
Karnataka
oi-Shankrappa Parangi
ಬಾಗಲಕೋಟೆ: ಬಾಲಕೋಟೆ ಉಪಚುನಾವಣೆ ಕಣ ರಂಗೇರಿದೆ. ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ಹಾಗೂ ಆಡಳಿತ ಪಕ್ಷ ನಾಯಕರು ಶನಿವಾರ ಭರ್ಜರಿ ಪ್ರಚಾರ ಕಾರ್ಯ ನಡೆಸಿದ್ದಾರೆ. ಇಂದಿನ ಪ್ರಚಾರ ಕಾರ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಗುಡುಗಿದ್ದಾರೆ. ವರ್ಷಗಳಕಾಲ ಆಡಳಿತ ಮಾಡಿದರೂ ಸಾಧನೆ ಹೇಳಿಕೊಳ್ಳದೇ ಬರೀ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುತ್ತಿದ್ದಾರೆ ಎಂದು ಅವರು ತಿರುಗೇಟು ಕೊಟ್ಟಿದ್ದಾರೆ.
ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ಆಯೋಜಿಸಿದ್ದ ನಾನಾ ಸಂಘ ಸಂಸ್ಥೆಗಳ ಮುಖಂಡರುಗಳ ಜೊತೆಗಿನ ಸಭೆಯಲ್ಲಿ ಸಿದ್ದರಾಮಯ್ಯ ಮಾತನಾಡಿದರು. ಈಗಾಗಲೇ ಎರಡು ದಿನ ಕಾಂಗ್ರೆಸ್ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯಾ ಅವರು, ಬಡವರಿಗೆ ಶಕ್ತಿ ತುಂಬುವ ಉಮೇಶ್ ಮೇಟಿಯವರನ್ನು ಜನರು ಭಾರಿ ಬಹುಮತದೊಂದಿಗೆ ಗೆಲ್ಲಿಸಬೇಕು. ಬಾಗಲಕೋಟೆಯ ಜನಪ್ರತಿನಿಧಿಯಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ಹೆಚ್.ವೈ. ಮೇಟಿಯವರು ಅಕಾಲಿಕ ನಿಧನರಾದ ಕಾರಣದಿಂದ ಅವರ ಪುತ್ರ ಉಮೇಶ್ ಮೇಟಿಯವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಉಮೇಶ್ ಅವರನ್ನು ಜನರು ಬಹುಮತದೊಂದಿಗೆ ಆರಿಸಿ ಕಳುಹಿಸಬೇಕು ಎಂದು ಮನವಿ ಮಾಡಿದರು.
9 ವರ್ಷ ಬಿಜೆಪಿ ಮಾಡಿದ್ದೇನು? ಸಿಎಂ ಪ್ರಶ್ನೆ
ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಕಾಂಗ್ರೆಸ್. ಹಾಗಾಗಿ ಎಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು. ಬಿಜೆಪಿ ಎಂದಿಗೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ. ಸ್ವಾತಂತ್ರ್ಯ ಲಭಿಸದೆ ಹೋಗಿದ್ದರೆ ನಾವು ಗುಲಾಮರಾಗಿಯೇ ಇರುತ್ತಿದ್ದೆವು. ಕಾಂಗ್ರೆಸ್ ಎಲ್ಲಾ ಕಾಲದಲ್ಲಿಯೂ ಬಡವರ ಪರವಾಗಿ ಕೆಲಸ ಮಾಡಿಕೊಂಡು ಬಂದಿದೆ. ಬಿಜೆಪಿಯವರು ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರ ಮಾಡಿದ್ದಾರೆ. ಏನು ಮಾಡಿದ್ದಾರೆ ಎಂದು ಅವರು ಜನರ ಮುಂದೆ ಹೇಳುವುದೇ ಇಲ್ಲ. ಅದರ ಬದಲಿಗೆ ನಮ್ಮ ಸರ್ಕಾರವನ್ನು ಟೀಕೆ, ಅಪಪ್ರಚಾರ ಮಾಡಿಕೊಂಡು ಓಡಾಡಿದ್ದಾರೆ. ಬಿಜೆಪಿ ನುಡಿದಂತೆ ನಡೆದ ಪಕ್ಷವಲ್ಲ ಎಂದು ಟೀಕಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ ಮತ್ತು ಸಾಮಾಜಿಕ ಬಲ ತುಂಬಲು ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೂರು ವರ್ಷಗಳಿಂದ ಎಲ್ಲಾ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿ ಮಾಡಿದೆ. ಇದುವರೆಗೆ 1.31 ಲಕ್ಷ ಕೋಟಿಯನ್ನು ಗ್ಯಾರಂಟಿಗಳಿಗೆ ವ್ಯಯಿಸಲಾಗಿದೆ ಎಂದು ಲೆಕ್ಕ ಕೊಟ್ಟರು.
ಸರ್ವರಿಗೆ ಸಮಪಾಲು, ಸಮಬಾಳು ಎನ್ನುವ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಕಾಂಗ್ರೆಸ್ ಸರ್ಕಾರ. ಕೇಂದ್ರ ಸರ್ಕಾರ ಉದ್ಯೋಗದ ಭರವಸೆಯನ್ನು ನುಂಗುವ ವಿಬಿ ಜಿ ರಾಮ್ ಜಿ ಯೋಜನೆಯನ್ನು ತರಲಾಗಿದೆ. ಕೇಂದ್ರ ಬಿಜೆಪಿಯವರಿಂದ ಕೇವಲ ಕಾರ್ಪೊರೇಟ್ ಶಕ್ತಿಗಳು ಬಲಗೊಳ್ಳುತ್ತಿದ್ದು, ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ಹೆಚ್ಚುತ್ತಿದೆ ಎಂದು ದೂರಿದರು.
ಕ್ಷೇತ್ರದಲ್ಲಿ ಹೆಚ್.ವೈ.ಮೇಟಿಯವರು 5 ಬಾರಿ ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ಸೇವೆ ಸಲ್ಲಿಸಿದ ಜನಾನುರಾಗಿ ನಾಯಕರಾಗಿದ್ದರು. ಜಾತಿ ಬೇಧವಿಲ್ಲದೇ ಜನರ ಸೇವೆ ಸಲ್ಲಿಸಿದವರು. ಬಾಗಲಕೋಟೆಗೆ ವೈದ್ಯಕೀಯ ಕಾಲೇಜು ಸ್ಥಾಪನೆಯ ಕನಸು ಕಂಡಿದ್ದರು. ಅದರಂತೆ ಇಲ್ಲಿ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆಯನ್ನು ಮಾಡಲಾಗಿದೆ. ಆದ್ದರಿಂದ ಬಾಗಲಕೋಟೆಯ ಅಭಿವೃದ್ಧಿಗೆ ಶ್ರಮಿಸಿದ ಹೆಚ್.ವೈ.ಮೇಟಿಯವರ ಪುತ್ರ ಉಮೇಶ್ ಮೇಟಿಯವರನ್ನು ಬಹುಮತದಿಂದ ಆಯ್ಕೆ ಮಾಡಬೇಕೆಂದ ವಿನಂತಿಸಿಕೊಂಡರು.
ಎಲ್ಲರಿಗೂ ಕಾನೂನು ರಕ್ಷಣೆ ದೊರೆಯಬೇಕು
ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿಟ್ಟುಕೊಂಡಿರುವ ಪಕ್ಷ ನಮ್ಮದು. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಹಾಗೂ ಎಲ್ಲರಿಗೂ ಸಮಾನ ರಕ್ಷಣೆ ದೊರೆಯಬೇಕು. ದುರ್ಬಲ ವರ್ಗದವರಿಗೆ, ಮಹಿಳೆಯರಿಗೆ, ಮಕ್ಕಳಿಗೆ, ಶಕ್ತಿಯಿಲ್ಲದವರಿಗೆ ಆದ್ಯತೆ ಮೇರೆಗೆ ರಕ್ಷಣೆ ನೀಡಬೇಕೆಂದು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಇದು ನಮ್ಮ ಸರ್ಕಾರದ ಧ್ಯೇಯ. ಅಂತ್ಯೋದಯ, ಸರ್ವೋದಯ ಮಂತ್ರವನ್ನು ಮಹಾತ್ಮ ಗಾಂಧಿಯವರು ನೀಡಿದ್ದರು. ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಲು ಪ್ರತಿಯೊಬ್ಬರೂ, ಸಾಮಾಜಿಕ, ಶೈಕ್ಷಣಿಕವಾಗಿ ಪ್ರಬಲರಾಗಬೇಕು ಎಂದರು.
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/bagalkot-bypoll-cm-siddaramaiah-slams-bjp-urges-voters-to-elect-umesh-meti-for-development-449365.html. xn--babytilbehr-pgb.com does not claim ownership of this content. All rights remain with the original publisher.
