IPL 2026: ಸಿಎಸ್‌ಕೆ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ಪಂದ್ಯಕ್ಕೆ ಮಳೆ ಭೀತಿ ಇದ್ಯಾ? ಹವಾಮಾನ ಇಲಾಖೆ ಹೇಳೋದೇನು | CSK vs DC IPL 2026 Match: Channi’s Chepauk Weather Report, Pitch Analysis and Playing XI Preview

Sports

oi-Madhusudhan KR

CSK Vs DC Match Weather Report: ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಶನಿವಾರ (ಏಪ್ರಿಲ್ 11) ಸಂಜೆ ನಡೆಯುವ ಐಪಿಎಲ್‌ 2026ರ 18ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಕದನಕ್ಕೆ ಮಳೆ ಭೀತಿ ಇದ್ಯಾ? ಹವಾಮಾನ ಇಲಾಖೆ ಹೇಳೋದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಡೆಲ್ಲಿ ಕ್ಯಾಟಪಿಟಲ್ಸ್‌ ಈವರೆಗೂ ಆಡಿದ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಿದೆ. ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಕಳೆದ ಪಂದ್ಯದಲ್ಲಿ ಕೇವಲ 1 ರನ್‌ನ ಅಲ್ಪ ಅಂತರದಿಂದ ಡೆಲ್ಲಿ ಸೋಲನುಭವಿಸಿತ್ತು. ಇದೀಗ ಇಂದಿನ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಮೇಲಕ್ಕೇರುವ ಪ್ಲಾನ್ ಮಾಡಿಕೊಂಡಿದೆ.

CSK vs DC IPL 2026 Match Channi s Chepauk Weather Report Pitch Analysis and Playing XI Preview

ಮೊದಲ ಗೆಲುವಿನ ಭರವಸೆಯಲ್ಲಿ ಸಿಎಸ್‌ಕೆ

ಮತ್ತೊಂದೆಡೆ, ಈವರೆಗೆ ಆಡಿರುವ ಮೂರೂ ಪಂದ್ಯಗಳಲ್ಲಿ ಸತತ ಸೋಲನ್ನು ಅನುಭವಿಸಿರುವ ಚೆನ್ನೈ, ಅಂಕಪಟ್ಟಿಯಲ್ಲಿ ಯಾವುದೇ ಅಂಕವಿಲ್ಲದೆ ಕೊನೆಯ ಸ್ಥಾನದಲ್ಲಿದೆ. ತಂಡದ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಿಂದ ಈ ಬಾರಿ ಹೇಳಿಕೊಳ್ಳುವಂತಹ ಪ್ರದರ್ಶನ ಕಂಡುಬಂದಿಲ್ಲ. ಇನ್ನೂ ಇಂದು (ಏಪ್ರಿಲ್ 11) ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹೋರಾಡಲಿದೆ. ತನ್ನ ತವರಿನ ಮೈದಾನವಾದ ಚೆಪಾಕ್‌ನಲ್ಲಿ ನಡೆಯುತ್ತಿರುವ ಪಂದ್ಯವಾದ್ದರಿಂದ, ಇಲ್ಲಿ ಈ ಸೀಸನ್‌ನ ಮೊದಲ ಗೆಲುವಿನ ಭರವಸೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಇದೆ.

ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ?

ಪಂದ್ಯದ ಸಮಯದಲ್ಲಿ ತಾಪಮಾನವು 28°C ನಿಂದ 31°C ವರೆಗೆ ಇರಲಿದೆ. ಯಾವುದೇ ಮಳೆಯ ಮನ್ಸೂಚನೆ ಇರುವುದಿಲ್ಲ. ಆದ್ದರಿಂದ ಪೂರ್ಣ ಪ್ರಮಾಣದ ಪಂದ್ಯ ನಡೆಯುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚೆಪಾಕ್ ಮೈದಾನವು ಸಾಮಾನ್ಯವಾಗಿ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗಲಿದೆ. ಆದರೆ, ಮತ್ತೊಂದು ಮಾಹಿತಿ ಪ್ರಕಾರ, ಇದು ಬ್ಯಾಟಿಂಗ್‌ಗೂ ಕೂಡ ಹೆಚ್ಚು ಪೂರಕವಾಗುವ ಸಾಧ್ಯತೆಯಿದೆ. ಕಳೆದ ಪಂದ್ಯದಲ್ಲಿ ಇಲ್ಲಿ ರನ್ ಹೊಳೆ ಹರಿದುಬಂದಿರುವ ಉದಾಹರಣೆಯಿದೆ. ಇಬ್ಬನಿಯ ಪ್ರಭಾವ ಇರುವುದರಿಂದ ಟಾಸ್ ಗೆದ್ದ ತಂಡವು ಮೊದಲು ಬೌಲಿಂಗ್ ಆಯ್ದುಕೊಳ್ಳುವುದು ಬಹುತೇಕ ಖಚಿತ. ನಂತರ ಬ್ಯಾಟಿಂಗ್ ಮಾಡುವ ತಂಡಕ್ಕೆ ಚೆಂಡು ಬ್ಯಾಟ್‌ಗೆ ಸುಲಭವಾಗಿ ಬರುವುದರಿಂದ ಚೇಸಿಂಗ್ ಸುಲಭವಾಗಬಹುದು.

ಸಿಎಸ್‌ಕೆ ಸಂಭಾವ್ಯ ಪ್ಲೇಯಿಂಗ್ 11: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಋತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಶಿವಂ ದುಬೆ, ಡೆವಾಲ್ಡ್ ಬ್ರೆವಿಸ್, ಸರ್ಫರಾಜ್ ಖಾನ್, ಕಾರ್ತಿಕ್ ಶರ್ಮಾ / ಪ್ರಶಾಂತ್ ವೀರ್, ಜೇಮಿ ಓವರ್ಟನ್ ಮ್ಯಾಟ್ ಹೆನ್ರಿ, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಖಲೀಲ್ ಅಹ್ಮದ್.

ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ಪ್ಲೇಯಿಂಗ್ 11: ಪಾತುಮ್ ನಿಸ್ಸಾಂಕ, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ನಿತೀಶ್ ರಾಣಾ / ಅಶುತೋಷ್ ಶರ್ಮಾ, ಸಮೀರ್ ರಿಜ್ವಿ, ಡೇವಿಡ್ ಮಿಲ್ಲರ್, ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ವಿಪ್ರಜ್ ನಿಗಮ್, ಕುಲದೀಪ್ ಯಾದವ್, ಲುಂಗಿ ಎನ್ಗಿಡಿ, ಟಿ.ನಟರಾಜನ್, ಮುಕೇಶ್ ಕುಮಾರ್.

Disclaimer: This content was automatically imported from a third-party source via RSS feed. The original source is: https://kannada.oneindia.com/news/sports/csk-vs-dc-ipl-2026-match-channis-chepauk-weather-report-pitch-analysis-and-playing-xi-preview-450125.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo