Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ | Bengaluru Rains Thunderstorms Likely in South Interior Karnataka Districts Today Weather forecast

Karnataka

oi-Manohara M

ಬೆಂಗಳೂರು: ರಾಜ್ಯದ ಜನತೆಗೆ ಬಿಸಿಲಿನ ಬೇಗೆಯ ನಡುವೆ ವರುಣ ತಂಪು ಎರೆದಿದ್ದಾನೆ. ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನ ಹಲವು ಪ್ರದೇಶಗಳಲ್ಲಿ ಮಳೆಯಾಗಿದ್ದು, ಒಣ ಹವೆಯಿಂದ ಕಂಗಾಲಾಗಿದ್ದ ಜನರಿಗೆ ಕೊಂಚ ಸಮಾಧಾನ ತಂದಿದೆ. ವಿಶೇಷವಾಗಿ ಬೆಂಗಳೂರು ನಗರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾದ ವರದಿಯಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿಯ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಕಡೆ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಒಳನಾಡಿನಲ್ಲಿ ಮಳೆಯ ಸಿಂಚನವಾಗಿದ್ದರೆ, ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮಾತ್ರ ಒಣ ಹವಾಮಾನವೇ ಮುಂದುವರಿದಿದೆ. ಅಲ್ಲಿ ಯಾವುದೇ ಮಳೆಯಾದ ವರದಿಯಾಗಿಲ್ಲ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಿರುವುದರಿಂದ ತಾಪಮಾನದಲ್ಲಿ ಕೊಂಚ ಇಳಿಕೆಯಾಗಿದ್ದು, ವಾತಾವರಣ ತಂಪಾಗಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ಒಳನಾಡಿನ ಒಂದೆರಡು ಕಡೆಗಳಲ್ಲಿ ಇದೇ ರೀತಿಯ ತುಂತುರು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Bengaluru Rains

ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ?

ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಸಮಯದಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಂಭವವಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇಲ್ಲಿಯೂ ಸಹ ಬಿರುಗಾಳಿಯ ಪ್ರಭಾವವಿರಲಿದೆ. ಇನ್ನು ಕರಾವಳಿ ಭಾಗದ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.

ಮಳೆಗೆ ಕಾರಣವೇನು?

ದಕ್ಷಿಣ ತಮಿಳುನಾಡಿನವರೆಗೆ ಹರಡಿರುವ ಈ ವ್ಯವಸ್ಥೆಯು ಮರಾಠವಾಡ ಮತ್ತು ಕರ್ನಾಟಕದ ಒಳನಾಡಿನ ಮೂಲಕ ಹಾದುಹೋಗುತ್ತಿದೆ. ಇದು ಸಮುದ್ರ ಮಟ್ಟದಿಂದ ಸುಮಾರು 0.9 ಕಿ.ಮೀ ಎತ್ತರದಲ್ಲಿದ್ದು, ಮಳೆಗೆ ಪೂರಕವಾದ ವಾತಾವರಣ ನಿರ್ಮಿಸಿದೆ. ಪೂರ್ವ ಮಾರುತಗಳ ಪ್ರಭಾವ ಕೂಡ ಇದ್ದು, ತಮಿಳುನಾಡು ಮತ್ತು ದಕ್ಷಿಣ ಒಳನಾಡಿನ ಮೂಲಕ ಹಾದುಹೋಗುವ ಈ ವ್ಯವಸ್ಥೆಯು ಉತ್ತರ ಒಳನಾಡಿನವರೆಗೂ ಹರಡಿದೆ. ಇದು 1.5 ಕಿ.ಮೀ ಎತ್ತರದಲ್ಲಿ ಸಕ್ರಿಯವಾಗಿದ್ದು, ರಾಜ್ಯದ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಮಳೆಗೆ ಕಾರಣವಾಗಲಿದೆ.

ಕಳೆದ ಕೆಲವು ದಿನಗಳಿಂದ ರಾಯಲಸೀಮಾ ಮತ್ತು ದಕ್ಷಿಣ ಒಳನಾಡಿನ ಮೇಲಿದ್ದ ಚಂಡಮಾರುತದ ಮಾದರಿಯ ಸುಳಿಗಳು ಸದ್ಯ ದುರ್ಬಲಗೊಂಡಿವೆ. ಆದಾಗ್ಯೂ, ಮೇಲೆ ತಿಳಿಸಿದ ಎರಡು ಗಾಳಿಯ ಒತ್ತಡದ ಸುಳಿಗಳು ಸಕ್ರಿಯವಾಗಿರುವುದರಿಂದ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/bengaluru-rains-thunderstorms-likely-in-south-interior-karnataka-districts-today-weather-forecast-448915.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo