Karnataka Weather Feb 15: ಕರ್ನಾಟಕದ ವಿವಿಧ ಭಾಗದಲ್ಲಿ ಬಿಸಿಲು, ಪಶ್ಚಿಮ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಪರಿಚಲನೆ | Karnataka Weather Feb 15: Sunny Across State; Rain Likely as Bay of Bengal System Builds, Says IMD

Karnataka

oi-Hitesh Y

Karnataka Weather Feb 15: ಕರ್ನಾಟಕದ ವಿವಿಧ ಭಾಗದಲ್ಲಿ ಬಿಸಿಲು ಹೆಚ್ಚಾಗಿದ್ದು ಮಳೆ ಬರುವ ಸಾಧ್ಯತೆಯೂ ಇದೆ. ಮುಂದಿನ ಮೂರು ದಿನಗಳಲ್ಲಿ ಮಳೆ ಬರುವ ಸಾಧ್ಯತೆಯೂ ಇದೆ. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಚಳಿ ಪ್ರಮಾಣ ತೀವ್ರ ಇಳಿಕೆಯಾಗಿದ್ದು, ಬಿಸಿಲು ಹೆಚ್ಚಳವಾಗಿದೆ. ಮುಂದಿನ ಐದು ದಿನಗಳಲ್ಲಿ ಕರ್ನಾಟಕದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿಯು ಉಲ್ಲೇಖಿಸಿದೆ. ಇಂದಿನ ಹವಾಮಾನದ ಸಂಪೂರ್ಣ ವಿವರ ಇಲ್ಲಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಚಳಿ ಇಳಿಕೆಯಾಗಿದ್ದು, ಬಿಸಿಲು ಹಾಗೂ ತೇವಾಂಶ ಹೆಚ್ಚಳವಾಗಿದೆ. ಪೂರ್ವ ಹಿಂದೂ ಮಹಾಸಾಗರ ಮತ್ತು ಪಕ್ಕದ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 5.5 ಕಿ.ಮೀ ವರೆಗೆ ವಿಸ್ತರಿಸಿರುವ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆ ಇದೆ. ಅದೇ ಪ್ರದೇಶದಲ್ಲಿ ಮುಂದುವರಿದಿದೆ. ಇದರ ಪ್ರಭಾವದಡಿಯಲ್ಲಿ, ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಬಂಗಾಳಕೊಲ್ಲಿಯ ಮಧ್ಯ ಭಾಗಗಳು ಮತ್ತು ಪಕ್ಕದ ಸಮಭಾಜಕ ಹಿಂದೂ ಮಹಾಸಾಗರದ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Karnataka Weather Feb 15 Sunny Across State Rain Likely as Bay of Bengal System Builds Says IMD

ರಾಜ್ಯದಾದ್ಯಂತ ಕೆಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3.0 ಡಿಗ್ರಿ ಸೆಲ್ಸಿಯಸ್ ಮತ್ತು ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆ 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್ ಇದೆ. ಇನ್ನುಳಿದ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ ಮುಂದುವರಿದಿದೆ. ದಕ್ಷಿಣ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ದಟ್ಟ ಮಂಜು ಕವಿದ ವಾತಾವರಣ ನಿರ್ಮಾಣವಾಗಿತ್ತು.

3ದಿನಗಳ ಹವಾಮಾನ ಮುನ್ಸೂಚನೆ

ಇನ್ನು ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಹವಾಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಮುಂದಿನ ಮೂರು ದಿನಗಳ ತಾಪಮಾನ ಎಚ್ಚರಿಕೆಯಲ್ಲಿ, ಕರಾವಳಿ ಕರ್ನಾಟಕದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ತೇವಾಂಶದ ವಾತಾವರಣ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಅಲ್ಲದೇ ಮುಂದಿನ 5 ದಿನಗಳಲ್ಲಿ ಕರ್ನಾಟಕದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳು ಇಲ್ಲ.

ಬೆಂಗಳೂರಿನಲ್ಲಿ ಹೇಗಿದೆ ವಾತಾವರಣ

ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಪ್ರಮುಖವಾಗಿ ಶುಭ್ರ ಆಕಾಶ, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆ ಹೆಚ್ಚು. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಹಾಗೂ 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿಯು ಉಲ್ಲೇಖಿಸಿದೆ.

ನೈಜ ಸಮಯದ ಮಾಹಿತಿಯ ಆಧಾರದ ಮೇಲೆ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ವಿಜಯಪುರ, ಬೀದರ್, ಹಾವೇರಿ ಮತ್ತು ಗದಗ ಮತ್ತು ದಕ್ಷಿಣ ಒಳನಾಡಿನ ಚಿಂತಾಮಣಿ, ದಾವಣಗೆರೆ, ಹಾಸನ ಮತ್ತು ಶಿವಮೊಗ್ಗದಲ್ಲಿ ಕನಿಷ್ಠ ತಾಪಮಾನವು 11.8 ಡಿಗ್ರಿ ಸೆಲ್ಸಿಯಸ್‌ನಿಂದ 15 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿದೆ.

ಉತ್ತರ ಆಂತರಿಕ ಕರ್ನಾಟಕದ ರಾಯಚೂರು, ಬೆಳಗಾವಿ ವಿಮಾನ ನಿಲ್ದಾಣ, ಕೊಪ್ಪಳ ಮತ್ತು ಕಲಬುರ್ಗಿ ಮತ್ತು ದಕ್ಷಿಣ ಒಳನಾಡಿನ ಮಂಡ್ಯ ಎಡ್ಬ್ಲ್ಯೂಎಸ್, ಮೈಸೂರು, ಬೆಂಗಳೂರು ಕೆಐಎಎಲ್, ಬೆಂಗಳೂರು ಎಚ್‌ಎಎಲ್, ಚಿತ್ರದುರ್ಗ, ಬೆಂಗಳೂರು ನಗರ ಮತ್ತು ಕರಾವಳಿ ಕರ್ನಾಟಕದ ಹೊನ್ನಾವರ, ಕಾರವಾರ, ಮಂಗಳೂರು ವಿಮಾನ ನಿಲ್ದಾಣ ಹಾಗೂ ಶಕ್ತಿ ನಗರದ ಭಾಗದಲ್ಲಿ 17.9 ಡಿಗ್ರಿ ಸೆಲ್ಸಿಯಸ್‌ನಿಂದ 21.6 ಡಿಗ್ರಿ ಸೆಲ್ಸಿಯಸ್ ಮುಂದುವರಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ. ರಾಜ್ಯದ ಸಮತಟ್ಟಾದ ಪ್ರದೇಶ ದಾವಣಗೆರೆಯಲ್ಲಿ ಕನಿಷ್ಠ ತಾಪಮಾನವು 12 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/karnataka-weather-feb-15-sunny-across-state-rain-likely-as-bay-of-bengal-system-builds-says-imd-443779.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo