Karnataka Weather Updates: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಮುಂದಿನ 5 ದಿನ ಒಣಹವೆ ಮುಂದುವರಿಕೆ, ಚಳಿ ಯಥಾಸ್ಥಿತಿ | Karnataka Weather Updates: Dry Weather Karnataka Including Bengaluru for Next 5 Days Temperatures Stable

Karnataka

-Hitesh Y

Karnataka Weather Updates: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ಉಳಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಚಳಿ ಇದೆ. ಮುಂದಿನ ಐದು ದಿನಗಳ ವರೆಗೆ ಕರ್ನಾಟಕದಲ್ಲಿ ಹವಾಮಾನ ಹೇಗಿರಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳಿಂದ ಐದು ದಿನಗಳ ವರೆಗೆ ಕರ್ನಾಟಕದಲ್ಲಿ ಬಹುತೇಕ ಒಣಹವೆ ಮುಂದುವರಿಯಲಿದೆ. ಮುಂದಿನ ಐದು ದಿನಗಳಲ್ಲಿ ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳು ಇಲ್ಲ.

Karnataka Weather Updates Dry Weather Karnataka Including Bengaluru for Next 5 Days Temperatures Stable

ಪೂರ್ವ ಹಿಂದೂ ಮಹಾಸಾಗರದ ಮತ್ತು ಪಕ್ಕದ ದಕ್ಷಿಣ ಬಂಗಾಳ ಕೊಲ್ಲಿಯ ಮಧ್ಯಭಾಗದಲ್ಲಿರುವ ಕಡಿದ ಒತ್ತಡದ ಪ್ರದೇಶವು ಪಶ್ಚಿಮ ವಾಯುವ್ಯ ದಿಕ್ಕಿಗೆ ನಿಧಾನವಾಗಿ ಚಲಿಸಿ ಸಮಭಾಜಕ ಹಿಂದೂ ಮಹಾಸಾಗರ ಮತ್ತು ಪಕ್ಕದ ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ನೆಲೆಸಿದೆ. ಸಂಬಂಧಿತ ಮೇಲ್ಭಾಗದ ವಾಯು ಚಂಡಮಾರುತವು ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ವರೆಗೆ ವಿಸ್ತರಿಸಿದೆ.

ಇದು ಫೆಬ್ರವರಿ 18, 2005ರ ಸುಮಾರಿಗೆ ಪಶ್ಚಿಮ ವಾಯುವ್ಯ ದಿಕ್ಕಿಗೆ ಚಲಿಸುವ ಮತ್ತು ನೈಋತ್ಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಸಮಭಾಜಕ ಹಿಂದೂ ಮಹಾಸಾಗರದ ಮೇಲೆ ಹೆಚ್ಚು ಸಾಗುವ ಸಾಧ್ಯತೆ ಇದೆ. ದಕ್ಷಿಣ ಕೇರಳ ಕರಾವಳಿಯಿಂದ ಆಗ್ನೇಯ ಅರೇಬಿಯನ್ ಸಮುದ್ರದ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆಯಿದ್ದು, ಸರಾಸರಿ ಸಮುದ್ರಮಟ್ಟದಿಂದ 0.9 ಕಿ.ಮೀ ವರೆಗೆ ವಿಸ್ತರಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ತಿಳಿಸಿದೆ.

Karnataka Weather Updates: ಮೂರು ದಿನ ಯಥಾಸ್ಥಿತಿ

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಇರಲಿದೆ. ಉಳಿದಂತೆ ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

ಬೆಂಗಳೂರಿನಲ್ಲಿ ವಾತಾವರಣ ಹೇಗಿದೆ

ಇನ್ನು ಬೆಂಗಳೂರಿನಲ್ಲಿ ವಾತಾವರಣವು ಸಾಮಾನ್ಯವಾಗಿದೆ. ಮುಂದಿನ 24 ಗಂಟೆ ಅವಧಿಯಲ್ಲಿ ಬೆಂಗಳೂರಿನಲ್ಲಿ ಪ್ರಮುಖವಾಗಿ ಶುಭ್ರ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆ ಹೆಚ್ಚು. ಇನ್ನು ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್‌ನಿಂದ 17 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇನ್ನು ಮುಂದಿನ 48 ಗಂಟೆ ಅವಧಿಯಲ್ಲೂ ಇದೇ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ತಿಳಿಸಿದೆ.

ರಾಜ್ಯದ ಸಮತಟ್ಟಾದ ಪ್ರದೇಶ ದಾವಣಗೆರೆಯಲ್ಲಿ ಕನಿಷ್ಠ ತಾಪಮಾನವು 12.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ಉತ್ತರ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗಿದೆ.

ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆ 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಅತಿ ಗಮನಾರ್ಹವಾಗಿ ಕಡಿಮೆ 5.1 ಡಿಗ್ರಿ ಸೆಲ್ಸಿಯಸ್ ಮತ್ತು ಅದಕ್ಕಿಂತ ಕಡಿಮೆ ದಾಖಲಾಗಿದೆ. ದಕ್ಷಿಣ ಒಳನಾಡು ಹಾಗೂ ವಿವಿಧ ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ಈ ಭಾಗಗಳಲ್ಲಿ ಕನಿಷ್ಠ ತಾಪಮಾನವು 5.1 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತಲೂ ಕಡಿಮೆಯಾಗಿದೆ. ಕರ್ನಾಟಕದ ಇನ್ನುಳಿದ ಭಾಗದಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯವಾಗಿತ್ತು ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/karnataka-weather-updates-dry-weather-karnataka-including-bengaluru-for-next-5-days-temperatures-s-011-444143.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo