
Karnataka
oi-Manohara M
ಬೆಂಗಳೂರು: ರಾಜ್ಯದಲ್ಲಿ ಚಳಿಯ ಪ್ರಭಾವ ಸ್ವಲ್ಪ ಕಡಿಮೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಧ್ಯಾಹ್ನದ ಹೊತ್ತು ಬಿಸಿಲು ಏರಿಕೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಆಗಾಗ ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ದಕ್ಷಿಣ ಒಳನಾಡು ಕರ್ನಾಟಕದ ಕೆಲವೆಡೆ ಚದುರಿದ ಮಳೆಯಾಗಿದೆ. ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಒಣ ಹವಾಮಾನ ಮುಂದುವರಿದಿದೆ.
ಮುಂದಿನ 5 ದಿನಗಳ ಕಾಲ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಆದರೆ ಸ್ವಲ್ಪ ಏರಿಕೆ ಕಾಣಬಹುದು. ಗರಿಷ್ಠ ತಾಪಮಾನದಲ್ಲಿ ಮುಂದಿನ 2 ದಿನಗಳಲ್ಲಿ ಹೆಚ್ಚಿನ ಬದಲಾವಣೆ ನಿರೀಕ್ಷೆಯಿಲ್ಲ. ನಂತರ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಭಾಗದಲ್ಲಿ ಆಕಾಶವು ಭಾಗಶಃ ಮೋಡ ಕವಿದಿರಲಿದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಸಾಮಾನ್ಯವಾಗಿ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಕಾಣಿಸಬಹುದು. ಗರಿಷ್ಠ ತಾಪಮಾನ ಸುಮಾರು 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಸೆಲ್ಸಿಯಸ್‌ನಷ್ಟು ಇರಬಹುದು ಎಂದು ಅಂದಾಜಿಸಲಾಗಿದೆ.

ಕನಿಷ್ಠ ತಾಪಮಾನ ದಾಖಲು
ಉತ್ತರ ಒಳನಾಡಿನ ವಿಜಯಪುರದಲ್ಲಿ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಒಳನಾಡು ಕರ್ನಾಟಕದ ಕೆಲವೆಡೆ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚು ದಾಖಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚು ತಾಪಮಾನ ದಾಖಲಾಗಿದೆ. ಕರಾವಳಿ ಮತ್ತು ಒಳನಾಡಿನ ಕೆಲವು ಭಾಗಗಳಲ್ಲಿ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆ ತಾಪಮಾನ ದಾಖಲಾಗಿದೆ.
ಉತ್ತರ ಒಳನಾಡಿನ ಕೆಲವೆಡೆ 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಗಣನೀಯವಾಗಿ ಕಡಿಮೆ ತಾಪಮಾನ ದಾಖಲಾಗಿದೆ. ಉಳಿದ ಪ್ರದೇಶಗಳಲ್ಲಿ ತಾಪಮಾನ ಸಾಮಾನ್ಯ ಮಟ್ಟದಲ್ಲಿದೆ. ವಿಜಯಪುರ, ಹೊನ್ನಾವರ, ಧಾರವಾಡ ಮತ್ತು ಹಾಸನದಲ್ಲಿ ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ ಕಡಿಮೆಯಿದೆ. ಬೆಂಗಳೂರು, ದಾವಣಗೆರೆ, ಮೈಸೂರು, ಹಾವೇರಿ ಮತ್ತು ಮಂಡ್ಯದಲ್ಲಿ ಸಾಮಾನ್ಯಕ್ಕಿಂತ ಅಧಿಕ ಉಷ್ಣಾಂಶವಿದೆ. ವಿಜಯಪುರ, ಆಗುಂಬೆ ಮತ್ತು ಶಿವಮೊಗ್ಗದಲ್ಲಿ ಉಷ್ಣಾಂಶದಲ್ಲಿ ಗಮನಾರ್ಹ ಕುಸಿತ ಕಂಡರೆ, ಹಾವೇರಿಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
ವಾಯುಭಾರ ಕುಸಿತ & ಸುಳಿಗಾಳಿ
ದಕ್ಷಿಣ ಒಳನಾಡಿನ ಮೇಲ್ಭಾಗದಲ್ಲಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿ ಸುಳಿಗಾಳಿ ನಿರ್ಮಾಣವಾಗಿದೆ. ಜೊತೆಗೆ ಕೇರಳ ಕರಾವಳಿಯ ಅರಬ್ಬೀ ಸಮುದ್ರದಲ್ಲಿಯೂ ಒಂದು ಸುಳಿಗಾಳಿ ಇದೆ. ಉತ್ತರ ತಮಿಳುನಾಡಿನಿಂದ ಕರ್ನಾಟಕದ ಒಳನಾಡು, ಮರಾಠವಾಡ ಮತ್ತು ವಿದರ್ಭದ ಮೂಲಕ ನೈಋತ್ಯ ಮಧ್ಯಪ್ರದೇಶದವರೆಗೆ (0.9 ಕಿ.ಮೀ ಎತ್ತರದಲ್ಲಿ) ವಾಯುಭಾರ ಕುಸಿತದ ಹಾದಿ ಹರಡಿದೆ.
ಆಗ್ನೇಯ ಬಂಗಾಳ ಕೊಲ್ಲಿಯಿಂದ ದಕ್ಷಿಣ ತಮಿಳುನಾಡಿನವರೆಗೆ ಮತ್ತೊಂದು ವಾಯುಭಾರ ಕುಸಿತದ ಹಾದಿ ಇದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿದ್ದ ಸುಳಿಗಾಳಿ ಈಗ ದುರ್ಬಲಗೊಂಡಿದೆ. ದಕ್ಷಿಣ ಒಳನಾಡು ಕರ್ನಾಟಕದ ಮೇಲ್ಭಾಗದಲ್ಲಿ 1.5 ಕಿ.ಮೀ ಎತ್ತರದಲ್ಲಿ ಮೇಲ್ಮೈ ಸುಳಿಗಾಳಿಯ ಸಂಚಲನ ಇದೆ. ಕೇರಳ ಕರಾವಳಿ ಸಮೀಪ ದಕ್ಷಿಣ ಪೂರ್ವ ಅರಬ್ಬೀ ಸಮುದ್ರದ ಮೇಲೆ 1.5 ಕಿ.ಮೀ ಎತ್ತರದವರೆಗೆ ಸುಳಿಗಾಳಿ ಸಂಚಲನ ಇದೆ. ಇದು ದಕ್ಷಿಣ ಪೂರ್ವ ಬಂಗಾಳ ಕೊಲ್ಲಿಯಿಂದ ದಕ್ಷಿಣ ತಮಿಳುನಾಡುವರೆಗೆ ಕಂಡುಬಂದಿದೆ. ಬಂಗಾಳ ಕೊಲ್ಲಿಯ ದಕ್ಷಿಣ ಪೂರ್ವ ಭಾಗದಲ್ಲಿದ್ದ ಸುಳಿಗಾಳಿ ಸಂಚಲನ ದುರ್ಬಲಗೊಂಡಿದೆ. ರಾಜ್ಯದಲ್ಲಿ ತಾಪಮಾನದಲ್ಲಿ ಹಂತ ಹಂತವಾಗಿ ಏರಿಕೆ ಕಾಣಬಹುದಾದರೂ, ದಕ್ಷಿಣ ಒಳನಾಡಿನಲ್ಲಿ ಚದುರಿದ ಮಳೆಯ ಸಾಧ್ಯತೆ ಮುಂದುವರಿಯಲಿದೆ ಎಂದು ವಿವರಿಸಿದೆ.
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/karnataka-weather-update-cold-wave-eases-temperature-likely-to-rise-in-several-districts-with-rain-445369.html. xn--babytilbehr-pgb.com does not claim ownership of this content. All rights remain with the original publisher.
