By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ | Karnataka By-Elections 2026: Basavaraj Bommai Confident BJP Win in Davanagere South and Bagalkot

Karnataka

oi-Shankrappa Parangi

ಹಾವೇರಿ: ರಾಜ್ಯದಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಉಪ ಚುನಾವಣೆ ಬಗೆಗಿನ ನಿರೀಕ್ಷೆಗಳು ಹೆಚ್ಚಾಗಿವೆ. ಪ್ರಬಲ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಪೈಕಿ ಕಾಂಗ್ರೆಸ್‌ನಲ್ಲಿ ಟಿಕೆಟ್ ಹಂಚಿಕೆ ಕಗ್ಗಂಟಾಗಿದೆ. ಇಂದು ಭಾನುವಾರ ಟಿಕೆಟ್ ಹಂಚಿಕೆ ಅಂತಿಮಗೊಳ್ಳಲಿವೆ. ಬಿಜೆಪಿಯಿಂದ ಶ್ರೀನಿವಾಸ್ ಟಿ.ದಾಸಕರಿಯಪ್ಪ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇದೇ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಬಾರಿ ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಮೊದಲ ಬಾರಿಗೆ ಕೇಸರಿ ಭಾವುಟ ಹಾರಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಬಾಗಲಕೋಟೆ ಮತ್ತು ದಾವಣಗೆರೆ ಎರಡೂ ಕ್ಷೇತ್ರದಲ್ಲಿ ಜಯಗಳಿಸಲಿದೆ. ಪಕ್ಷ ಜಾಗರೂಕತೆಯ ಲೆಕ್ಕಾಚಾರ ಹಾಕಿ ದಾವಣಗೆರೆಯಲ್ಲಿ ಟಿಕೆಟ್ ನೀಡಿದೆ. ಬರುವಂತಹ ದಿನಗಳಲ್ಲಿ ಬಡವರು, ಎಸ್ಸಿ ಎಸ್ಟಿ ಜನರಿಂದ ದೊಡ್ಡ ಪ್ರಮಾಣದಲ್ಲಿ ಬೆಂಬಲ ಸಿಗುತ್ತದೆ. ಆಶ್ಚರ್ಯಕರ ಫಲಿತಾಂಶ ದಾವಣಗೆರೆಯಲ್ಲಿ ದೊರೆಯುತ್ತದೆ ಎಂದು ಅವರು ಹೇಳಿದರು.

Karnataka By-Elections 2026

ಬಾಗಲಕೋಟೆಯಲ್ಲಿ ವಿಜಯ ಪಥದಲ್ಲಿ ನಾವು ಹೋಗುತ್ತಿದ್ದೇವೆ. ಕಳೆದ ಬಾರಿ ಕಾಂಗ್ರೆಸ್ ಸೇರಿದ್ದ ಅನೇಕ ಮುಖಂಡರು ಬಿಜೆಪಿಗೆ ಸೇರುತ್ತಿದ್ದಾರೆ. ಹೀಗಾಗಿ ಬಾಗಲಕೋಟೆಯಲ್ಲಿ ದೊಡ್ಡ ಪ್ರಮಾಣದ ಅಂತರದಲ್ಲಿ ಗೆಲ್ಲುತ್ತೇವೆ. ಒಟ್ಟಾರೆ ಈ ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬರಲಿದೆ ಎಂದರು.

ಬಾಲಗಕೋಟೆಯಲ್ಲಿ ಬಿಜೆಪಿಯಿಂದ ಮಾಜಿ ಶಾಸಕ ವೀರಣ್ಣ (ವೀರಭದ್ರಯ್ಯ) ಚರಂತಿಮಠ ಅವರು ನಾಮಪತ್ರ ಸಲ್ಲಿಸಿದರು. ಪಕ್ಷದ ಅಭ್ಯರ್ಥಿಗಳ ಮುಖೇನ ಅವರು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್‌ನಿಂದ ಟಿಕೆಟ್ ಹಂಚಿಕೆಯಲ್ಲಿ ಒಮ್ಮತ ಬಾರದ ಸ್ಥಿತಿ ಇದೆ. ಶಾಮನೂರು ಶಿವಶಕರಪ್ಪ ಮೊಮ್ಮಗ ಸಮರ್ಥ್ ಶ್ಯಾಮನೂರು ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ. ಬಾಗಲಕೋಟೆಯಲ್ಲಿ ಎಚ್‌.ವೈ.ಮೇಟಿ ಅವರ ಪುತ್ರ ಉಮೇಶ್ ಅವರಿಗೆ ಟಿಕೆಟ್ ಅಂತಿಮಗೊಳ್ಳಲಿದೆ. ಈ ಎರಡು ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರಿಗೆ ನೀಡುವಂತೆ ಪಟ್ಟು ಹಿಡಿಯಸಲಾಗಿದೆ. ಕಳೆದೊಂದು ವಾರದಿಂದ ಉಪಚುನಾವಣೆ ಸಂಬಂಧ ಕಾಂಗ್ರೆಸ್‌ನಲ್ಲಿ ಸರಣಿ ಸಭೆ ನಡೆದಿದ್ದವು. ಇಂದು ಅಂತಿಮ ಅಭ್ಯರ್ಥಿಗಳ ಅಧಿಕೃತ ಘೋಷಣೆ ಆಗಲಿದ್ದು, ನಾಳೆ ಸೋಮವಾರ ನಾಮಪತ್ರ ಸಲ್ಲಿಕೆ ಕೊನೆಯ ದಿನ ಬಿಜೆಪಿ-ಕಾಂಗ್ರೆಸ್ ಶಕ್ತಿ ಪ್ರದರ್ಶನ ಆಗಲಿದೆ. ಏಪ್ರಿಲ್ 9ಕ್ಕೆ ಉಪಚುನಾವಣೆ ನಡೆಯಲಿದೆ.

ದುಂಡಿಗೌಡರ್ ಬಿಜೆಪಿಗೆ ವಾಪಾಸ್?

ಮುಂದುವರಿದು ಮಾತನಾಡಿದ ಬೊಮ್ಮಾಯಿ ಅವರು, ಶ್ರೀಕಾಂತ ದುಂಡಿಗೌಡರ್ ಅವರನ್ನು ಪಕದಿಂದ ಉಚ್ಚಾಟಿಸಲಾಗಿದ್ದು, ಅವರನ್ನು ಪಕ್ಷಕ್ಕೆ ವಾಪಸ್ ಕರೆಸಿಕೊಳ್ಳುವ ಕುರಿತು ಕೇಳಿದ ಪ್ರಶ್ನೆಗೆ ಈ ಕುರಿತು ಪಕ್ಷದಲ್ಲಿ ಚರ್ಚಿಸುತ್ತೇವೆ ಎಂದು ಹೇಳಿದರು.

ಕೆರೆ ಹೂಳೆತ್ತಲು ಸರ್ಕಾರ ಪ್ರತ್ಯೇಕ ಹಣ ಮೀಸಲಿಡಲಿ

ರಾಜ್ಯ ಸರ್ಕಾರಕ್ಕೆ ರೈತರನ್ನು ಉಳಿಸಿಕೊಳ್ಳಬೇಕೆಂಬ ಮನಸಿದ್ದರೆ ಕರೆಗಳನ್ನು ಉಳಿಸಬೇಕು. ಕೆರೆಗಳನ್ನು ಸರಿಯಾಗಿ ನಿರ್ವಹಣೆ ಮಾಡಿದರೆ ಪ್ರವಾಹ ಆಗುವುದಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಕೆರೆ ಹೂಳು ತೆಗೆಯಲು 200 ಕೋಟಿ ರೂ. ಇಟ್ಟಿದ್ದರು. ಅದೇ ರೀತಿ ಕೆರೆ ಹೂಳು ತೆಗೆಯಲು ರಾಜ್ಯ ಸರ್ಕಾರ ಪತ್ಯೇಕ ಹಣ ಮೀಸಲಿಡಬೇಕು ಎಂದು ಅವರು ಆಗ್ರಹಿಸಿದರು.

ಶಿಗ್ಗಾವಿ ಸವಣೂರು ತಾಲೂಕುಗಳು ಕೆರೆಗಳಿಂದ ಕೂಡಿವೆ. ಸುಮಾರು ಐನೂರು ಕೆರೆಗಳಿವೆ. ಅವುಗಳಲ್ಲಿ ಕನಿಷ್ಟ 100 ದೊಡ್ಡ ಕೆರೆಗಳಿವೆ. 150 ಕ್ಕಿಂತ ಹೆಚ್ಚು ದೊಡ್ಡ ಮತ್ತು ಸಣ್ಣ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಬೇಕು. 2015, 16, 17 ರಲ್ಲಿ ಬರಗಾಲ ಸಂದರ್ಭದಲ್ಲಿ ದೊಡ್ಡ ಪ್ರಮಾಣದಲ್ಲಿ ಕೆರೆ ಹೂಳು ತೆಗೆಯುವ ಕೆಲಸ ಆಯಿತು. ಇಂತಹ ಭಗೀರಥ ಕೆಲಸಕ್ಕೆ ಭಾರತ ಸೇವಾ ಸಂಸ್ಥೆ ಕೆರೆಗಳ ಹೂಳು ತೆಗೆಯಲು ದೊಡ್ಡ ಸಹಾಯ ಮಾಡಿದೆ. ಎರಡು ಮೂರು ವರ್ಷದಿಂದ ಒಳ್ಳೆಯ ಮಳೆಯಾಗಿದೆ. ಆದ್ದರಿಂದ ಹೂಳು ತೆಗೆಯಲು ಆಗಿರಲಿಲ್ಲ. ಈ ವರ್ಷ ಬೇಸಿಗೆಗೆ ಕೆರೆ ಬತ್ತಿ ಹೋಗಿರುವುದರಿಂದ ಮತ್ತೆ ಹೂಳು ತೆಗೆಯುವ ಕೆಲಸ ಮಾಡಲು ಶ್ರೀಕಾಂತ ದುಂಡಿಗೌಡರು ಭಾರತ ಸೇವಾ ಸಂಸ್ಥೆ ವತಿಯಿಂದ ಹೂಳು ತೆಗೆಯುವ ಕೆಲಸ ಮಾಡಿದ್ದಾರೆ. ಪ್ರತಿಯೊಂದು ಜಿಲ್ಲಾ ಪಂಚಾಯತಿಯಲ್ಲಿ ಕನಿಷ್ಟ ಒಂದು ಕೆರೆ ಹೂಳೆತ್ತುವ ತೀರ್ಮಾನ ಮಾಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಕೆರೆ ಹೂಳೆತ್ತಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಏನು ಮಾಡಬೇಕೆಂಬ ಪ್ರಶ್ನೆಗೆ ಅವರು, ಈಗಾಗಲೇ ಪ್ರಧಾನ ಮಂತ್ರಿ ಸಿಂಚಾಯಿ ಯೋಜನೆಯಲ್ಲಿ ಹಾವೇರಿ ಜಿಲ್ಲೆ ಸೇರಿದೆ. ಹಾವೇರಿಗೆ ಕ್ರಿಯಾ ಯೋಜನೆ ಆಗಿದೆ. ಆ ಯೋಜನೆ ಅಡಿಯಲ್ಲಿ ಪ್ರತಿ ತಾಲೂಕಿಗೂ ಕೆರೆ ಅಭಿವೃದ್ಧಿಗೆ ಹಣ ಬರುತ್ತದೆ. ರಾಜ್ಯ ಸರ್ಕಾರ ಯಡಿಯೂರಪ್ಪ ಮುಖ್ಯಮಂತ್ರಿ ಇದ್ದಾಗ 200 ಕೋಟಿ ರೂ. ಕೆರೆ ಹೂಳು ತೆಗೆಯಲು ಇಟ್ಟಿದ್ದರು.

ಅದೇ ರೀತಿ ಕೆರೆ ಹೂಳು ತೆಗೆಯಲು ಹಣ ಇಡಬೇಕು, ಕೆರೆಗಳ ರಕ್ಷಣೆ ಮಾಡಿದರೆ ನಮ್ಮ ಭೂಮಿ ರಕ್ಷಣೆ ಆಗುತ್ತದೆ. ಅದು ನಿಸರ್ಗದತ್ತವಾಗಿರುವುದು. ಅದಕ್ಕೆ ಕೆರೆಗಳಿಗೆ ಫ್ಲಡ್ ಕ್ಯಾರಿಯರ್ಸ್ ಅನ್ನುತ್ತಾರೆ. ಕೆರೆಗಳನ್ನು ಸರಿಯಾಗಿ ನಿರ್ವಹಣೆ ಮಾಡಿದರೆ ಪ್ರವಾಹ ಆಗುವುದಿಲ್ಲ, ರಾಜ್ಯ ಸರ್ಕಾರಕ್ಕೆ ರೈತರನ್ನು ಉಳಿಸಿಕೊಳ್ಳಬೇಕೆಂಬ ಮನಸಿದ್ದರೆ ಕೆರೆಗಳನ್ನು ಉಳಿಸಬೇಕು ಎಂದರು.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/karnataka-by-elections-2026-basavaraj-bommai-confident-bjp-win-in-davanagere-south-and-bagalkot-447947.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo