Karnataka Weather: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಬಿಸಿಯಾದ ವಾತಾವರಣ ಸಾಧ್ಯತೆ | Karnataka Weather Update Hot and Humid Conditions Likely in Coastal Districts for Two More Days

Karnataka

oi-Manohara M

ಬೆಂಗಳೂರು: ರಾಜ್ಯದಾದ್ಯಂತ ಒಣಹವಾಮಾನ ಮುಂದುವರಿದಿದ್ದು, ದಕ್ಷಿಣ ಒಳನಾಡು ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಮತ್ತು ಉತ್ತರ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ತಾಪಮಾನದಲ್ಲಿ ತುಸು ಇಳಿಕೆ ಕಂಡುಬಂದಿದೆ. ದಾವಣಗೆರೆ ಜಿಲ್ಲೆಯಲ್ಲಿ 11 ಡಿಗ್ರಿ ಸೆಲ್ಸಿಯಸ್ ಅತಿ ಕಡಿಮೆ ಕನಿಷ್ಠ ತಾಪಮಾನ ದಾಖಲಾಗಿದೆ.

ಕರಾವಳಿ ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳು ಬಿಸಿ ಹಾಗೂ ತೇವಾಂಶದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ರಾಜ್ಯದಾದ್ಯಂತ ಮುಂದಿನ ಐದು ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯತೆ ಕಡಿಮೆ. ಬೆಂಗಳೂರು ಭಾಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಆಕಾಶವು ಮುಖ್ಯವಾಗಿ ನಿರ್ಮಲವಾಗಿರಲಿದೆ. ಕೆಲವು ಪ್ರದೇಶಗಳಲ್ಲಿ ಮುಂಜಾನೆ ಹೊತ್ತಿನಲ್ಲಿ ಮಂಜು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ ಸುಮಾರು 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ ಸುಮಾರು 14 ಡಿಗ್ರಿ ಸೆಲ್ಸಿಯಸ್ ಇರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Weather

ಕನಿಷ್ಠ ತಾಪಮಾನ ಕಡಿಮೆ

ಹವಾಮಾನ ಇಲಾಖೆಯ ಪ್ರಕಾರ, ದಕ್ಷಿಣ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 5 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗಿದೆ. ಒಳನಾಡು ಕರ್ನಾಟಕದ ಅನೇಕ ಪ್ರದೇಶಗಳಲ್ಲಿ 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್‌ ಮಟ್ಟಿಗೆ ಕಡಿಮೆ ದಾಖಲಾಗಿದೆ. ಉಳಿದ ಕೆಲವು ಪ್ರದೇಶಗಳಲ್ಲಿ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇಳಿಕೆಯಾಗಿದ್ದು, ಬೇರೆಕಡೆ ಸಾಮಾನ್ಯ ಮಟ್ಟದಲ್ಲೇ ಇದೆ.

ಜಿಲ್ಲಾವಾರು ತಾಪಮಾನ ವಿವರ

ಉತ್ತರ ಒಳನಾಡು ಕರ್ನಾಟಕದ ಬೀದರ್, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ಹಾವೇರಿ,ರಾಯಚೂರು ಜಿಲ್ಲೆಗಳು. ದಕ್ಷಿಣ ಒಳನಾಡು ಕರ್ನಾಟಕದ ಹಾಸನ, ದಾವಣಗೆರೆ, ಮಂಡ್ಯ, ಶಿವಮೊಗ್ಗ, ಬೆಂಗಳೂರು, ಚಿತ್ರದುರ್ಗ, ಮೈಸೂರು ಮತ್ತು ಬೆಂಗಳೂರು ನಗರಗಳಲ್ಲಿ ಕನಿಷ್ಠ ತಾಪಮಾನವು 11 ಡಿಗ್ರಿ ಸೆಲ್ಸಿಯಸ್‌ನಿಂದ 15 ಡಿಗ್ರಿ ಸೆಲ್ಸಿಯಸ್‌ ನಡುವೆ ವರದಿಯಾಗಿದೆ. ಬೆಳಗಾವಿ ವಿಮಾನ ನಿಲ್ದಾಣ, ಕೊಪ್ಪಳ, ಕಲಬುರಗಿ, ಬಳ್ಳಾರಿ, ಕರಾವಳಿ ಕರ್ನಾಟಕದ ಹೊನ್ನಾವರ, ಕಾರವಾರ, ಮಂಗಳೂರು ವಿಮಾನ ನಿಲ್ದಾಣಗಳಲ್ಲಿಯೂ ಕಡಿಮೆ ತಾಪಮಾನ ದಾಖಲಾಗಿದೆ.

ಕಳೆದ 24 ಗಂಟೆಗಳಲ್ಲಿ ರಾಯಚೂರು, ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಮಂಡ್ಯ ಮತ್ತು ಚಿತ್ರದುರ್ಗ ಪ್ರದೇಶಗಳಲ್ಲಿ ತಾಪಮಾನದಲ್ಲಿ ಇಳಿಕೆ ಕಂಡುಬಂದಿದೆ. ಕರಾವಳಿ ಪ್ರದೇಶದ ಹೊನ್ನಾವರದಲ್ಲಿ ಸ್ವಲ್ಪ ಏರಿಕೆ ದಾಖಲಾಗಿದೆ. ಉಳಿದ ಕಡೆಗಳಲ್ಲಿ ಯಾವುದೇ ದೊಡ್ಡ ಬದಲಾವಣೆ ಕಂಡುಬಂದಿಲ್ಲ.

ಹಿಂದೂ ಮಹಾಸಾಗರ ಹಾಗೂ ದಕ್ಷಿಣ-ಪೂರ್ವ ಬಂಗಾಳ ಕೊಲ್ಲಿಯ ಭಾಗದಲ್ಲಿ ಮೇಲ್ಮಟ್ಟದ ಚಂಡಮಾರುತದ ಪರಿಚಲನೆ ಇದ್ದು, ಇದು ಸಮುದ್ರಮಟ್ಟದಿಂದ ಸುಮಾರು 5.8 ಕಿಮೀ ಎತ್ತರದವರೆಗೆ ವಿಸ್ತರಿಸಿದೆ. ಇದರ ಪರಿಣಾಮವಾಗಿ ಫೆಬ್ರವರಿ 15ರ ಸುಮಾರಿಗೆ ಅದೇ ಪ್ರದೇಶದಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳುವ ಸಾಧ್ಯತೆ ಇದೆ. ಇದೇ ವೇಳೆ, ದಕ್ಷಿಣ ತಮಿಳುನಾಡು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ 1.5 ಕಿಮೀ ಎತ್ತರದಲ್ಲಿ ಮತ್ತೊಂದು ವಾಯುಚಂಡಮಾರುತ ಅಸ್ತಿತ್ವದಲ್ಲಿದೆ ಎಂದು ಮಾಹಿತಿ ನೀಡಿದೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/karnataka-weather-update-hot-and-humid-conditions-likely-in-coastal-districts-for-two-more-days-443539.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo