Karnataka Election: ಪಂಚರಾಜ್ಯಗಳ ಜೊತೆ ಕರ್ನಾಟಕದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ ದಿನಾಂಕ ಘೋಷಣೆ | Election Dates Announced for Five State Assembly Polls and Two Karnataka By-Elections: Know details

Karnataka

oi-Madhusudhan KR

Karnataka Elections 2026: ಭಾರತೀಯ ಚುನಾವಣಾ ಆಯೋಗವು ಇಂದು (ಮಾರ್ಚ್‌ 15) ಮಹತ್ವದ ಪತ್ರಿಕಾಗೋಷ್ಠಿ ನಡೆಸಿ ದೇಶದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದೇ ವೇಳೆ ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆ ದಿನಾಂಕಗಳನ್ನು ಘೋಷಣೆ ಮಾಡಿದೆ.

ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ವಿಧಾನಸಭಾ ಚುನಾವಣೆ 2026 ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗವು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಈ ಘೋಷಣೆಯೊಂದಿಗೆ ಆಯಾ ರಾಜ್ಯಗಳಲ್ಲಿ ತಕ್ಷಣದಿಂದಲೇ ‘ಮಾದರಿ ನೀತಿ ಸಂಹಿತೆ’ ಜಾರಿಗೆ ಬಂದಿದೆ.

Election Dates Announced for Five State Assembly Polls and Two Karnataka By-Elections Know details

ಕರ್ನಾಟಕದ 2 ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ

ಇದೇ ವೇಳೆ ಕರ್ನಾಟಕದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಎರಡು ಕ್ಷೇತ್ರಗಳ ಉಪಚುನಾಚಣೆ ದಿನಾಂಕಗಳನ್ನು ಘೋಷಿಸಿದೆ. ರಾಜ್ಯ ರಾಜಕಾರಣದಲ್ಲಿ ಈ ಘೋಷಣೆ ಸಂಚಲನ ಮೂಡಿಸಿದೆ. ಕರ್ನಾಟಕದಲ್ಲಿ ತೆರವಾಗಿದ್ದ ಈ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗವು ಉಪಚುನಾವಣೆ ವೇಳಾಪಟ್ಟಿ ಪ್ರಕಟಿಸಿದೆ.

ಕ್ಷೇತ್ರ, ಮತದಾನ, ಫಲಿತಾಂಶ ದಿನಾಂಕಗಳ ವಿವರ

ದಾವಣಗೆರೆ ದಕ್ಷಿಣ – ಏಪ್ರಿಲ್ 9

ಬಾಗಲಕೋಟೆ – ಏಪ್ರಿಲ್ 9

ಫಲಿತಾಂಶ – ಮೇ 4, 2026

ದೇಶದ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಕರ್ನಾಟಕದ ಎರಡು ಉಪಚುನಾವಣೆಗಳ ಫಲಿತಾಂಶಗಳು ಮೇ 4ರಂದು ಪ್ರಕಟವಾಗಲಿದೆ. ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಹಂತಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿದ್ದು, ಶಾಂತಿಯುತ ಮತದಾನಕ್ಕಾಗಿ ಕೇಂದ್ರ ಭದ್ರತಾ ಪಡೆಗಳ ನಿಯೋಜನೆ ಮತ್ತು ಕಟ್ಟುನಿಟ್ಟಿನ ನಿಗಾ ಇರಿಸಲು ಆಯೋಗ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/election-dates-announced-for-five-state-assembly-polls-and-two-karnataka-by-elections-know-details-447189.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo