New Airport: ವಿಜಯಪುರ ಏರ್‌ಪೋರ್ಟ್‌ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್‌ | Vijayapura New Airport Ready: Karnataka Govt Releases ₹220 Crore Extra Fund; Night Landing Enabled

Karnataka

oi-Shankrappa Parangi

Vijayapura Airport: ಉತ್ತರ ಕರ್ನಾಟಕದ ಬಹುನಿರೀಕ್ಷೆಯ ವಿಜಯಪುರದ ನೂತನ ವಿಮಾನ ನಿಲ್ದಾಣದ (New Airport) ನಿರ್ಮಾಣ ಕೆಲಸ ಪೂರ್ಣಗೊಂಡಿದೆ. ರಾಜ್ಯ ಸರ್ಕಾರದಿಂದ ಬರೋಬ್ಬರಿ 220 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗಿದೆ. ನ್ಯಾಯಾಲಯದಲ್ಲಿನ ಪ್ರಕರಣಗಳ ವಿಚಾರಣೆ ಪೂರ್ಣಗೊಂಡಿದ್ದು, ಸಕರಾತ್ಮಕ ತೀರ್ಪು ಬರಲಿದೆ ಎಂದಿರುವ ರಾಜ್ಯ ಮೂಲಸೌಕರ್ಯಾಭಿವೃದ್ಧಿ ಮತ್ತು ಕೈಗಾರಿಕೆ ಸಚಿವ ಎಂಬಿ ಪಾಟೀಲ ಅವರು, ವಿಜಯಪುರ ಏರ್‌ಪೋರ್ಟ್‌ ಕನಸು ನನಸಾಗುವ ಕಾಲ ಹತ್ತಿರ ಬಂದಿದೆ ಎಂದು ಆ ಭಾಗದ ಜನರಿಗೆ ಶುಭ ಸುದ್ದಿ ನೀಡಿದ್ದಾರೆ.

ಈ ಕುರಿತು ಎಕ್ಸ್‌ ಮಾಡಿರುವ ಅವರು, ಪರಿಸರ ಸಂಬಂಧಿತ ವಿವಿಧ ಪ್ರಕರಣಗಳ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಪೂರ್ಣಗೊಂಡಿದೆ. ತೀರ್ಪಿನ ಪ್ರಕಟಣೆ ಮಾತ್ರ ಬಾಕಿ ಉಳಿದಿದೆ. ಸಕಾರಾತ್ಮಕ ತೀರ್ಪು ಶೀಘ್ರದಲ್ಲೇ ಹೊರಬರುವ ನಿರೀಕ್ಷೆಯಿದ್ದು, ಅದರೊಂದಿಗೆ ತ್ವರಿತವಾಗಿ ವಿಮಾನ ನಿಲ್ದಾಣದ ಕಾರ್ಯಾಚರಣೆ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

Vijayapura New Airport

ಸರ್ಕಾರದಿಂದ ಅನುದಾನ ಬಿಡುಗಡೆ

ಕರ್ನಾಟಕ ರಾಜ್ಯ ಸರ್ಕಾರ ದಿಂದ ₹220 ಕೋಟಿ ಹೆಚ್ಚುವರಿ ಅನುದಾನ ಬಿಡುಗಡೆಯಾದೆ. ಅದರಿಂದ ವಿಜಯಪುರ ಏರ್‌ಪೋರ್ಟ್‌ನಲ್ಲಿ ಅಗ್ನಿಶಾಮಕ ವಾಹನಗಳ ವ್ಯವಸ್ಥೆ, ವಿಮಾನಗಳ ನೈಟ್ ಲ್ಯಾಂಡಿಂಗ್ ಸೌಲಭ್ಯಗಳ ಜೊತೆಗೆ, ಯಾವುದೇ ಬಗೆಯ ಬೃಹತ್ ವಿಮಾನಗಳ ಹಾರಾಟಕ್ಕೂ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ವಿಜಯಪುರ ವಿಮಾನ ನಿಲ್ದಾಣವು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮಹತ್ವದ ಮೈಲುಗಲ್ಲಾಗಲಿದೆ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು.

ಏರ್‌ಪೋರ್ಟ್‌ ಕಾರ್ಯಾಚರಣೆ ತಡವಾಗಿದ್ದೇಕೆ? ಆಗದ್ದೇನು?

2021-2022ರಲ್ಲಿ ವಿಜಯಪುರ ವಿಮಾನ ನಿಲ್ದಾಣ ಯೋಜನೆ ಆರಂಭಿಸಲಾಗಿತ್ತು. ಆಗಲೂ ಸಹ ರಾಜ್ಯದಿಂದ ಕೇಂದ್ರ ಸರ್ಕಾರದ ಪರಿಸರ ಮತ್ತು ಹವಾಮಾನ ಇಲಾಖೆ ಇಲಾಖೆಯಿಂದ ಅನುಮತೆ ಪಡೆದುಕೊಂಡಿರಲಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅನುಮತಿಗೆ ಪ್ರಯತ್ನಿಸಲಾಗಿದೆ. ಪರಿಸರಕ್ಕೆ ಸಂಬಂಧಿಸಿದ ಇಲಾಖೆಯಿಂದ ಅನುಮೋದನೆ ಪಡೆಯದ ಕೆಲವು ಯೋಜನೆಗಳ ಸ್ಥಗಿತಗೊಳಿಸಬೇಕೆಂದು ಕೋರ್ಟ್ ಮೆಟ್ಟಿಲೇರಲಾಯಿತು. ವಿವಿಧ ಯೋಜನೆಗಳಲ್ಲಿ ವಿಜಯಪುರ ಏರ್‌ಪೋರ್ಟ್‌ ಯೋಜನೆಯೂ ಒಂದು, ಹೀಗಾಗಿ ಅದರ ಕಾರ್ಯಾಚರಣೆ, ಕಾಮಗಾರಿ ಪೂರ್ಣಕ್ಕೆ ಅಡಚಣೆ ಉಂಟಾಯಿತು.

ಈ ಎಲ್ಲ ಪ್ರಕರಣಗಳ ವಿಚಾರಣೆ ಪೂರ್ಣಗೊಂಡಿದೆ. ಸುಪ್ರೀಂ ಕೋರ್ಟ್ ಈ ಯೋಜನೆಗಳಿಗೆ ಸಂಬಂಧಿಸಿದಂತೆ ಸಕಾರಾತ್ಮಕ ತೀರ್ಪು ನೀಡುವ ಸಾಧ್ಯತೆ ಇದೆ ಎಂದು ಎಂಬಿ ಪಾಟೀಲರು ವಿಶ್ವಾಸ ವ್ಯಕ್ತಪಡಿಸಿದರು. ಕಾರ್ಯಾರಂಭಕ್ಕೆ ಅನುಮತಿ ನೀಡುವಂತೆ ಈಗಾಗಲೇ ನಾನು ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ, ಜೊತೆಗೆ ಕೇಂದ್ರ ವಿಮಾನಯಾನ ಸಚಿವ ರಾಮಮೋಹನ ನಾಯ್ಡು ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ ಅವರಿಗೆ ಮನವಿ ಮಾಡಿದ್ದೇನೆ. ಶೀಘ್ರವೇ ವಿಜಯಪುರ ವಿಮಾನ ನಿಲ್ದಾಣದಿಂದ ಕಾರ್ಯಾಚರಣೆ ಶುರುವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/vijayapura-new-airport-ready-karnataka-govt-releases-220-crore-extra-fund-night-landing-enabled-449327.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo