Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್‌ | Belagavi Gas Supply Update: DC Mohammad Roshan Assures Cylinder and Fuel Availability

Karnataka

oi-Hitesh Y

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್ ಹಾಗೂ ಇಂಧನದ ಯಾವುದೇ ಕೊರತೆಯಿಲ್ಲ.‌ ಸಾರ್ವಜನಿಕರು ವದಂತಿಗಳಿಗೆ ಕಿವಿಗೊಟ್ಟು ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮನವಿ ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಮಾರ್ಚ್ 24ರಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ.

ಬೆಳಗಾವಿ ಜಿಲ್ಲೆ ಹಾಗೂ ನಗರದಲ್ಲಿ ಯಾವುದೇ ರೀತಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಕೊರತೆ ಇಲ್ಲ. ಬಂಕ್‌ಗಳಲ್ಲಿ ಸ್ಟಾಕ್ ಖಾಲಿಯಾದರೆ ನಗರದಲ್ಲಿ ಕೇವಲ ಐದು ಗಂಟೆಗಳಲ್ಲಿ ಸ್ಟಾಕ್‌ ಲಭ್ಯವಾಗಲಿದೆ. ಅಲ್ಲದೆ ಇಂಧನ ಕೊರತೆ ವದಂತಿಗೆ ಕಿವಿಗೊಡಬಾರದು. ಇಂಧನ ಪೂರೈಕೆ ಕಂಪೆನಿ ಹಾಗೂ ಬಂಕ್‌ಮಾಲೀಕರ ಜತೆ ಈಗಾಗಲೇ ಚರ್ಚೆ ಮಾಡಲಾಗಿದ್ದು, ಇಂಧನ ಕೊರತೆ ಎಲ್ಲಿಯೂ ಕಂಡುಬಂದಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಜನರು ಆತಂಕಕ್ಕೆ ಒಳಗಾಗಿ ಇಂಧನ ಸಂಗ್ರಹಕ್ಕೆ ಮುಂದಾಗಿರುವುದರಿಂದ ಈ ರೀತಿಯ ಗೊಂದಲ ಉಂಟಾಗಿದೆ. ಬಂಕ್‌ಗಳಲ್ಲಿ ಬಾಟಲ್ ಅಥವಾ ಕ್ಯಾನ್ಗಳಲ್ಲಿ ಪೆಟ್ರೋಲ್ ಅಥವಾ ಡೀಸೆಲ್ ಮಾರಾಟ ಮಾಡುವುದಿಲ್ಲ.

Gas

Gas: ತಪ್ಪು ಮಾಹಿತಿ ನೀಡಿದರೆ ಕ್ರಮ

ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿಯನ್ನು ಹರಡಿದರೆ ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಭೂಷಣ ಗುಲಾಬ್ ರಾವ್ ಭೋರಸೆ ಅವರು, ಯಾವುದೇ ಪೆಟ್ರೋಲ್‌ ಬಂಕ್‌ಗಳಲ್ಲಿ ಬಾಟಲ್ ಅಥವಾ ಕ್ಯಾನ್‌ಗಳಲ್ಲಿ ಇಂಧನ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ. ಅಕ್ರಮವಾಗಿ ಇಂಧನ‌ ಸಂಗ್ರಹ ಮತ್ತು ಮಾರಾಟ ತಡೆಯಲು ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೇ ಶಾಂತ ರೀತಿಯಿಂದ ಸಹಕರಿಸಬೇಕು. ಏನೇ ಅಕ್ರಮ ಅಥವಾ ಗಲಾಟೆ ಕಂಡುಬಂದರೆ 112 ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಹೇಳಿದ್ದಾರೆ. ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಅಜಯ್ ಪೈ ಅವರು ಸೇರಿದಂತೆ ಹಲವು ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/belagavi-gas-supply-update-dc-mohammad-roshan-assures-cylinder-and-fuel-availability-448211.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo