Jana Nayagan: ದಳಪತಿ ವಿಜಯ್ ಚಿತ್ರಕ್ಕೆ ಪೈರಸಿ ಕಾಟ: ಸೋರಿಕೆಯಾದ ‘ಜನ ನಾಯಗನ್’ ಕ್ಲಿಪ್‌, ಶೇರ್ ಮಾಡಿದರೆ ಬೀಳುತ್ತೆ ಕೇಸ್ | Jana Nayagan Thalapathy Vijay Movie Scenes Leaked KVN Productions Warns Strict Action Against Piracy

Entertainment

oi-Manohara M

ಕನ್ನಡ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್, ದಳಪತಿ ವಿಜಯ್‌ ನಟನೆಯ ತನ್ನ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಚಿತ್ರದ ದೃಶ್ಯಗಳು ಅಕ್ರಮವಾಗಿ ಸೋರಿಕೆಯಾಗಿರುವ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಅಧಿಕೃತ ಸಾರ್ವಜನಿಕ ಪ್ರಕಟಣೆ ಹೊರಡಿಸಿರುವ ಸಂಸ್ಥೆಯು, ಚಿತ್ರದ ಹಕ್ಕುಸ್ವಾಮ್ಯ ಉಲ್ಲಂಘಿಸುವವರ ವಿರುದ್ಧ ಮತ್ತು ಡಿಜಿಟಲ್ ಪೈರಸಿಯಲ್ಲಿ ತೊಡಗಿರುವವರ ವಿರುದ್ಧ ಸಮರ ಸಾರಿದೆ.

ಅಕ್ರಮವಾಗಿ ದೃಶ್ಯಗಳ ಸೋರಿಕೆ

‘ಜನ ನಾಯಗನ್’ ಚಿತ್ರದ ಸಂಪೂರ್ಣ ಹಕ್ಕುಸ್ವಾಮ್ಯವನ್ನು ಕೆವಿಎನ್ ಪ್ರೊಡಕ್ಷನ್ಸ್ ಹೊಂದಿದ್ದು, ಚಿತ್ರದ ಕೆಲವು ಪ್ರಮುಖ ದೃಶ್ಯಗಳು ಹಾಗೂ ಕ್ಲಿಪ್‌ಗಳನ್ನು ಅಪರಿಚಿತ ವ್ಯಕ್ತಿಗಳು ಅಕ್ರಮವಾಗಿ ಪಡೆದುಕೊಂಡಿದ್ದಾರೆ. ಈ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಚಿತ್ರದ ಯಶಸ್ಸಿಗೆ ಅಡ್ಡಿಪಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಂಸ್ಥೆ ತಿಳಿಸಿದೆ. ಕೆಲವು ಪ್ರಕರಣಗಳಲ್ಲಿ ಚಿತ್ರದ ಹೆಚ್ಚಿನ ಭಾಗವನ್ನೇ ಕಾಪಿ ಮಾಡಿ ಪ್ರಸಾರ ಮಾಡಲಾಗುತ್ತಿದ್ದು, ಇದು ಚಿತ್ರತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Jana Nayagan

ಡಿಜಿಟಲ್ ಪೈರಸಿ ಶಿಕ್ಷಾರ್ಹ ಅಪರಾಧ

ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಲೀಕ್ ಆದ ದೃಶ್ಯಗಳನ್ನು ಡೌನ್‌ಲೋಡ್ ಮಾಡುವುದು, ವೀಕ್ಷಿಸುವುದು, ಸ್ಟೋರ್ ಮಾಡುವುದು ಅಥವಾ ಇತರರಿಗೆ ಫಾರ್ವರ್ಡ್ ಮಾಡುವುದು ಕಾನೂನುಬಾಹಿರ ಎಂದು ಸಂಸ್ಥೆ ಎಚ್ಚರಿಸಿದೆ. ಮುಖ್ಯವಾಗಿ ವಾಟ್ಸಾಪ್, ಟೆಲಿಗ್ರಾಮ್, ಇನ್‌ಸ್ಟಾಗ್ರಾಮ್, ಫೇಸ್‌ಬುಕ್, ಎಕ್ಸ್ (ಟ್ವಿಟರ್), ಯೂಟ್ಯೂಬ್ ಸೈಟ್‌ಗಳ ಮೂಲಕ ಇಂತಹ ವಿಷಯಗಳನ್ನು ಪ್ರಸಾರ ಮಾಡುವುದು ಹಕ್ಕುಸ್ವಾಮ್ಯ ಕಾಯ್ದೆಯಡಿ ಗಂಭೀರ ಕ್ರಿಮಿನಲ್ ಅಪರಾಧವಾಗಲಿದೆ. ಇಂತಹ ಚಟುವಟಿಕೆಗಳನ್ನು ಸಂಸ್ಥೆ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.

ತಾಂತ್ರಿಕ ತನಿಖೆ ಮತ್ತು ಕಾನೂನು ಕ್ರಮ

ಈಗಾಗಲೇ ಈ ಸೋರಿಕೆಯ ಮೂಲವನ್ನು ಪತ್ತೆಹಚ್ಚಲು ಕೆವಿಎನ್ ಪ್ರೊಡಕ್ಷನ್ಸ್ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಡಿಜಿಟಲ್ ಲೋಕದಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕೆಯನ್ನು ಪತ್ತೆಹಚ್ಚಲು ಸಾಧ್ಯವಿದ್ದು, ಫೋರೆನ್ಸಿಕ್ ತನಿಖೆಯನ್ನು ಆರಂಭಿಸಲಾಗಿದೆ. ಈ ಪೈರಸಿ ಜಾಲದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯನ್ನು ಗುರುತಿಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಯಾವುದೇ ವಿನಾಯಿತಿ ಇಲ್ಲದೆ ಕಠಿಣ ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವುದಾಗಿ ಕೆವಿಎನ್‌ ಸಂಸ್ಥೆ ತನ್ನ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

ಲೀಕ್ ಆದ ದೃಶ್ಯಗಳೊಂದಿಗೆ ಯಾವುದೇ ರೀತಿಯಲ್ಲಿ ಸಂಪರ್ಕ ಹೊಂದದಂತೆ ಸಾರ್ವಜನಿಕರಿಗೆ ಸಂಸ್ಥೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಒಂದು ವೇಳೆ ಇಂತಹ ದೃಶ್ಯಗಳು ಅಥವಾ ಲಿಂಕ್‌ಗಳು ನಿಮ್ಮ ಮೊಬೈಲ್‌ಗೆ ಬಂದರೆ, ಅವುಗಳನ್ನು ಓಪನ್ ಮಾಡಬೇಡಿ ಮತ್ತು ಕೂಡಲೇ ಡಿಲೀಟ್ ಮಾಡಿ. ಅಕ್ರಮ ದೃಶ್ಯಗಳನ್ನು ಪ್ರೋತ್ಸಾಹಿಸುವವರು ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ. ಚಿತ್ರದ ಗುಣಮಟ್ಟ ಮತ್ತು ಚಿತ್ರತಂಡದ ಶ್ರಮವನ್ನು ಗೌರವಿಸುವುದು ಪ್ರತಿಯೊಬ್ಬ ಪ್ರೇಕ್ಷಕನ ಜವಾಬ್ದಾರಿ ಎಂದು ಸಂಸ್ಥೆ ಮನವಿ ಮಾಡಿದೆ.


Disclaimer: This content was automatically imported from a third-party source via RSS feed. The original source is: https://kannada.oneindia.com/entertainment/jana-nayagan-thalapathy-vijay-movie-scenes-leaked-kvn-productions-warns-strict-action-against-piracy-450033.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo