ಲವ್ ಮಾಕ್‌ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ | Love Mocktail 3: 2nd Half of My Story Copied, Says Raghavendra; Warns Writers Stay Cautious

Entertainment

oi-Hitesh Y

Love Mocktail 3: ಬರಹಗಾರ ಹಾಗೂ ಮಾರಿಗೋಲ್ಡ್‌ ನಿರ್ದೇಶಕ ರಾಘವೇಂದ್ರ ಎಂ. ನಾಯ್ಕ್‌ ಅವರು ಹಂಚಿಕೊಂಡಿರುವ ಬರಹವು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. Love Mocktail 3 ಕಥೆಯನ್ನು ನಟ, ನಿರ್ದೇಶಕ ಕೃಷ್ಣರೊಂದಿಗೆ ಹಂಚಿಕೊಂಡಿದ್ದೆ ಅವರು, ನನ್ನ ಕಥೆ ದ್ವಿತೀಯಾರ್ದ ಅಥವಾ ಎರಡನೇ ಭಾಗವನ್ನು ನಕಲಿಸಿದ್ದಾರೆ ಎಂದು ರಾಘವೇಂದ್ರ ಎಂ. ನಾಯ್ಕ್‌ ಅವರು ಆರೋಪ ಮಾಡಿದ್ದಾರೆ. ಸಿನಿಮಾ ಬರಹಗಾರರಿಗೆ ಕಿವಿ ಮಾತು ಎನ್ನುವ ಬರಹದೊಂದಿಗೆ ಅವರು ಎರಡು ಪ್ರತ್ಯೇಕ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.

ಸಿನಿಮಾ ಬರಹಗಾರರೇ ಮತ್ತು ಭವಿಷ್ಯದ ನಿರ್ದೇಶಕರೇ ನನ್ನದೊಂದು ಸಣ್ಣ ಕಿವಿಮಾತು: ನೀವು ಯಾವುದೇ ಕಥೆ ಸಿದ್ಧಪಡಿಸಿದಾಗ, ಮೊದಲು ಅದನ್ನು SWA (Screenwriters Association) ನಲ್ಲಿ ನೋಂದಾಯಿಸಿಕೊಳ್ಳಿ. ಕಥೆ ಮತ್ತು ಚಿತ್ರಕಥೆ ಸಿದ್ಧವಾಗುವ ಪ್ರತಿ ಹಂತದ ಕಡತವನ್ನೂ (File) ನಿಮ್ಮ ಸ್ವಂತ ಇಮೇಲ್ ವಿಳಾಸಕ್ಕೆ ಕಳುಹಿಸಿ ಸುರಕ್ಷಿತವಾಗಿಟ್ಟುಕೊಳ್ಳಿ. ಎಲ್ಲಕ್ಕಿಂತ ಮುಖ್ಯವಾಗಿ, ನೀವು ಯಾರಿಗಾದರೂ ಕಥೆ ವಿವರಿಸುವ (Narration) ಮೊದಲು ಅದರ ಆಡಿಯೋ ರೆಕಾರ್ಡ್ ಮಾಡಿಕೊಳ್ಳುವುದನ್ನು ಮರೆಯಬೇಡಿ. ಕಥೆ ಹೇಳುವ ಮುನ್ನ ನಡೆಸುವ ಸಂಭಾಷಣೆ ಹಾಗೂ ಕಥೆ ಮುಗಿದ ನಂತರದ ಚರ್ಚೆಗಳೂ ಅದರಲ್ಲಿ ದಾಖಲಾಗಿರಲಿ. ಮೀಟಿಂಗ್ ಮುಗಿದ ಕೂಡಲೇ ಆ ಆಡಿಯೋ ಫೈಲ್ ಅನ್ನು ನಿಮಗೆ ನೀವೇ ಇಮೇಲ್ ಮಾಡಿಕೊಳ್ಳಿ. ಆಗ ನೀವು ನಾಯಕನಿಗಾಗಲಿ, ನಿರ್ಮಾಪಕರಿಗಾಗಲಿ ಅಥವಾ ನಿರ್ದೇಶಕರಿಗಾಗಲಿ ಕಥೆ ವಿವರಿಸಿದ್ದೀರಿ ಎಂಬುದಕ್ಕೆ ಭದ್ರವಾದ ದಾಖಲೆ ಇರುತ್ತದೆ.

Love Mocktail 3

ಇಂತಹ ಮುನ್ನೆಚ್ಚರಿಕೆ ವಹಿಸದ ಕಾರಣ ಇಂದು ನನಗೆ ದೊಡ್ಡ ದ್ರೋಹವಾಗಿದೆ. ನನ್ನ ಕಥೆಯ ಇಡೀ ದ್ವಿತೀಯಾರ್ಧವನ್ನು (Second Half) ಬಳಸಿಕೊಂಡು ಸಿನಿಮಾ ಮಾಡಿ ಬಿಡುಗಡೆಗೊಳಿಸಿದ್ದಾರೆ; ಆ ಸಿನಿಮಾ ಈಗ ಯಶಸ್ವಿಯಾಗಿ ಪ್ರದರ್ಶನವನ್ನೂ ಕಾಣುತ್ತಿದೆ. ಈ ಕಥೆ ನನ್ನದು ಎಂಬುದು ನನ್ನ ಆಪ್ತ ವಲಯದ ಬಹಳಷ್ಟು ನಿರ್ಮಾಪಕರಿಗೆ, ತಂತ್ರಜ್ಞರಿಗೆ ಹಾಗೂ ಸ್ನೇಹಿತರಿಗೆ ತಿಳಿದಿದೆ. ಕನ್ನಡದ ಖ್ಯಾತ ನಿರ್ದೇಶಕರು ಮತ್ತು ನಿರ್ಮಾಪಕರು ಈ ಕಥೆಯನ್ನು ಸಿನಿಮಾ ಮಾಡಲು ನಿರ್ಧರಿಸಿ, ನನಗೆ ಮುಂಗಡ ಸಂಭಾವನೆಯನ್ನೂ ನೀಡಿದ್ದರು. ಇದೇ ನಿರ್ಮಾಪಕ-ನಿರ್ದೇಶಕರ ಜೊತೆಗೂಡಿ ಎರಡು ವರ್ಷಗಳ ಹಿಂದೆಯೇ ನಾನು ಆ ‘ನಿರ್ದೇಶಕ, ನಿರ್ಮಾಪಕ ಕಮ್ ನಟ’ನಿಗೆ ಕಥೆ ಹೇಳಿದ್ದೆ.

ನನ್ನ ಬಳಿ ಆ ಕಥೆ ನನ್ನದೇ ಎನ್ನುವುದಕ್ಕೆ ಸೂಕ್ತ ದಾಖಲೆಗಳಿವೆಯಾದರೂ, “ನಾನು ಅವರಿಗೆ ಈ ಕಥೆಯನ್ನೇ ಹೇಳಿದ್ದೆ” ಎನ್ನುವುದಕ್ಕೆ ಪೂರಕ ದಾಖಲೆಗಳಿಲ್ಲ. ಈ ತಾಂತ್ರಿಕ ಕಾರಣದಿಂದಾಗಿ ನಾನು ಅಸಹಾಯಕನಾಗಿ ಸುಮ್ಮನಿರಬೇಕಾಗಿದೆ. ಭವಿಷ್ಯದಲ್ಲಿ ಬೇರೆ ಯಾವ ಬರಹಗಾರರಿಗೂ ಇಂತಹ ಮೋಸ ಆಗಬಾರದು ಎಂಬ ಸದಾಶಯದಿಂದ ಮತ್ತು ಅವರು ಮುನ್ನೆಚ್ಚರಿಕೆ ವಹಿಸಲಿ ಎಂಬ ಕಾರಣಕ್ಕೆ ಈ ಪೋಸ್ಟ್ ಹಾಕುತ್ತಿದ್ದೇನೆ. ದಯವಿಟ್ಟು ಬರಹಗಾರರೇ, ನಿಮ್ಮ ಕಲ್ಪನೆಗೆ ಕನ್ನ ಬೀಳದಂತೆ ಜಾಗ್ರತೆ ವಹಿಸಿ. ನಿಮಗೆ ಶುಭವಾಗಲಿ. ಈ ಬರಹವನ್ನು ರಾಘವೇಂದ್ರ ನಾಯ್ಕ್‌ ಅವರು ಮೊದಲು ಹಂಚಿಕೊಂಡಿದ್ದರು. ಇದೀಗ ಮತ್ತೊಂದು ಬರಹವನ್ನೂ ಅವರು ಹಂಚಿಕೊಂಡಿದ್ದಾರೆ.

Disclaimer: This content was automatically imported from a third-party source via RSS feed. The original source is: https://kannada.oneindia.com/entertainment/love-mocktail-3-2nd-half-of-my-story-copied-says-raghavendra-warns-writers-stay-cautious-448073.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo