
Karnataka
oi-Hitesh Y
Gruha Lakshmi Yojana: ಕರ್ನಾಟಕದ 2026 – 2027ನೇ ಸಾಲಿನ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಭರ್ಜರಿ ಆದಾಯ ಮೀಸಲಿರಿಸಲಾಗಿದೆ. ಅದರಲ್ಲೂ ಮುಖ್ಯವಾಗಿ ಬಹಳಷ್ಟು ಸಮಸ್ಯೆ ಹಾಗೂ ಗೊಂದಲಗಳಿಗೆ ಕಾರಣವಾಗಿರುವ ಗೃಹಲಕ್ಷ್ಮಿ ಯೋಜನೆಗೆ ಭರ್ಜರಿ ಆದಾಯವನ್ನು ಮೀಸಲಿರಿಸಲಾಗಿದೆ. ಕರ್ನಾಟಕ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಅನುದಾನ ಮೀಸಲಿರಿಸಲಿದೆ ಹಾಗೂ ಗ್ಯಾರಂಟಿ ಯೋಜನೆಗಳನ್ನು ಹೇಗೆ ಸರಿದೂಗಿಸಲಿದೆ ಎನ್ನುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕರ್ನಾಟಕದ 2026 – 2027ನೇ ಸಾಲಿನ ಬಜೆಟ್ ಮಂಡಿಸಿದ್ದು, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಅನುದಾನವನ್ನು ಮೀಸಲಿರಿಸಿದ್ದಾರೆ. ಅದರ ವಿವರ ಈ ಲೇಖನದಲ್ಲಿದೆ.
ಕರ್ನಾಟಕ ಸರ್ಕಾರವು ಈ ಬಾರಿಯ 2026 – 2027ನೇ ಸಾಲಿನ ಬಜೆಟ್‌ನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಬರೋಬ್ಬರಿ ಅನುದಾನ ಘೋಷಣೆ ಮಾಡಿದೆ. ಈ ವರ್ಷ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂಪಾಯಿ ಅನುದಾನವನ್ನು ಮೀಸಲಿರಿಸಿರುವುದಾಗಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ. ಇನ್ನು ವಿವಿಧ ಗ್ಯಾರಂಟಿ ಯೋಜನೆಗಳಿಗೂ ಭರ್ಜರಿ ಅನುದಾನವನ್ನು ಮೀಸಲಿರಿಸುವ ಸಾಧ್ಯತೆ ಇದೆ.

ಇನ್ನು ದಕ್ಷಿಣ ಭಾರತದ ಕೇರಳ – ತಮಿಳುನಾಡು ಸೇರಿದಂತೆ ದೇಶದ ಐದು ರಾಜ್ಯಗಳಲ್ಲಿ 2026ನೇ ಸಾಲಿನ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸುವ ಸಾಧ್ಯತೆ ಇದೆ. ಹೀಗಾಗಿ, ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಅನುದಾನ ಕೊರತೆ ಆಗದಂತೆ ಹೆಚ್ಚಿನ ಮುತುವರ್ಜಿ ವಹಿಸಿರುವಂತೆ ಇದೆ. ಇನ್ನು ಮುಖ್ಯವಾಗಿ ಮಹಿಳೆಯರ ಖಾತೆ ಹಣ / ಮನೆಯ ಯಜಮಾನಿಗೆ ಮಾಸಿಕವಾಗಿ ಹಣ ನೀಡುವ ಯೋಜನೆಯು ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಹೀಗಾಗಿ, ಕರ್ನಾಟಕ ಸರ್ಕಾರವು ಗೃಹ ಲಕ್ಷ್ಮಿ ಯೋಜನೆ ಒಂದಕ್ಕೇ 28,608 ಕೋಟಿ ರೂ.ಅನುದಾನ ಮೀಸಲಿರಿಸಿದೆ.
ಯಾವ ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಅನುದಾನ ಮೀಸಲು ?
ಗೃಹಲಕ್ಷ್ಮಿ ಯೋಜನೆ: ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿರಿಸಲಾಗಿದೆ.
ಗೃಹಜ್ಯೋತಿ ಯೋಜನೆ: ಉಚಿತ ವಿದ್ಯುತ್ ಒದಗಿಸುವ ಯೋಜನೆಗೆ ಈ ಬಾರಿಯ ಬಜೆಟ್‌ನಲ್ಲಿ 10,578 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ.
ಅನ್ನಭಾಗ್ಯ ಯೋಜನೆ: ಉಚಿತ ಅಕ್ಕಿ ನೀಡುವ ಯೋಜನೆಗೆ 6,200 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ.
ಶಕ್ತಿ ಯೋಜನೆ: ಮಹಿಳೆಯರಿ ಉಚಿತ ಬಸ್ ಪ್ರಯಾಣ ಯೋಜನೆ ಆಗಿರುವ ಶಕ್ತಿ ಯೋಜನೆಗಾಗಿ ಸಾರಿಗೆ ಸಂಸ್ಥೆಗಳಿಗೆ 5,300 ಕೋಟಿ ಅನುದಾನ ಮೀಸಲಿರಿಸಲಾಗಿದೆ.
ಯುವನಿಧಿ ಯೋಜನೆ: ಇನ್ನು ಯುವನಿಧಿ ಯೋಜನೆಗೆ ಈ ವರ್ಷದ ಬಜೆಟ್‌ನಲ್ಲಿ ಯಾವುದೇ ಅನುದಾನ ಘೋಷಿಸಲಾಗಿಲ್ಲ.
-

ಕರ್ನಾಟಕ ಬಜೆಟ್ 2026: ನಮಗೆ ಹಣ ಬೇಡ, ಗುಣಮಟ್ಟದ ಶಾಲೆ, ಆಸ್ಪತ್ರೆ ಕೊಡಿ: ಸಾರ್ವಜನಿಕರ ಆಗ್ರಹ
-

Karnataka Budget 2026: ಮಾ.6 ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ, ಸಮಯ, ನೇರ ಪ್ರಸಾರ ಲಿಂಕ್, ವಿವರ
-

Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್
-

Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು
-

Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ
-

Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: “ಟಾಕ್ಸಿಕ್” ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ
-

ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ
-

Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ
-

Karna Serial: “ಕರ್ಣ” ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ
-

Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ
-

‘ವಂತಾರ’ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ
-

Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/karnataka-budget-2026-rs-28-crore-allocation-for-gruha-lakshmi-yojana-under-guarantee-schemes-446121.html. xn--babytilbehr-pgb.com does not claim ownership of this content. All rights remain with the original publisher.
