Heavy Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ: ಐಎಂಡಿ | Heavy Rain Alert: IMD Warns of Continued Downpour and Hailstorms Across Karnataka, Including Bengaluru

Karnataka

oi-Hitesh Y

Heavy Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಮೂರರಿಂದ ಐದು ದಿನಗಳ ವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ. ಇನ್ನು ಮಾರ್ಚ್‌ 18ರ ಬುಧವಾರ ಸಂಜೆ, ರಾತ್ರಿ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಕೆಲವು ಭಾಗದಲ್ಲಿ ಮಳೆಯಿಂದಾಗಿ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿತ್ತು.

ಬೆಂಗಳೂರು ಹಾಗೂ ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬುಧವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ, ಬಣಕಲ್, ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರು, ಮಾಗುಂಡಿ, ಕಡಬಗೆರೆ, ಕಣತಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಇನ್ನು ಕಳಸ, ಶೃಂಗೇರಿ ಹಾಗೂ ಕೊಪ್ಪ ತಾಲ್ಲೂಕಿನ ವಿವಿಧ ಭಾಗದಲ್ಲೂ ಮಳೆಯಾಗಿದೆ.

Heavy Rain

ಬೆಂಗಳೂರಿನಲ್ಲಿ ಭಾರೀ ಮಳೆ

ಬುಧವಾರ ಸಂಜೆಯಿಂದಲೇ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಿತ್ತು. ಬೆಂಗಳೂರಿನ ವಿವಿಧ ಭಾಗಗಳಲ್ಲಿ ಬುಧವಾರ ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಬುಧವಾರ ಸಂಜೆ ಯುಗಾದಿ ಹಬ್ಬಕ್ಕೆ ದಿನಸಿ ಸೇರಿದಂತೆ ವಿವಿಧ ವಸ್ತುಗಳನ್ನು ಖರೀದಿ ಮಾಡುವುದಕ್ಕೆ ಬಂದವರು ಹಾಗೂ ಬೇರೆ ಬೇರೆ ಊರುಗಳಿಗೆ ಪ್ರಯಾಣ ಬೆಳೆಸಿದ್ದ ಜನರು ದಿಢೀರ್ ಸುರಿದ ಮಳೆಗೆ ಪರದಾಡಿದರು. ಏಕಾಏಕಿ ಮಳೆಯಿಂದಾಗಿ ವ್ಯಾಪಾರಸ್ಥರು ಹಾಗೂ ಗ್ರಾಹಕರು ತೊಂದರೆ ಅನುಭವಿಸುವಂತೆ ಆಯಿತು.

ಬೆಂಗಳೂರಿನ ಈ ಭಾಗಗಳಲ್ಲಿ ಮಳೆ

ಇನ್ನು ಬೆಂಗಳೂರಿನ ಯಲಹಂಕ, ಜಕ್ಕೂರು, ಚೌಡೇಶ್ವರಿ ನಗರ, ಬ್ಯಾಟರಾಯನಪುರ, ಅರಕೆರೆ, ವಿದ್ಯಾರಣ್ಯಪುರ, ಬೊಮ್ಮನಹಳ್ಳಿ, ದೊರೆಸಾನಿಪಾಳ್ಯ, ಕಾಡುಗೋಡಿ, ಬಿಳೇಕಹಳ್ಳಿ, ಗೊಟ್ಟಿಗೆರೆ, ಶೆಟ್ಟಿಹಳ್ಳಿ, ಬಿಟಿಎಂ ಲೇಔಟ್, ಬಾಗಲಕುಂಟೆ ಹಾಗೂ ಪೂರ್ವ ಮನೋರಾಯನಪಾಳ್ಯ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಭಾರೀ ಮಳೆಯಿಂದಾಗಿ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿತ್ತು. ಅಲ್ಲದೆ ಭಾರೀ ಟ್ರಾಫಿಕ್ ಜಾಮ್ ಸಮಸ್ಯೆಯೂ ಇತ್ತು.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/heavy-rain-alert-imd-warns-of-continued-downpour-and-hailstorms-across-karnataka-including-bengaluru-447581.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo