ಆರ್‌ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್ | Abhishek Sharma Shines in Practice Match as Sunrisers Hyderabad Gear Up for RCB Clash in IPL 2026

Sports

oi-Madhusudhan KR

Abhishek Sharma: ಕ್ರಿಕೆಟ್ ಪ್ರೇಮಿಗಳ ಬಹುನಿರೀಕ್ಷಿತ ಐಪಿಎಲ್ 2026ರ ದಿನಗಣನೆ ಆರಂಭವಾಗಿದೆ. ಕಾವ್ಯಾ ಮಾರನ್ ಮಾಲೀಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಇದಕ್ಕೂ ಮುನ್ನ ಅಭಿಷೇಕ್ ಶರ್ಮಾ ಅವರು ಭರ್ಜರಿ ಬ್ಯಾಟಿಂಗ್‌ ಮೂಲಕ ರನ್‌ಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.

ಆರ್‌ಸಿಬಿ ವಿರುದ್ಧ ರೋಚಕ ಪಂದ್ಯವು ಮಾರ್ಚ್ 28ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಳೆದ 2025ರ ಸೀಸನ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿರುವ ರಾಯಲ್‌ ಚಾಲೆಂಜರ್ಸ್ ಬೆಂಗಳೂರು, ಈ ಬಾರಿ ತನ್ನ ತವರು ಮೈದಾನದಲ್ಲೇ ಟೂರ್ನಿಯನ್ನು ಆರಂಭಿಸುತ್ತಿರುವುದು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ.

Abhishek Sharma Stars in Practice Match as Sunrisers Hyderabad Gear Up for RCB Clash in IPL 2026

ಐಪಿಎಲ್‌ಗೂ ಮುನ್ನ ಅಭಿಷೇಕ್ ಅಬ್ಬರದ ಬ್ಯಾಟಿಂಗ್

ಐಪಿಎಲ್ ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆ, ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಟಗಾರರು ಭರ್ಜರಿ ತಾಲೀಮು ನಡೆಸುತ್ತಿದ್ದಾರೆ. ಇತ್ತೀಚೆಗೆ ನಡೆದ ತಂಡದ ಆಂತರಿಕ ಅಭ್ಯಾಸ ಪಂದ್ಯದಲ್ಲಿ ಸ್ಟಾರ್ ಆಟಗಾರ ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಆಕ್ರಮಣಕಾರಿ ಬ್ಯಾಟಿಂಗ್‌ಗೆ ಹೆಸರಾದ ಅಭಿಷೇಕ್ ಶರ್ಮಾ, ಎಸ್‌ಆರ್‌ಎಚ್‌ ಎ ತಂಡದ ಪರವಾಗಿ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದರು.

ತಮ್ಮ ಈ ಇನ್ನಿಂಗ್ಸ್‌ನಲ್ಲಿ ಅವರು ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟುವ ಮೂಲಕ ಎದುರಾಳಿ ಬೌಲರ್‌ಗಳನ್ನು ಬೆಚ್ಚಿಬೀಳಿಸಿದರು. ಕೇವಲ 6 ರನ್‌ಗಳ ಅಂತರದಲ್ಲಿ ಶತಕ ವಂಚಿತರಾದರಾದರೂ, ಅವರ ಈ ಫಾರ್ಮ್ ನೋಡಿ ಹೈದರಾಬಾದ್ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಆರ್‌ಸಿಬಿ ವಿರುದ್ಧದ ಮೊದಲ ಪಂದ್ಯಕ್ಕೂ ಮುನ್ನವೇ ಅಭಿಷೇಕ್ ಶರ್ಮಾ ಇಷ್ಟು ಭರ್ಜರಿ ಫಾರ್ಮ್‌ನಲ್ಲಿರುವುದು ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಆನೆ ಬಲ ಬಂದಂತಾಗಿದೆ.

ಅಭ್ಯಾಸ ಪಂದ್ಯದ ರನ್‌ಗಳ ವಿವರಗಳು

ತೆಲಂಗಾಣದ ಹೈದರಾಬಾದ್‌ನ ಉಪ್ಪಳದಲ್ಲಿರುವ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್ ಆಂತರಿಕ ಅಭ್ಯಾಸ ಪಂದ್ಯದಲ್ಲಿ ಬ್ಯಾಟರ್‌ಗಳು ಅಬ್ಬರಿಸಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ A ತಂಡವು ನಿಗದಿತ 21 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 253 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿತು.

ಸ್ಫೋಟಕ ಬ್ಯಾಟರ್ ಕ್ಲಾಸೆನ್ 31 ಎಸೆತಗಳಲ್ಲಿ 49 ರನ್ ಗಳಿಸಿ ಮಿಂಚಿಸದರು. ಅನ್-ಕ್ಯಾಪ್ಡ್ ಭಾರತೀಯ ಆಟಗಾರ ಸಲಿಲ್ ಅರೋರಾ ಕೇವಲ 16 ಎಸೆತಗಳಲ್ಲಿ 47 ರನ್ ಚಚ್ಚುವ ಮೂಲಕ ಎಲ್ಲರ ಗಮನ ಸೆಳೆದರು. ಬ್ಯಾಟರ್‌ಗಳ ಅಬ್ಬರದ ನಡುವೆಯೂ ಬೌಲರ್‌ಗಳು ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ ಉನಾದ್ಕತ್, 5 ಓವರ್‌ಗಳಲ್ಲಿ 48 ರನ್ ನೀಡಿ ಪ್ರಮುಖ 5 ವಿಕೆಟ್‌ಳನ್ನ ಪಡೆದರು.

ಆಲ್ ರೌಂಡರ್ ನಿತೀಶ್ ರೆಡ್ಡಿ 3 ವಿಕೆಟ್ ಪಡೆಯುವ ಮೂಲಕ ಶಿಸ್ತಿನ ಬೌಲಿಂಗ್ ದಾಳಿ ನಡೆಸಿದರು. ಒಟ್ಟಾರೆಯಾಗಿ, ಮಾರ್ಚ್ 28ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರುದ್ಧದ ಉದ್ಘಾಟನಾ ಪಂದ್ಯಕ್ಕೂ ಮುನ್ನ ಹೈದರಾಬಾದ್ ಆಟಗಾರರು ಪೂರ್ಣ ಪ್ರಮಾಣದ ಸಿದ್ಧತೆಯಲ್ಲಿ ತೊಡಗಿದ್ದಾರೆ.

ಎಸ್‌ಆರ್‌ಎಚ್‌ ಬಿ ತಂಡದ ಪ್ರದರ್ಶನ

ಎಸ್‌ಆರ್‌ಎಚ್‌ ಎ ತಂಡ ನೀಡಿದ್ದ ಬೃಹತ್ ಗುರಿಯನ್ನು ಬೆನ್ನಟ್ಟಿದ ಬಿ ತಂಡವು ಇನ್ನೂ ಭೀಕರವಾಗಿ ಬ್ಯಾಟಿಂಗ್ ಮಾಡಿತು. ಈ ತಂಡವು ಕೇವಲ 21 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 282 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕುವ ಮೂಲಕ ತನ್ನ ಬ್ಯಾಟಿಂಗ್ ಶಕ್ತಿಯನ್ನು ಪ್ರದರ್ಶಿಸಿತು.

ಸ್ಟಾರ್ ಆಟಗಾರ ಇಶಾನ್ ಕಿಶನ್ ಸಿಕ್ಸರ್‌ಗಳ ಮಳೆ ಸುರಿಸುವ ಮೂಲಕ ಕೇವಲ 25 ಎಸೆತಗಳಲ್ಲಿ 72 ರನ್ ಚಚ್ಚಿದರು. ಈ ಪಂದ್ಯದಲ್ಲಿ ಎ ತಂಡದ ಪರವಾಗಿ ಗಮನ ಸೆಳೆದ ಸಲಿಲ್, ಬಿ ತಂಡದಲ್ಲಿಯೂ ಸಹ 26 ಎಸೆತಗಳಲ್ಲಿ 56 ರನ್ ಸಿಡಿಸಿದರು. ಕೊನೆಯಲ್ಲಿ ಅಬ್ಬರಿಸಿದ ಹರ್ಷ್ ದುಬೆ ಕೇವಲ 14 ಎಸೆತಗಳಲ್ಲಿ 37 ರನ್ ಕಲೆಹಾಕಿ ರನ್‌ಹಳನ್ನು ಹೆಚ್ಚಿಸಿದರು.

ಬೌಲಿಂಗ್‌ ವಿಭಾಗಕ್ಕೆ ಬಂದರೆ, ಬೃಹತ್ ರನ್ ಹರಿದುಬಂದರೂ ಸಹ, ಹರ್ಷಲ್ ಪಟೇಲ್ ಚಾಣಾಕ್ಷ ಬೌಲಿಂಗ್ ದಾಳಿ ನಡೆಸಿ 4 ಓವರ್‌ಗಳಲ್ಲಿ 45 ರನ್ ನೀಡಿ 3 ಪ್ರಮುಖ ವಿಕೆಟ್‌ಗಳನ್ನು ಪಡೆದರು. ಒಟ್ಟಾರೆಯಾಗಿ ಹೇಳುವುದಾದರೆ, ಸನ್‌ರೈಸರ್ಸ್ ಹೈದರಾಬಾದ್‌ನ ಬ್ಯಾಟಿಂಗ್ ಲೈನ್-ಅಪ್ ಅತ್ಯಂತ ಭೀಕರವಾಗಿದೆ ಎಂಬುದು ಈ ಅಭ್ಯಾಸ ಪಂದ್ಯದಿಂದ ಸಾಬೀತಾಗಿದೆ. ಆದರೆ, ಆರ್‌ಸಿಬಿಯಲ್ಲೂ ಕೂಡ ಅಂತಹ ಆಕ್ರಮಣಕಾರಿ ಆಟಗಾರರೇ ಇದ್ದು, ಮೊದಲ ಪಂದ್ಯದಲ್ಲಿ ಎಸ್‌ಆರ್‌ಎಚ್‌ ಹೇಗೆ ಪ್ರದರ್ಶನ ತೋರಲಿದೆ ಎಂದು ಕಾದುನೋಡಬೇಕಿದೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/sports/abhishek-sharma-shines-in-practice-match-as-sunrisers-hyderabad-gear-up-for-rcb-clash-in-ipl-2026-447939.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo