
Karnataka
oi-Hitesh Y
Karnataka Rain Updates: ಚಂಡಮಾರುತ ಪ್ರಸರಣದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ವರೆಗೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಆಂಧ್ರಪ್ರದೇಶದ ದಕ್ಷಿಣ ಕರಾವಳಿಯ ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 15 ಕಿ.ಮೀ ಎತ್ತರದಲ್ಲಿ ಮೇಲ್ಮಟ ವಾಯು ಸುಳಿಗಾಳಿ ಮುಂದುವರೆದಿದೆ.
ರಾಯಲಸೀಮಾ ಮತ್ತು ನೆರೆಹೊರೆಗಳ ಮೇಲಿನ ವಾಯು ಸುಳಿಗಾಳಿಯು ಈಗ ತೆಲಂಗಾಣ ಮತ್ತು ನೆರೆಹೊರೆಗಳ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿದೆ. ಈಗ ತೆಲಂಗಾಣ ಮತ್ತು ನೆರೆಹೊರೆಗಳ ಮೇಲಿನ ವಾಯು ಸುಳಿಗಾಳಿಯಿಂದ ರಾಯಲಸೀಮಾ ಮತ್ತು ತಮಿಳುನಾಡಿನ ಮೂಲಕ ಮನ್ನಾರ್ ಕೊಲ್ಲಿಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಟ್ರಫ್ ಪ್ರದೇಶವಿದೆ. ಗಂಗಾನದಿಯ ಪಶ್ಚಿಮ ಬಂಗಾಳದಿಂದ ಛತ್ತೀಸ್ಗಢದಾದ್ಯಂತ ತೆಲಂಗಾಣಕ್ಕೆ ಸರಾಸರಿ ಸಮುದ್ರ ಮಟ್ಟದಿಂದ 0.5 ಕಿ.ಮೀ ಎತ್ತರದಲ್ಲಿ ಟ್ರಫ್ ಕಡಿಮೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖ ಮಾಡಿದೆ.

Karnataka Rain: ಬೆಂಗಳೂರು ಸೇರಿ ವಿವಿಧ ಭಾಗಗಳಲ್ಲಿ ಮಳೆ
ಇನ್ನು ಮುಂದಿನ ಮೂರು ದಿನಗಳ ಅವಧಿಗೆ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ ಎಂದು ಐಎಂಡಿ ವರದಿ ತಿಳಿಸಿದೆ. ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 9ರಿಂದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ. ಇನ್ನು ಇಂದು ಏಪ್ರಿಲ್ 7ರ ಮಂಗಳವಾರದಂದು ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಆದರೆ ಕರ್ನಾಟಕದ ಕರಾವಳಿ ಭಾಗದಲ್ಲಿ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.
ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ
ಇನ್ನು ಬೆಂಗಳೂರಿನಲ್ಲೂ ಇಂದು ವಿವಿಧ ಪ್ರದೇಶಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಪ್ರಮುಖವಾಗಿ ಶುಭ್ರ ಆಕಾಶ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಚದುರಿದಂತೆ ಮಳೆ ಆಗಲಿದೆ. ಅಲ್ಲದೆ ಮುಂದಿನ 48 ಗಂಟೆ ಅವಧಿಯಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನವು ಅನುಕ್ರಮವಾಗಿ 34 ಮತ್ತು 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಯ ಅವಧಿಯಲ್ಲಿ ಕರ್ನಾಟಕದ ಕಲಬುರಗಿ ಮತ್ತು ರಾಯಚೂರಿನಲ್ಲಿ ಗರಿಷ್ಠ ತಾಪಮಾನವು 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಗರಿಷ್ಠ ತಾಪಮಾನವು ಉತ್ತರ ಒಳನಾಡಿನ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ (- 1.6 ಡಿಗ್ರಿ ಸೆಲ್ಸಿಯಸ್ನಿಂದ -3.0 ಡಿಗ್ರಿ ಸೆಲ್ಸಿಯಸ್ ಇತ್ತು) ಮತ್ತು ಉತ್ತರ ಒಳನಾಡಿನ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಗರುನಾರ್ಹವಾಗಿ ಕಡಿಮೆ ಇತ್ತು. ಉಳಿದ ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯವಾಗಿತ್ತು ಎಂದು ಐಎಂಡಿ ವರದಿ ತಿಳಿಸಿದೆ.
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/karnataka-rain-alert-cyclone-impact-to-bring-showers-in-bengaluru-8-districts-for-next-3-days-449601.html. xn--babytilbehr-pgb.com does not claim ownership of this content. All rights remain with the original publisher.
