರಿ ಆರಂಭ
“ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ ಹಾಗೂ ಭೂಸ್ವಾಧೀನ ಪ್ರಕ್ರಿಯೆ ಮಾಡಬಾರದು ಎಂದು ಆಂಧ್ರ ಪ್ರದೇಶದವರು ಕೇಂದ್ರ ಸರ್ಕಾರಕ್ಕೆ ಆಕ್ಷೇಪಣಾ ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ಕೇಂದ್ರ ಸರ್ಕಾರ ನಮಗೆ ಪತ್ರ ಬರೆದು ಸ್ಪಷ್ಟನೆ ಕೇಳಿದೆ. ನ್ಯಾಯಾಧೀಕರಣ ಆದೇಶದ ಪ್ರಕಾರ ನಮ್ಮ ಪಾಲಿನ ನೀರಿನ ಬಳಕೆಗೆ ಯೋಜನೆ ಮಾಡುತ್ತಿದ್ದು, ಈಗಾಗಲೇ 26 ಸಾವಿರ ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳನ್ನು ಆರಂಭಿಸಿದ್ದೇವೆ,” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿವರಿಸಿದರು.
ತಗಾದೆ ತೆಗೆದ ಆಂಧ್ರ ಸರ್ಕಾರ
ನಾವು ಈಗಲೇ ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ ಮಾಡುತ್ತಿಲ್ಲ. 2010ರಲ್ಲಿ ಆಗಿರುವ ಆದೇಶದ ಅನುಸಾರ ನಮ್ಮ ಪಾಲಿನ ನೀರು ಬಳಕೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಇದಕ್ಕೆ ಆಂಧ್ರ ಪ್ರದೇಶ ಸರ್ಕಾರ ತಗಾದೆ ತೆಗೆದಿದೆ. ಜೊತೆಗೆ, ತುಂಗಭದ್ರಾ ಅಣೆಕಟ್ಟೆಯಿಂದ ನಮಗೆ 30 ಟಿಎಂಸಿ ನೀರು ವ್ಯರ್ಥವಾಗುತ್ತಿದ್ದು, ಇದಕ್ಕೆ ಪರ್ಯಾಯ ಮಾರ್ಗ ಕಂಡುಕೊಳ್ಳಲು ಆಂಧ್ರ ಸರ್ಕಾರ ನಮಗೆ ಸಹಕಾರ ನೀಡುತ್ತಿಲ್ಲ.
ಕರ್ನಾಟಕದ ಸಂಸದರ ಜೊತೆ ಚರ್ಚೆ ಎಂದ ಡಿಸಿಎಂ
ಈ ಎಲ್ಲಾ ವಿಚಾರಗಳ ಬಗ್ಗೆ ನಮ್ಮ ಸಂಸದರ ಜೊತೆ ಚರ್ಚೆ ಮಾಡಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ನಾನು, ಸಚಿವರಾದ ಹೆಚ್.ಕೆ ಪಾಟೀಲ್, ಎಂ.ಬಿ. ಪಾಟೀಲ್, ಬೋಸರಾಜು ಅವರು ಮಂಗಳವಾರ ದೆಹಲಿಗೆ ಹೋಗುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
-

Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು
-

ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ
-

Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್
-

Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ
-

ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion
-

ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ
-

Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು
-

ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ
-

ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ
-

Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ
-

Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ – ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು
-

Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/d-k-shivakumar-to-hold-delhi-meeting-with-mps-over-krishna-river-upperbank-tungabhadra-waterdispute-447093.html. xn--babytilbehr-pgb.com does not claim ownership of this content. All rights remain with the original publisher.
