Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್‌ ಡ್ಯಾನ್ಸ್‌: ಚರ್ಚೆ ಹುಟ್ಟುಹಾಕಿದ ವೈರಲ್‌ ವಿಡಿಯೋ | Viral Video Controversy Students Towel Dance at West Bengal Private School Sparks Debate in Kolkata

India

oi-Manohara M

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಜೀವನ್ ಜ್ಯೋತಿ ಮಾಡೆಲ್ ಸ್ಕೂಲ್‌ನಲ್ಲಿ ನಡೆದಿದೆ ಎನ್ನಲಾದ ಶಾಲಾ ಸಮಾರಂಭವೊಂದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ವಿಡಿಯೋದಲ್ಲಿ ಶಾಲಾ ವಿದ್ಯಾರ್ಥಿನಿಯರ ತಂಡವೊಂದು ಮೈಮೇಲೆ ಟವಲ್ ಸುತ್ತಿರುವಂತಹ ಉಡುಪು ಧರಿಸಿ ವೇದಿಕೆಯ ಮೇಲೆ ನೃತ್ಯ ಪ್ರದರ್ಶನ ನೀಡುತ್ತಿರುವುದು ಕಂಡುಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ನೃತ್ಯವನ್ನು “ಟವಲ್ ಡ್ಯಾನ್ಸ್” ಎಂದು ಕರೆಯಲಾಗುತ್ತಿದ್ದು, ಶಾಲೆಗಳಲ್ಲಿ ಇಂತಹ ಪ್ರದರ್ಶನ ನಡೆದಿರುವುದು ಅನೇಕರ ಕೆಂಗಣ್ಣಿಗೆ ಗುರಿಯಾಗಿದೆ.

ವೇದಿಕೆಯಲ್ಲಿ ತುಂಡುಡುಗೆ ಡ್ಯಾನ್ಸ್‌

ವೈರಲ್ ಆಗಿರುವ ವಿಡಿಯೋದಲ್ಲಿ, ಹಿನ್ನೆಲೆಯಲ್ಲಿ ಸಂಗೀತ ಪ್ರಸಾರವಾಗುತ್ತಿದ್ದರೆ, ವಿದ್ಯಾರ್ಥಿನಿಯರು ಗ್ರೂಪ್‌ ಡ್ಯಾನ್ಸ್‌ ಮಾಡುತ್ತಿದ್ದಾರೆ. ವೇದಿಕೆಯ ಹಿಂಭಾಗದಲ್ಲಿರುವ ಬ್ಯಾನರ್‌ನಲ್ಲಿ ಶಾಲೆಯ ಹೆಸರು ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಪ್ರೇಕ್ಷಕರ ಸಾಲಿನಲ್ಲಿ ಸಣ್ಣ ಮಕ್ಕಳು ಸೇರಿದಂತೆ ಅನೇಕ ವಿದ್ಯಾರ್ಥಿಗಳು ಕುಳಿತು ಈ ಪ್ರದರ್ಶನವನ್ನು ವೀಕ್ಷಿಸುತ್ತಿದ್ದಾರೆ. ಈ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ, ಪೋಷಕರು ಮತ್ತು ಸಾರ್ವಜನಿಕರು ಶಾಲಾ ಆಡಳಿತ ಮಂಡಳಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Viral Video

ನೆಟ್ಟಿಗರು ಈ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಮಕ್ಕಳ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವೇದಿಕೆಯಲ್ಲಿ ಇಂತಹ ನೃತ್ಯಗಳನ್ನು ಅಳವಡಿಸಿಕೊಂಡಿರುವುದು ಎಷ್ಟರ ಮಟ್ಟಿಗೆ ಸಮಂಜಸ ಎಂದು ಪ್ರಶ್ನಿಸುತ್ತಿದ್ದಾರೆ. “ಶಾಲಾ ಕಾರ್ಯಕ್ರಮಗಳಲ್ಲಿ ಇಂತಹ ಪ್ರದರ್ಶನಗಳಿಗೆ ಅವಕಾಶ ನೀಡಿದ್ದು ಹೇಗೆ?” ಎಂದು ಅನೇಕರು ಆಡಳಿತ ಮಂಡಳಿಯ ಜವಾಬ್ದಾರಿಯನ್ನು ಪ್ರಶ್ನಿಸಿದ್ದಾರೆ. ಆದರೆ ಈ ವಿಡಿಯೋ ಮೂಲ ಮತ್ತು ಸಮಯದ ಬಗ್ಗೆ ಇನ್ನೂ ನಿಖರ ಮಾಹಿತಿ ಲಭ್ಯವಾಗಿಲ್ಲ.

ಶಾಲಾ ಆಡಳಿತ ಮಂಡಳಿ ವಿರುದ್ಧ ಆಕ್ರೋಶ

ಈ ವಿವಾದದ ಕುರಿತು ಜೀವನ ಜ್ಯೋತಿ ಮಾಡೆಲ್ ಶಾಲೆಯ ಕಡೆಯಿಂದ ಈವರೆಗೆ ಯಾವುದೇ ಅಧಿಕೃತ ಸ್ಪಷ್ಟನೆ ಅಥವಾ ಪ್ರತಿಕ್ರಿಯೆ ಬಂದಿಲ್ಲ. ಅಲ್ಲದೆ, ಸ್ಥಳೀಯ ಶಿಕ್ಷಣ ಇಲಾಖೆಯು ಈ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆಯೇ ಎಂಬುದು ಇನ್ನೂ ತಿಳಿದುಬಂದಿಲ್ಲ. ಸದ್ಯಕ್ಕೆ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯನ್ನು ಹುಟ್ಟುಹಾಕಿದ್ದು, ಜನರು ಶಾಲಾ ಆಡಳಿತ ಮಂಡಳಿಯಿಂದ ಉತ್ತರದ ನಿರೀಕ್ಷೆಯಲ್ಲಿದ್ದಾರೆ.

ವರದಿಗಳ ಪ್ರಕಾರ, ಇದು ಸಿಬಿಎಸ್‌ಇ (CBSE) ಸಂಯೋಜಿತ ಇಂಗ್ಲಿಷ್ ಮಾಧ್ಯಮ ಶಾಲೆಯೊಂದರ ಸಾಂಸ್ಕೃತಿಕ ಕಾರ್ಯಕ್ರಮದ ವಿಡಿಯೋ ಎನ್ನಲಾಗಿದೆ. ಶಾಲಾ ಸಮಾರಂಭದಲ್ಲಿ ವಿದ್ಯಾರ್ಥಿನಿಯರು ನೀಡಿದ ನೃತ್ಯ ಪ್ರದರ್ಶನ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ವೈರಲ್ ಆಗಿರುವ ಈ ವಿಡಿಯೋದಲ್ಲಿ, ಶಾಲಾ ವಿದ್ಯಾರ್ಥಿನಿಯರು ವೇದಿಕೆಯ ಮೇಲೆ ‘ಮುಜ್ರಾ’ ಶೈಲಿಯ ನೃತ್ಯವನ್ನು ಮಾಡಿದ್ದು, ಶೈಕ್ಷಣಿಕ ಸಂಸ್ಥೆಯೊಂದರಲ್ಲಿ ಇಂತಹ ನೃತ್ಯ ಪ್ರದರ್ಶನಕ್ಕೆ ಅವಕಾಶ ನೀಡಿದ್ದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ.

ಈ ಕಾರ್ಯಕ್ರಮವು ಶಾಲೆಯ ಆವರಣದಲ್ಲೇ ನಡೆದಿದ್ದು, ವಿವಿಧ ತರಗತಿಗಳ ನೂರಾರು ವಿದ್ಯಾರ್ಥಿಗಳು ಪ್ರೇಕ್ಷಕರ ಸಾಲಿನಲ್ಲಿ ಕುಳಿತು ಈ ಪ್ರದರ್ಶನವನ್ನು ವೀಕ್ಷಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಶಾಲಾ ಹಂತದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರಬೇಕು, ಆದರೆ ಇಂತಹ ಪ್ರದರ್ಶನಗಳು ಶಾಲಾ ಶಿಕ್ಷಣದ ಮೌಲ್ಯಗಳಿಗೆ ಧಕ್ಕೆ ತರುತ್ತವೆ ಎಂದು ಅನೇಕರು ಈ ವಿಡಿಯೋಗೆ ಕಾಮೆಂಟ್‌ ಮಾಡುವ ಮೂಲಕ ಕಳವಳ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಹರಿದಾಡುತ್ತಿದ್ದಂತೆ, ಪೋಷಕರು ಮತ್ತು ಶಿಕ್ಷಣ ತಜ್ಞರು ಶಾಲಾ ಆಡಳಿತ ಮಂಡಳಿಯ ಜವಾಬ್ದಾರಿಯನ್ನು ಪ್ರಶ್ನಿಸುತ್ತಿದ್ದಾರೆ. ಸಿಬಿಎಸ್‌ಇ ಅಂತಹ ಪ್ರತಿಷ್ಠಿತ ಮಂಡಳಿಗೆ ಒಳಪಟ್ಟ ಶಾಲೆಯಲ್ಲಿ ಇಂತಹ ಘಟನೆ ನಡೆದಿರುವುದು ಅನೇಕರನ್ನು ಅಚ್ಚರಿಗೊಳಿಸಿದೆ. ಈ ಘಟನೆಯು ಶಾಲಾ ಕಾರ್ಯಕ್ರಮಗಳ ಮೇಲ್ವಿಚಾರಣೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಆಯ್ಕೆಯ ಬಗ್ಗೆಯೂ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಈ ವಿಡಿಯೋ ಈಗ ಎಲ್ಲೆಡೆ ವೈರಲ್‌ ಆಗುತ್ತಿದೆ.


Disclaimer: This content was automatically imported from a third-party source via RSS feed. The original source is: https://kannada.oneindia.com/news/india/viral-video-controversy-students-towel-dance-at-west-bengal-private-school-sparks-debate-in-kolkata-447151.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo