
Karnataka
oi-Hitesh Y
Cabinet Expansion: ಕರ್ನಾಟಕದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಉದ್ಯೋಗ ಒದಗಿಸುವ ಭರವಸೆಯನ್ನು ಸರ್ಕಾರ ನೀಡುತ್ತದೆ. ಒಳಮೀಸಲಾತಿಯ ಕಾರಣ ನೇಮಕಾತಿ ಪ್ರಕ್ರಿಯೆ ವಿಳಂಬವಾಯಿತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದರು.
ಇನ್ನು ಚಿಕ್ಕಮಗಳೂರಿನಲ್ಲಿ ಆನೆ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮಾತನಾಡಿದ ಅವರು, ಆನೆ, ಚಿರತೆ ಮತ್ತು ಹುಲಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ, ಮಾನವ ವನ್ಯಪ್ರಾಣಿ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ವನ್ಯಜೀವಿಗಳು ಜನಪ್ರದೇಶಗಳಿಗೆ ಬರದಂತೆ ಕಾಡಂಚಿನ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ಯಾರಿಕೇಡ್ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮಾದಕವಸ್ತುಗಳ ನಿಗ್ರಹ
ಶಿವಮೊಗ್ಗ ವಿದ್ಯಾರ್ಥಿ ಹತ್ಯೆ ಹಾಗೂ ಅಪ್ರಾಪ್ತರಲ್ಲಿ ಗಾಂಜಾ ಸೇವೆನೆ ವ್ಯಾಪಕವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿಗ್ರಹಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದಿದ್ದಾರೆ. ಅಜೀಂಪ್ರೇಂಜಿ ವಿವಿಯ ಮೇಲೆ ಎಬಿವಿಪಿ ವಿದ್ಯಾರ್ಥಿಗಳು ದಾಂಧಲೆ ನಡೆಸಿರುವ ಬಗ್ಗೆ ಉತ್ತರಿಸಿ, ಯಾವುದೇ ಸಂಘಟನೆಗಳು ಕಾನೂನು ವಿರುದ್ಧವಾಗಿ ನಡೆದುಕೊಂಡಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಗ್ಯಾರಂಟಿ ಯೋಜನೆ
ಗ್ಯಾರಂಟಿಗಳ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಗ್ಯಾರಂಟಿ ಯೋಜನೆಗಳಿಗೆ ವಾರ್ಷಕ 52000 ಕೋಟಿ ರೂ.ಗಳನ್ನು ವೆಚ್ಚ ಮಾಡಿದರೂ, ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲಾಗುತ್ತಿದೆ. ಈಗಾಗಲೇ 1,20,000 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ನೀಡಲಾಗಿದೆ ಎಂದರು. ಆಗುಂಬೆ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದೇ ಎಂಬುದಕ್ಕೆ ಉತ್ತರಿಸುತ್ತಾ, ಇದಕ್ಕೆ ಸಂಬಂಧಿಸಿದಂತೆ ಪರಿಸರವಾದಿಗಳೊಂದಿಗೆ ಚರ್ಚಿಸಲಾಗುವುದು ಹಾಗೂ ಅನುಮತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಕಾರ್ಕಾಳದಲ್ಲಿ ಪರುಶರಾಮ ಧೀಂ ಪಾರ್ಕ್ ನಿರ್ಮಾಣದ ಯೋಜನೆಯನ್ನು ಶೀಘ್ರದಲ್ಲೇ ಪೂರ್ಣ ಗೊಳಿಸಲಾಗುವುದು. ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅವ್ಯವಹಾರ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಕಾರ್ಖಾನೆಯ ಗುಜರಿ ಮಾರಾಟ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದಿದ್ದಾರೆ. ಶಾಸಕರು ಸಚಿವರಾಗಲು ಬಯಸುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಶಾಸಕರು ಸಚಿವ ರಾಗಬಯಸುವುದು ತಪ್ಪಲ್ಲ. ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿ ಪದವಿ ನೀಡಬಾರದೆಂಬ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/cabinet-expansion-ministerial-post-not-for-first-time-mlas-says-cm-siddaramaiah-445121.html. xn--babytilbehr-pgb.com does not claim ownership of this content. All rights remain with the original publisher.
