Gruhalakshmi Scheme: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್‌ ನ್ಯೂಸ್‌ | Gruhalakshmi Scheme: Karnataka Government Releases Pending Two Installments Says Lakshmi Hebbalkar

Karnataka

oi-Madhusudhan KR

Gruhalakshmi Scheme: ಕಾಂಗ್ರೆಸ್‌ ನೇತೃತ್ವದ ಸಿಎಂ ಸಿದ್ದರಾಮಯ್ಯ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಇದರಡಿಯಲ್ಲಿ ಪ್ರತಿ ತಿಂಗಳು ಪ್ರತಿ ಮನೆ ಯಜಮಾನಿ ಖಾತೆಗೆ 2,000 ರೂಪಾಯಿ ಹಣ ಹಾಕಲಾಗುತ್ತದೆ. ಆದರೆ, ಕೆಲವು ಕಂತುಗಳ ಹಣ ಬಾಕಿಯಿರುವ ಬಗ್ಗೆ ಆರೋಪ ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌ ನೀಡಿದ್ದಾರೆ.

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಪ್ರಮುಖವಾಗಿರುವ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಮಾಹಿತಿ ನೀಡಿದ್ದಾರೆ. ಬಾಕಿ ಉಳಿದಿದ್ದ ಎರಡು ಕಂತುಗಳ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಬೆಳಗಾವಿಯಲ್ಲಿ ತಿಳಿಸಿದ್ದಾರೆ.

Gruhalakshmi Scheme Karnataka Government Releases Pending Two Installments Says Lakshmi Hebbalkar

52,000 ರೂಪಾಯಿ ಜಮೆ: ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಇದು ದೊಡ್ಡ ಮಟ್ಟದ ನಿರಾಳತೆ ತಂದಿದೆ. ಈ ಯೋಜನೆಯಡಿ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡಲಾಗುತ್ತಿದ್ದು, ಇದೀಗ 26ನೇ ಕಂತಿನವರೆಗೆ ಹಣ ಬಿಡುಗಡೆಯಾಗುದೆ. ಈವರೆಗೆ ಒಟ್ಟು 52,000 ರೂಪಾಯಿಗಳಷ್ಟು ಮೊತ್ತ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ ಎಂದು ಸಚಿವೆ ಮಾಹಿತಿ ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಿದ್ದು, ಕುಟುಂಬ ನಿರ್ವಹಣೆಗೆ ಸಹಾಯ ಮಾಡುತ್ತಿದೆ. ಇತ್ತೀಚೆಗೆ ಬಿಡುಗಡೆಗೊಂಡ ಎರಡು ತಿಂಗಳ ಹಣ ನೇರವಾಗಿ ಯಜಮಾನಿಯರ ಬ್ಯಾಂಕ್ ಖಾತೆಗೆ ಜಮೆಯಾಗಿದ್ದು, ಲಕ್ಷಾಂತರ ಮಹಿಳೆಯರಲ್ಲಿ ಸಂತಸ ಮೂಡಿಸಿದೆ. ಮುಂದಿನ ದಿನಗಳಲ್ಲೂ ಯೋಜನೆಯ ಹಣ ಬಿಡುಗಡೆ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/gruhalakshmi-scheme-karnataka-government-releases-pending-two-installments-says-lakshmi-hebbalkar-442885.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo