Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ | Kalaburagi Records highest temperature as Heat Rises Across Karnataka Dry Weather Likely to Continue

Karnataka

oi-Manohara M

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ತಾಪ ಏರುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬಿಸಿಲ ನಾಡು ಕಲಬುರಗಿಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಅಂದರೆ 39.4 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗುವ ಮೂಲಕ ಜನರಲ್ಲಿ ಆತಂಕ ಮೂಡಿಸಿದೆ. ಬೀದರ್‌ನಲ್ಲಿ ರಾಜ್ಯದ ಅತಿ ಕಡಿಮೆ ಕನಿಷ್ಠ ತಾಪಮಾನ 16.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಇಲ್ಲಿನ ಹಲವು ಜಿಲ್ಲೆಗಳಲ್ಲಿ ತಾಪಮಾನವು 35.9-39.4 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗಿದ್ದು, ಕೆಲವು ಕಡೆ ಸಾಮಾನ್ಯಕ್ಕಿಂತ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಳ ಕಂಡುಬಂದಿದೆ. ದಕ್ಷಿಣ ಭಾಗದ ಜಿಲ್ಲೆಗಳಲ್ಲಿ 32.2-35.5 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನವಿದ್ದು, ಕೆಲವು ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ತಾಪಮಾನವೂ ದಾಖಲಾಗಿದೆ. ಕರಾವಳಿ ತೀರದಲ್ಲಿ ತಾಪಮಾನವು ಸ್ಥಿರವಾಗಿದ್ದು, 32.9-34.0 ಡಿಗ್ರಿ ಸೆಲ್ಸಿಯಸ್‌ ನಡುವೆ ಇದೆ.

Kalaburagi

ಮುಂದಿನ ಕೆಲವು ದಿನಗಳ ಕಾಲ ಉತ್ತರ ಒಳನಾಡಿನಲ್ಲಿ ಇದೇ ರೀತಿಯ ಒಣ ಹವೆ ಮುಂದುವರಿಯುವ ಸಾಧ್ಯತೆಯಿದ್ದು, ಸಾರ್ವಜನಿಕರು ಮಧ್ಯಾಹ್ನದ ಸಮಯದಲ್ಲಿ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ರಾಜ್ಯದಾದ್ಯಂತ ಒಣ ಹವೆ ಮುಂದುವರಿದಿದ್ದು, ಯಾವುದೇ ಮಳೆ ದಾಖಲಾಗಿಲ್ಲ. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಗಳು ಕಂಡುಬರುವುದಿಲ್ಲ ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಆಕಾಶವು ಶುಭ್ರವಾಗಿದ್ದು, ಗರಿಷ್ಠ ತಾಪಮಾನ ಸುಮಾರು 33 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಬೆಳಗಾವಿ ವಿಮಾನ ನಿಲ್ದಾಣ, ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಈ ಮಟ್ಟ ಗರಿಷ್ಠ ಮಟ್ಟವನ್ನು ತಲುಪಿದೆ. ದಕ್ಷಿಣ ಒಳನಾಡು ಕರ್ನಾಟಕದ ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಚಿಂತಾಮಣಿ, ಮಂಡ್ಯ, ಮೈಸೂರು ಹಾಗೂ ಶಿವಮೊಗ್ಗ ಭಾಗಗಳಲ್ಲಿ 32.2-35.5 ಡಿಗ್ರಿ ಗರಿಷ್ಠ ತಾಪಮಾನವಿರುತ್ತದೆ.

ಗರಿಷ್ಠ ತಾಪಮಾನ

ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚು ದಾಖಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಹೆಚ್‌ಎಎಲ್‌ ವಿಮಾನ ನಿಲ್ದಾಣ ಪ್ರದೇಶದಲ್ಲಿಯೂ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚು ಕಂಡುಬಂದಿದೆ. ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯ ಮಟ್ಟದಲ್ಲಿದೆ.

ಕಳೆದ 24 ಗಂಟೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಮಟ್ಟದ ಬದಲಾವಣೆ ಕಂಡುಬಂದಿಲ್ಲ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಗಳಲ್ಲಿ 14.0-19.5 ಡಿಗ್ರಿ ಸೆಲ್ಸಿಯಸ್‌ ನಡುವೆ ದಾಖಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಚಿಂತಾಮಣಿ ಭಾಗಗಳಲ್ಲಿ ಇದೇ ಮಟ್ಟದ ಕನಿಷ್ಠ ತಾಪಮಾನ ದಾಖಲಾಗಿದೆ. ವಿಜಯಪುರ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ 19.6-23.5 ಡಿಗ್ರಿ ಸೆಲ್ಸಿಯಸ್‌ ನಡುವೆ ದಾಖಲಾಗಿದೆ. ಕರಾವಳಿ ಭಾಗದ ಕಾರವಾರ, ಹೊನ್ನಾವರ, ಮಂಗಳೂರು ಪ್ರದೇಶಗಳಲ್ಲಿ 22.8-25.6 ಸೆಲ್ಸಿಯಸ್‌ ನಡುವೆ ಕನಿಷ್ಠ ತಾಪಮಾನ ದಾಖಲಾಗಿದೆ.

ಉತ್ತರ ಒಳನಾಡಿನ ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚು ದಾಖಲಾಗಿದೆ. ಕಾರವಾರ ಮತ್ತು ಮಂಗಳೂರು ಭಾಗಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆ ಕಂಡುಬಂದಿದೆ. ಚಿತ್ರದುರ್ಗ ಮತ್ತು ಹಾಸನ ಭಾಗಗಳಲ್ಲಿ ಕನಿಷ್ಠ ತಾಪಮಾನ ಕಡಿಮೆಯಾಗಿದೆ. ಬೀದರ್ ಜಿಲ್ಲೆಯಲ್ಲಿ ಗಣನೀಯವಾಗಿ ಕಡಿಮೆ ತಾಪಮಾನ ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಚಿಂತಾಮಣಿ ಭಾಗದಲ್ಲಿ ಕನಿಷ್ಠ ತಾಪಮಾನದಲ್ಲಿ ಸ್ವಲ್ಪ ಏರಿಕೆ ಕಂಡುಬಂದಿದೆ. ಉಳಿದ ಪ್ರದೇಶಗಳಲ್ಲಿ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಕಂಡುಬಂದಿಲ್ಲ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/kalaburagi-records-highest-temperature-as-heat-rises-across-karnataka-dry-weather-likely-to-continue-446537.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo