Karnataka Rain: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ: ಐಎಂಡಿ ವರದಿ | Karnataka Rain Alert: India Meteorological Department warns heavy rain for 2 days in Bengaluru multiple districts

Karnataka

oi-Hitesh Y

Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಚಂಡಮಾರುತ ಪ್ರಸರಣದಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಇಂದಿನಿಂದ ಏಪ್ರಿಲ್ 11ರ ವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.

ಗಂಗಾ ನದಿಯ ಪಶ್ಚಿಮ ಬಂಗಾಳದಿಂದ ಛತ್ತೀಸ್‌ಗಢದಾದ್ಯಂತ ತೆಲಂಗಾಣಕ್ಕೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿ ಒಂದು ಟ್ರಫ್ ಸಾಗುತ್ತಿದೆ. ದಕ್ಷಿಣ ಕರಾವಳಿ ಅಂಧ್ರಪ್ರದೇಶ ಮತ್ತು ನೆರೆಹೊರೆಗಳ ಮೇಲಿನ ವಾಯುಭಾರ ಸುಳಿಗಾಳಿ ಈಗ ದಕ್ಷಿಣ ಕರಾವಳಿ ಅಂಧ್ರಪ್ರದೇಶದ ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿದೆ.

Karnataka Rain

ರಾಯಲಸೀಮಾ ಮತ್ತು ನೆರೆಹೊರೆಗಳ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಮೇಲ್-ವಾಯು ಸುಳಿಗಾಳಿ ಸುತ್ತಳತ ಇರುತ್ತದೆ. ಅಲ್ಲದೆ ರಾಯಲಸೀಮಾ ಮತ್ತು ನೆರಹೊರಗಳ ಮೇಲೆ ಮೇಲಿನ ವಾಯುಭಾರ ಸುಳಿಗಾಳಿದಿಂದ ತಮಿಳುನಾಡಿನಾದ್ಯಂತ ಮನ್ನಾರ್ ಕೊಲ್ಲಿಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಒಂದು ಟ್ರಫ್ ಸಾಗುತ್ತದೆ. ಕರ್ನಾಟಕದ ಒಳನಾಡಿನಾದ್ಯಂತ ಮರಾಠವಾಡದಿಂದ ದಕ್ಷಿಣ ತಮಿಳುನಾಡಿನವರೆಗಿನ ಟ್ರಫ್ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಮೇಲೆ ತಿಳಿಸಿದ ಬ್ರಫ್ ಯೊಂದಿಗೆ ವಿಲೀನಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.

ಕರ್ನಾಟಕದ ಯಾವ ಭಾಗಗಳಲ್ಲಿ ಮಳೆ

ಇನ್ನು ಕರ್ನಾಟಕದ ವಿವಿಧ ಭಾಗಗಳಲ್ಲಿ ಏಪ್ರಿಲ್ 11ರ ವರೆಗೆ ಮಳೆ ಆಗಲಿದೆ. ಏಪ್ರಿಲ್ 6 ಮತ್ತು 7ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಿಂಚು – ಗುಡುಗು ಸಹಿತ ಮಳೆಯಾಗಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ.

ಇನ್ನು ಕರ್ನಾಟಕದ ಉತ್ತರ ಒಳನಾಡಿನಲ್ಲಿ ಏಪ್ರಿಲ್ 6 ಮತ್ತು ಏಪ್ರಿಲ್ 7ರಂದು ಬೆಳಗಾವಿ, ಧಾರವಾಡ, ಗದಗ, ರಾಯಚೂರು ಹಾಗೂ ಕಲಬುರಗಿಯಲ್ಲಿ ಮಿಂಚು – ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಅಲ್ಲದೆ ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.

ದಕ್ಷಿಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ

ದಕ್ಷಿಣ ಕರ್ನಾಟಕ / ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲೂ ಮುಂದಿನ ಎರಡು ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ಶಿವಮೊಗ್ಗ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ. ಅಲ್ಲದೆ ಈ ವೇಳೆ ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖ ಮಾಡಿದೆ.

ಬೆಂಗಳೂರಿನಲ್ಲೂ ಎರಡು ದಿನ ಮಳೆ

ಇನ್ನು ಬೆಂಗಳೂರಿನಲ್ಲೂ ಎರಡು ದಿನ ಭಾರೀ ಮಳೆ ಇರಲಿದೆ ಎಂದು ಐಎಂಡಿ ವರದಿ ತಿಳಿಸಿದೆ. ಬೆಂಗಳೂರು ನಗರದಲ್ಲಿ ಏಪ್ರಿಲ್ 6 ಮತ್ತು 7ರಂದು ಮಳೆ ಆಗಲಿದೆ. ಮುಂದಿನ 24 ಗಂಟೆ ಅವಧಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು 33 ಡಿಗ್ರಿ ಸೆಲ್ಸಿಯಸ್ ಹಾಗೂ 23 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಐಎಂಡಿ ವರದಿ ಉಲ್ಲೇಖಿಸಿದೆ.

ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ಕರ್ನಾಟಕದ ಕಲಬುರಗಿಯಲ್ಲಿ ಗರಿಷ್ಠ ತಾಪಮಾನವು 38.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಗರಿಷ್ಠ ತಾಪಮಾನವು ಉತ್ತರ ಒಳನಾಡಿನ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಅನೇಕ ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ (1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ. ಒಳನಾಡಿನ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆ (3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ) ಸೆಲ್ಸಿಯಸ್ ಇತ್ತು. ಉಳಿದ ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯವಾಗಿತ್ತು ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/karnataka-rain-alert-india-meteorological-department-warns-heavy-rain-for-2-days-in-bengaluru-multi-449473.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo