
Karnataka
oi-Hitesh Y
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ರಾಜ್ಯದಾದ್ಯಂತ ಚಳಿ ಪ್ರಮಾಣ ಬಹುತೇಕ ಇಳಿಕೆಯಾಗಿದ್ದು, ಮುಂಜಾನೆ ಮತ್ತು ಸಂಜೆ ಸಮಯದಲ್ಲಿ ಮಾತ್ರ ಅಲ್ಪ ಪ್ರಮಾಣದ ಚಳಿ ಇದೆ. ಉಳಿದಂತೆ ಬಹುತೇಕ ಒಣಹವೆ ಮುಂದುವರಿದಿದ್ದು, ಮುಂದಿನ ಐದು ದಿನಗಳ ವರೆಗೆ ಇದೇ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇನ್ನು ಈ ನಡುವೆ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶ ರೂಪುಗೊಂಡಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.
ಹಿಂದೂ ಮಹಾಸಾಗರದ ಪೂರ್ವ ಮತ್ತು ಅದರ ಪಕ್ಕದ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ. ವರೆಗೆ ವಿಸ್ತರಿಸಿರುವ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆಯು ಅದೇ ಪ್ರದೇಶದಲ್ಲಿ ಮುಂದುವರೆಯಿತು. ಇದರ ಪ್ರಭಾವದಿಂದಾಗಿ, ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಬಂಗಾಳಕೊಲ್ಲಿಯ ಮಧ್ಯಭಾಗ ಮತ್ತು ಪಕ್ಕದ ಹಿಂದೂ ಮಹಾಸಾಗರದ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಸಮತಟ್ಟಾದ ಪ್ರದೇಶ ದಾವಣಗೆರೆಯಲ್ಲಿ ಕನಿಷ್ಠ ತಾಪಮಾನವು 11.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಹವಾಮಾನ
ಇನ್ನು ಕರ್ನಾಟಕದಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ 1.6 ಡಿಗ್ರಿ ಸೆಲ್ಸಿಯಸ್ನಿಂದ 3.0 ಡಿಗ್ರಿ ಸೆಲ್ಸಿಯಸ್ ಇತ್ತು. ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆ 3.1 ಡಿಗ್ರಿ ಸೆಲ್ಸಿಯಸ್ನಿಂದ 5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇನ್ನುಳಿದ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯವಾಗಿದ್ದು. ಬಹುತೇಕ ಒಣಹವೆ ಮುಂದುವರಿದಿದೆ.
ಉತ್ತರ ಆಂತರಿಕ ಕರ್ನಾಟಕದ ಬಾಗಲಕೋಟೆ, ಧಾರವಾಡ, ಹಾವೇರಿ, ಬೆಳಗಾವಿ ವಿಮಾನ ನಿಲ್ದಾಣ, ಬೀದರ್, ವಿಜಯಪುರ ಮತ್ತು ಗದಗ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ದಾವಣಗೆರೆ, ಹಾಸನ ಮತ್ತು ಚಿಂತಾಮಣಿಯಲ್ಲಿ ಕನಿಷ್ಠ ತಾಪಮಾನವು 11.5 ಡಿಗ್ರಿ ಸೆಲ್ಸಿಯಸ್ನಿಂದ 14.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉತ್ತರ ಆಂತರಿಕ ಕರ್ನಾಟಕದ ಕೊಪ್ಪಳ, ರಾಯಚೂರು ಮತ್ತು ಕಲಬುರ್ಗಿ ಭಾಗದಲ್ಲಿ ಕನಿಷ್ಠ ತಾಪಮಾನವು 15.4 ಡಿಗ್ರಿ ಸೆಲ್ಸಿಯಸ್ನಿಂದ 20.5 ಡಿಗ್ರಿ ಸೆಲ್ಸಿಯಸ್ ಇತ್ತು.
ಮೈಸೂರು, ಚಿತ್ರದುರ್ಗ, ಮಂಡ್ಯ ಡಬ್ಲ್ಯೂಎಸ್, ಬೆಂಗಳೂರು ಕೆಐಎಎಲ್ ಎಪಿ, ಬೆಂಗಳೂರು ಎಚ್ಎಎಲ್ಪಿ, ಬೆಂಗಳೂರು ನಗರ ಮತ್ತು ದಕ್ಷಿಣ ಆಂತರಿಕ ಕರ್ನಾಟಕದ ಬಳ್ಳಾರಿ ಎಡಬ್ಲ್ಯೂಎಸ್. ಕರಾವಳಿ ಕರ್ನಾಟಕದ ಹೊನ್ನಾವರ, ಕಾರವಾರ, ಮಂಗಳೂರು ವಿಮಾನ ನಿಲ್ದಾಣ, ಶಕ್ತಿನಗರದ ಭಾಗದಲ್ಲಿ ಕನಿಷ್ಠ ತಾಪಮಾನವು 18.4 ಡಿಗ್ರಿ ಸೆಲ್ಸಿಯಸ್ನಿಂದ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿಯು ಉಲ್ಲೇಖಿಸಿದೆ.
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/karnataka-weather-sunshine-to-continue-temperatures-to-touch-34-c-in-next-3-days-news-in-kannada-443879.html. xn--babytilbehr-pgb.com does not claim ownership of this content. All rights remain with the original publisher.
