Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ | Ankita Jayaram Scores 97% in 2nd PUC 2026; ‘Karna’ Serial Actress Secures Distinction with 579 Marks

Entertainment

oi-Madhusudhan KR

Ankita Jayaram: ಜಿ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಕರ್ಣ’ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅವರು 2026ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 97ರಷ್ಟು (97%) ಅಂಕಗಳನ್ನು ಗಳಿಸುವ ಮೂಲಕ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ. ಹಾಗಾದ್ರೆ ಯಾವ ವಿಷಯದಲ್ಲಿ ಎಷ್ಟು ಅಂಕಗಳನ್ನ ಪಡೆದಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -1 ಫಲಿತಾಂಶ ಏಪ್ರಿಲ್‌ 9ರಂದು ಅಧಿಕೃತವಾಗಿ ಪ್ರಕಟವಾಗಿದೆ. ಮೊದಲು ಆನ್​​ಲೈನ್‌​ನಲ್ಲಿ ಫಲಿತಾಂಶ ಪ್ರಕಟವಾಗಿದ್ದು, ನಂತರ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಗುರುವಾರ (ಏಪ್ರಿಲ್ 09) ಸಂಜೆ 6ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದ್ದರು.

Ankita Jayaram Scores 97 in 2nd PUC 2026 Karna Serial Actress Secures Distinction with 579 Marks

600ಕ್ಕೆ 579 ಅಂಕ ಪಡೆದ ಅಂಕಿತಾ ಜಯರಾಮ್

ಇದೀಗ ‘ಕರ್ಣ’ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅವರ ಫಲಿತಾಂಶ ಇದೀಗ ಎಲ್ಲಡೆ ವೈರಲ್‌ ಆಗುತ್ತಿದೆ. ಸ್ವತಃ ಅಂಕಿತಾ ಜಯರಾಮ್ ಅವರೇ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ತಮ್ಮ ದ್ವಿತೀಯ ಪಿಯುಸಿ ಫಲಿತಾಂಶ ವಿವರವನ್ನು ಹಂಚಿಕೊಂಡಿದ್ದು, ಅವರು ಒಟ್ಟು 600ಕ್ಕೆ 579 ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಅವರಿಗೆ ಅಭಿಮಾನಿಗಳು ಹಾಗೂ ಸಂಬಂಧಿಕರಿಂದ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

ಯಾವ ವಿಷಯದಲ್ಲಿ ಎಷ್ಟು ಅಂಕ?

ಕನ್ನಡ: 97

ಇಂಗ್ಲೀಷ್: 94

ಬಿಸಿನೆಸ್‌ ಸ್ಟಡೀಸ್: 98

ಅಕೌಂಟೆನ್ಸಿ: 96

ಸ್ಟಾಟಿಸ್ಟಿಕ್ಸ್: 100

ಕಂಪ್ಯೂಟರ್ ಸೈನ್ಸ್: 94

ಅಂಕಿತಾ ಜಯರಾಮ್ ವೃತ್ತಿಜೀವನದ ಹಿನ್ನೆಲೆ

ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡಿದ್ದ ಅಂಕಿತಾ, ಈ ಹಿಂದೆ ಎಸ್‌ಎಸ್‌ಎಲ್‌ಸಿಯಲ್ಲೂ ಶೇಕಡ 95ರಷ್ಟು ಅಂಕ ಗಳಿಸಿದ್ದರು. ಅವರು ಪ್ರಸ್ತುತ ಜಿ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಕರ್ಣ ಧಾರಾವಾಹಿಯಲ್ಲಿ ರಿಯಾ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ‘ಭೂಮಿಗೆ ಬಂದ ಭಗವಂತ’ ಧಾರಾವಾಹಿ ಹಾಗೂ ‘ವೇದ’, ‘ಯುವರತ್ನ’, ‘ಭರಾಟೆ’, ‘ಕಾಗದ’ ಅಂತಹ ಚಿತ್ರಗಳಲ್ಲಿ ಬಾಲನಟಿಯಾಗಿ ನಟನೆ ಮಾಡಿದ್ದಾರೆ

‘ಗುರುರಾಯರ ಆಶೀರ್ವಾದದಿಂದ ಈ ಸಾಧನೆ’

ಇನ್ನೂ ಇದೀಗ ದ್ವಿತೀಯ ಪಿಯುಸಿಯಲ್ಲಿ ತಮ್ಮ ಸಾಧನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿರುವ ಅವರು, ಭಗವಂತ, ಗುರುರಾಯರ ಆಶೀರ್ವಾದ ಹಾಗೂ ಅಭಿಮಾನಿಗಳ ಹಾರೈಕೆಯೇ ಈ ಯಶಸ್ಸಿಗೆ ಕಾರಣ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯಾದ್ಯಂತ ಒಟ್ಟು 1,217 ಕೇಂದ್ರಗಳಲ್ಲಿ ನಡೆದಿದ್ದು, 5,174 ಕಾಲೇಜುಗಳ ಒಟ್ಟು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಾಯಿಸಿಕೊಂಡಿದ್ದರು. ಈ ಪೈಕಿ ವಿಜ್ಞಾನ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯ ವಿಭಾಗದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ತಿಳಿದುಬಂದಿದೆ.

ಆನ್​​ಲೈನ್​​ನಲ್ಲಿ https://karresults.nic.in ವೆಬ್​​ಸೈಟ್ ಮೂಲಕ ಫಲಿತಾಂಶ ಪರಿಶೀಲನೆಗೆ ಅವಕಾಶ ಕಲ್ಪಿಸಲಾಗಿತ್ತು. ಅಷ್ಟೇ ಅಲ್ಲದೆ, ಇದೇ ಮೊಟ್ಟ ಮೊದಲ ಬಾರಿ ಡಿಜಿ ಲಾಕರ್ ಮೂಲಕವೂ ಫಲಿತಾಂಶ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲ ಆದಂತಾಗಿದೆ.

Disclaimer: This content was automatically imported from a third-party source via RSS feed. The original source is: https://kannada.oneindia.com/entertainment/ankita-jayaram-scores-97-in-2nd-puc-2026-karna-serial-actress-secures-distinction-with-579-marks-449995.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo