
Karnataka
oi-Hitesh Y
Karnataka Weather Mar 12: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಿಸಿಲು ಹೆಚ್ಚಾಗುತ್ತಿದೆ. ಮುಂದಿನ ವಾರದಿಂದ ರಾಜ್ಯದಲ್ಲಿ ಬಿಸಿಲಿನ ಪ್ರಮಾಣ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಆದರೆ, ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯ ನೈಋತ್ಯ ಮತ್ತು ಶ್ರೀಲಂಕಾದ ಉತ್ತರ ಭಾಗದಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಮತ್ತು 3.1 ಕಿ.ಮೀ. ಎತ್ತರದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತದ ಪರಿಚಲನೆ ಮುಂದುವರಿದಿದೆ. ದಕ್ಷಿಣ ಜಾರ್ಖಂಡ್ ಮತ್ತು ಛತ್ತೀಸ್‌ಗಢದ ಪಕ್ಕದಲ್ಲಿರುವ ಉತ್ತರ ಭಾಗದಿಂದ ಕರ್ನಾಟಕದ ದಕ್ಷಿಣ ಒಳನಾಡಿನವರೆಗಿನ ಚಂಡಮಾರುತದ ಪರಿಚಲನೆ ಕಡಿಮೆಯಾಗಿದೆ. ಇನ್ನು ಲಕ್ಷದ್ವೀಪದ ಪೂರ್ವದಲ್ಲಿ 75°E ಉದ್ದಕ್ಕೂ ಅಕ್ಷಾಂಶ 6°N ನ ಉತ್ತರಕ್ಕೆ ತಗ್ಗು ಪ್ರದೇಶವು ಪಶ್ಚಿಮಕ್ಕೆ ಚಲಿಸಿದೆ ಹೀಗಾಗಿ, ಕರ್ನಾಟಕದಾದ್ಯಂತ 7 ದಿನಗಳ ಅವಧಿಗೆ ಬಹುತೇಕ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಆದರೆ ಇದೇ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಮಳೆ
ಇನ್ನು ಕರ್ನಾಟಕದ ವಿವಿಧ ಭಾಗದಲ್ಲಿ ಈ ವಾರದಿಂದ ಮಳೆ ಪ್ರಾರಂಭವಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಮಾರ್ಚ್ 15ರಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಉಡುಪಿಯಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನು ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಇನ್ನು ಕಲಬುರಗಿಯಲ್ಲಿ ಗರಿಷ್ಠ ತಾಪಮಾನವು 37.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶ ಶಿವಮೊಗ್ಗದಲ್ಲಿ ಕನಿಷ್ಠ ತಾಪಮಾನವು 15.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕರಾವಳಿಯ ಹಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಆದಾಗ್ಯೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್ ಇದೆ. ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್ ಗಮನಾರ್ಹವಾಗಿ ಕಡಿಮೆಯಾಗಿದೆ. ಉಳಿದ ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯವಾಗಿತ್ತು.
ಬೆಂಗಳೂರು – ಕರ್ನಾಟಕದಲ್ಲಿ ತಾಪಮಾನ ಹೇಗಿದೆ
ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳ ಅವಧಿಗೆ ಒಣಹವೆ ಇರಲಿದೆ. ಮುಂದಿನ ಎರಡು ದಿನಗಳ ವರೆಗೆ ಕರಾವಳಿಯಲ್ಲಿ ಬಿಸಿ ಹಾಗೂ ತೇವಾಂಶದ ವಾತಾವರಣ ಇರುವ ಸಾಧ್ಯತೆ ಇದೆ. ಮುಂದಿನ ಐದು ದಿನಗಳಲ್ಲಿ ಅಲ್ಲಲ್ಲಿ ಬಿಸಿಲು ಹೆಚ್ಚಾಗಲಿದೆಯಾದರೂ, ರಾಜ್ಯದಲ್ಲಿ ಮಳೆ ಆಗುವ ಮುನ್ಸೂಚನೆ ಇದೆ.
ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ
ಇನ್ನು ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಬಹುತೇಕ ಶುಭ್ರ ಆಕಾಶ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34 ಡಿಗ್ರಿ ಸೆಲ್ಸಿಯಸ್ ಹಾಗೂ 19 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
-

Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ
-

Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ
-

ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ
-

New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು
-

Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ
-

LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ
-

Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ – ಡೀಸೆಲ್ ಬೆಲೆ 20 – 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ
-

Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ
-

Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ
-

ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು
-

ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ
-

“ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ”: ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/karnataka-weather-mar-12-rain-likely-karnataka-from-march-15-amid-rising-heat-here-s-today-s-weath-446783.html. xn--babytilbehr-pgb.com does not claim ownership of this content. All rights remain with the original publisher.
