
Karnataka
oi-Shankrappa Parangi
ಬೆಂಗಳೂರು: ಜಾಗತಿಕವಾಗಿ ಕರ್ನಾಟಕ ಇಂದಿನ ಸರ್ಕಾರಿ ಶಾಲಾ ಮಕ್ಕಳನ್ನು ಸಜ್ಜುಗೊಳಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಈ ಸಂಬಂಧ 2026-27 ನೇ ಸಾಲಿನಲ್ಲಿ ರಾಜ್ಯದ 15 ಜಿಲ್ಲೆಗಳ ಎಲ್ಲ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ನೀತಿ ಆರಂಭಿಸಲಾಗುತ್ತದೆ. ಎಲ್ಲ ಸರ್ಕಾರಿ ಶಾಲೆಗಳ ಪ್ರಾಥಮಿಕ ಶಾಲಾ ಶಿಕ್ಷಕರು ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ತರಗತಿ ನಡೆಸಲಿದ್ದಾರೆ.
ಇತ್ತೀಚೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ಭಾಷೆ ಅಂಕಗಳನ್ನು ಕೈ ಬಿಟ್ಟ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಲಾಗಿತ್ತು. ಮಕ್ಕಳ ಹಿತ ದೃಷ್ಟಿಯಿಂದ ದ್ವಿಭಾಷಾ ನೀತಿ ಜಾರಿ ಕುರಿತು ಹೇಳಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವದ್ದು ಏಕಪಕ್ಷೀಯ ನಿರ್ಧಾರವೆಂಬ ಟೀಕೆಗಳು ಕೇಳಿ ಬಂದಿದ್ದವು. ಇದರ ನಡುವೆ ಸರ್ಕಾರ ಪ್ರಸ್ತಕ ಶೈಕ್ಷಣಿಕ ವರ್ಷದಿಂದಲೇ ಹದಿನೈದು ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಆರಂಭಿಸಲು ಶಿಕ್ಷಣ ಇಲಾಖೆ ಪ್ಲ್ಯಾನ್ ಮಾಡಿಕೊಂಡಿದೆ. ಈ ಸಂಬಂಧ ಸರ್ಕಾರಿ ಪ್ರಾಥಮಿಕ ಶಿಕ್ಷಕರಿಗೆ ಇಂಗ್ಲಿಷ್ ತರಬೇತಿ ನೀಡುತ್ತಿದೆ.

ದ್ವಿಭಾಷಾ ಮಾಧ್ಯಮ ಪ್ರಯುಕ್ತ 2026-27ನೇ ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನ ಉದ್ದೇಶಿತ ಸರ್ಕಾರಿ ಶಾಲೆಗಳಲ್ಲಿ ಬೋಧಿಸುತ್ತಿರುವ 1,55, 950 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಂಗ್ಲಿಷ್ ಮೀಡಿಯಂ ಟೀಚರ್ಸ್ ಟ್ರೈನಿಂಗ್ (EMTT ) ಅನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ ವತಿಯಿಂದ ನೀಡಲಾಗುತ್ತಿದೆ. ರಾಜ್ಯದ ಎಲ್ಲ ಡಯಟ್‌ಗಳಲ್ಲಿ ಈ ತರಬೇತಿ ನಡೆಯುತ್ತಿದೆ.
3 ಹಂತಗಳಲ್ಲಿ ಶಿಕ್ಷಕರಿಗೆ ತರಬೇತಿ
ಮಕ್ಕಳಿಗೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಂಗ್ಲಿಷ್ ನಲ್ಲಿ ಪಾಠ ಮಾಡುವುದನ್ನು ಹೇಳಿಕೊಡಲು ಅವರಿಗೆ ಇಂಗ್ಲಿಷ್ ತರಬೇತಿ ನೀಡಲಾಗುತ್ತಿದೆ. ನುರಿತ ಪರಿಣಿತರಿಂದ ಶಿಕ್ಷಕರಿಗೆ ಈಗಾಗಲೇ ತರಬೇತಿ ಆರಂಭಿಸಲಾಗಿದೆ. ಒಟ್ಟು ಮೂರು ಹಂತಗಳಲ್ಲಿ ತರಬೇತಿ ನೀಡಲಾಗುತ್ತಿದೆ.
ಮೊದಲಿಗೆ ಪ್ರತಿ ಜಿಲ್ಲೆಯಿಂದ ರಾಜ್ಯದ ಒಬ್ಬರು ಡಯಟ್ ನೂಡಲ್ ಅಧಿಕಾರಿಗಳಂತೆ ರಾಜ್ಯದ ಒಟ್ಟು 385 ಎಂಆರ್‍ಪಿಗಳಿಗೆ ಬೆಂಗಳೂರಿನ ಪ್ರತಿಷ್ಠಿತ ಪ್ರಾದೇಶಿಕ ಇಂಗ್ಲಿಷ್ ಸಂಸ್ಥೆ ದಕ್ಷಿಣ ಭಾರತ ಆರ್‍ಐಇಎಸ್‌ಐ ಅವರಿಂದ ತರಬೇತಿ ಕೊಡಿಸಲಾಗುತ್ತಿದೆ.
ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ
ಇನ್ನು ಎರಡನೇ ಹಂತದಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿಗಳಂತೆ ಪ್ರತಿ ತಾಲೂಕುಗಳಿಂದ ತಲಾ 15 ಸಂಪನ್ಮೂಲ ವ್ಯಕ್ತಿಗಳಿಂದ ಒಟ್ಟು ರಾಜ್ಯದ 3060 ಎಂಆರ್‍ಪಿಗಳಿಗೆ ಜಿಲ್ಲಾ ಹಂತದಲ್ಲಿ ತರಬೇತಿ ಕೊಡಿಸುವ ಕಾರ್ಯಕ್ರಮ ಚಾಲ್ತಿಯಲ್ಲಿದೆ.
ಮೂರನೇ ಹಂತದಲ್ಲಿ ದ್ವಿಭಾಷಾ ಮಾಧ್ಯಮ ಜಾರಿಗೆ ತರುವ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರಿಗೆ ತರಬೇತಿ ನೀಡಲಾಗುತ್ತಿದೆ. ಈ ಮೂಲಕ ಇಂಗ್ಲಿಷ್ ಮಾಧ್ಯಮದಲ್ಲಿಯೂ ಬೋಧಿಸಲು ಸರ್ಕಾರಿ ಶಾಲಾ ಶಿಕ್ಷಕರು ಸಜ್ಜಾಗುತ್ತಿದ್ದಾರೆ. ಇದು ಮಕ್ಕಳ ಭವ್ಯ ಭವಿಷ್ಯ ಹಾಗೂ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳ ಸುಧಾರಣೆಗೆ, ಶಿಕ್ಷಣ ವ್ಯವಸ್ಥೆಯಲ್ಲಿನ ಮಹತ್ತರ ಬದಲಾವಣೆಗೆ ಕಾರಣವಾಗಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
-

Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ?
-

2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ
-

Gold Rate April 9: ಚಿನ್ನ – ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ
-

ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ
-

April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ
-

Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ ‘ಜಾಂಬಿ ಡ್ರಗ್’?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ
-

PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್
-

Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ ‘ಧರಂಧರ-2’ ಅಬ್ಬರ, ಯಾವಾಗ?
-

Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ “ರಾಗಿ’ ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್
-

Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ
-

Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು
-

Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ
-

Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್
-

Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ
-

Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/karnataka-introduce-bilingual-education-in-government-schools-2026-27-emtt-training-to-teachers-450083.html. xn--babytilbehr-pgb.com does not claim ownership of this content. All rights remain with the original publisher.
