
Karnataka
-Hitesh Y
Karnataka Weather Updates: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ಉಳಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಚಳಿ ಇದೆ. ಮುಂದಿನ ಐದು ದಿನಗಳ ವರೆಗೆ ಕರ್ನಾಟಕದಲ್ಲಿ ಹವಾಮಾನ ಹೇಗಿರಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳಿಂದ ಐದು ದಿನಗಳ ವರೆಗೆ ಕರ್ನಾಟಕದಲ್ಲಿ ಬಹುತೇಕ ಒಣಹವೆ ಮುಂದುವರಿಯಲಿದೆ. ಮುಂದಿನ ಐದು ದಿನಗಳಲ್ಲಿ ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳು ಇಲ್ಲ.

ಪೂರ್ವ ಹಿಂದೂ ಮಹಾಸಾಗರದ ಮತ್ತು ಪಕ್ಕದ ದಕ್ಷಿಣ ಬಂಗಾಳ ಕೊಲ್ಲಿಯ ಮಧ್ಯಭಾಗದಲ್ಲಿರುವ ಕಡಿದ ಒತ್ತಡದ ಪ್ರದೇಶವು ಪಶ್ಚಿಮ ವಾಯುವ್ಯ ದಿಕ್ಕಿಗೆ ನಿಧಾನವಾಗಿ ಚಲಿಸಿ ಸಮಭಾಜಕ ಹಿಂದೂ ಮಹಾಸಾಗರ ಮತ್ತು ಪಕ್ಕದ ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ನೆಲೆಸಿದೆ. ಸಂಬಂಧಿತ ಮೇಲ್ಭಾಗದ ವಾಯು ಚಂಡಮಾರುತವು ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ವರೆಗೆ ವಿಸ್ತರಿಸಿದೆ.
ಇದು ಫೆಬ್ರವರಿ 18, 2005ರ ಸುಮಾರಿಗೆ ಪಶ್ಚಿಮ ವಾಯುವ್ಯ ದಿಕ್ಕಿಗೆ ಚಲಿಸುವ ಮತ್ತು ನೈಋತ್ಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಸಮಭಾಜಕ ಹಿಂದೂ ಮಹಾಸಾಗರದ ಮೇಲೆ ಹೆಚ್ಚು ಸಾಗುವ ಸಾಧ್ಯತೆ ಇದೆ. ದಕ್ಷಿಣ ಕೇರಳ ಕರಾವಳಿಯಿಂದ ಆಗ್ನೇಯ ಅರೇಬಿಯನ್ ಸಮುದ್ರದ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆಯಿದ್ದು, ಸರಾಸರಿ ಸಮುದ್ರಮಟ್ಟದಿಂದ 0.9 ಕಿ.ಮೀ ವರೆಗೆ ವಿಸ್ತರಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ತಿಳಿಸಿದೆ.
Karnataka Weather Updates: ಮೂರು ದಿನ ಯಥಾಸ್ಥಿತಿ
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಇರಲಿದೆ. ಉಳಿದಂತೆ ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಬೆಂಗಳೂರಿನಲ್ಲಿ ವಾತಾವರಣ ಹೇಗಿದೆ
ಇನ್ನು ಬೆಂಗಳೂರಿನಲ್ಲಿ ವಾತಾವರಣವು ಸಾಮಾನ್ಯವಾಗಿದೆ. ಮುಂದಿನ 24 ಗಂಟೆ ಅವಧಿಯಲ್ಲಿ ಬೆಂಗಳೂರಿನಲ್ಲಿ ಪ್ರಮುಖವಾಗಿ ಶುಭ್ರ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆ ಹೆಚ್ಚು. ಇನ್ನು ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ನಿಂದ 17 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇನ್ನು ಮುಂದಿನ 48 ಗಂಟೆ ಅವಧಿಯಲ್ಲೂ ಇದೇ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ತಿಳಿಸಿದೆ.
ರಾಜ್ಯದ ಸಮತಟ್ಟಾದ ಪ್ರದೇಶ ದಾವಣಗೆರೆಯಲ್ಲಿ ಕನಿಷ್ಠ ತಾಪಮಾನವು 12.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ಉತ್ತರ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ 1.6 ಡಿಗ್ರಿ ಸೆಲ್ಸಿಯಸ್ನಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗಿದೆ.
ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆ 3.1 ಡಿಗ್ರಿ ಸೆಲ್ಸಿಯಸ್ನಿಂದ 5 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಅತಿ ಗಮನಾರ್ಹವಾಗಿ ಕಡಿಮೆ 5.1 ಡಿಗ್ರಿ ಸೆಲ್ಸಿಯಸ್ ಮತ್ತು ಅದಕ್ಕಿಂತ ಕಡಿಮೆ ದಾಖಲಾಗಿದೆ. ದಕ್ಷಿಣ ಒಳನಾಡು ಹಾಗೂ ವಿವಿಧ ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ಈ ಭಾಗಗಳಲ್ಲಿ ಕನಿಷ್ಠ ತಾಪಮಾನವು 5.1 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತಲೂ ಕಡಿಮೆಯಾಗಿದೆ. ಕರ್ನಾಟಕದ ಇನ್ನುಳಿದ ಭಾಗದಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯವಾಗಿತ್ತು ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
-

Karnataka Weather: ಕರ್ನಾಟಕದಲ್ಲಿ ಮುಂದಿನ 3 ದಿನ ಹೇಗಿರಲಿದೆ ಹವಾಮಾನ, ಇಲ್ಲಿದೆ ಮಾಹಿತಿ
-

Karnataka Weather Feb 17: ಕರ್ನಾಟಕದಲ್ಲಿ ಬಿಸಿಲು ಅಲ್ಪ ಹೆಚ್ಚಳ; ಬೆಂಗಳೂರು ಸೇರಿ ವಿವಿಧ ಭಾಗದಲ್ಲಿ ಹೇಗಿದೆ ಹವಾಮಾನ
-

Gold Rate Feb 16: ಚಿನ್ನದ ಬೆಲೆ 13,100 ರೂ., ಬೆಳ್ಳಿ ಬೆಲೆ 7,000 ರೂ. ಭರ್ಜರಿ ಇಳಿಕೆ, ಇಂದಿನ ಚಿನ್ನ – ಬೆಳ್ಳಿ ಬೆಲೆ
-

Gold: ಚಿನ್ನ ಎಂದಿಗೂ ನಿದ್ರಿಸುವುದಿಲ್ಲ: ಚಿನ್ನದ ಬೆಲೆ 1905ರಿಂದ 2026ರ ವರೆಗೆ ಎಷ್ಟಾಗಿದೆ, 120 ವರ್ಷದ ವಿವರ ಇಲ್ಲಿದೆ
-

T20 2026: ಭಾರತದ ವಿಜಯಕ್ಕೆ ಪಾಕಿಸ್ತಾನದಲ್ಲೂ ಸಂಭ್ರಮಾಚರಣೆ, ವಿಡಿಯೋ ವೈರಲ್ Viral Video
-

Horoscope February 16: ಈ ರಾಶಿಯವರಿಗೆ ವೃತ್ತಿಯಲ್ಲಿ ಪ್ರಗತಿ, ಆರೋಗ್ಯದಲ್ಲಿ ಸುಧಾರಣೆ, ದಿನ ಭವಿಷ್ಯ ಇಲ್ಲಿದೆ
-

ಫೆಬ್ರವರಿ 17 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
-

Karnataka Weather: ಕರ್ನಾಟಕದಲ್ಲಿ ಮುಂದಿನ 3 ದಿನ ಹೇಗಿರಲಿದೆ ಹವಾಮಾನ, ಇಲ್ಲಿದೆ ಮಾಹಿತಿ
-

ಕರ್ನಾಟಕದ ಕರಾವಳಿಗೆ ಬರಲು ಐಟಿ – ಬಿಟಿ ಕಂಪನಿಗಳ ಹಿಂದೇಟು ಚರ್ಚೆ, ಸೋಷಿಯಲ್ ಮೀಡಿಯಾದಲ್ಲಿ ವಾಕ್ಸಮರ
-

Darshan Thoogudeepa Birthday: ನಟ ದರ್ಶನ್ ಹುಟ್ಟುಹಬ್ಬ: ವಿಶೇಷ ಪೋಸ್ಟ್ ಹಂಚಿಕೊಂಡ ಸೆಲೆಬ್ರಿಟಿಗಳು
-

Taapsee Pannu: ನರೇಂದ್ರ ಮೋದಿ ಇಷ್ಟದ ರಾಜಕಾರಣಿ; ಯಾಕೆಂದರೆ ಈ ದೇಶದಲ್ಲಿ ನಾನು ಇನ್ನೂ ಇರಬೇಕು: ನಟಿ ತಾಪ್ಸಿ ಪನ್ನು
-

ಕರ್ನಾಟಕದ ಐಪಿಎಸ್ ಸಿಂಗಂ ತಮಿಳುನಾಡಿಗೆ ಹೋಗಿ ಅತಂತ್ರವಾದ ಕಥೆಯಿದು: ಅಣ್ಣಾಮಲೈ ಬದುಕಿನ ತಿರುವು ಹಲವು
-

National Highway: ರಾಮನಗರ ಜಿಲ್ಲೆ ಮೇಲೆ ಹಾದುಹೋಗುವ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಹಾಗೂ ಎಕ್ಸ್ಪ್ರೆಸ್ ವೇ
-

ರಶ್ಮಿಕಾ-ವಿಜಯ್ ದೇವರಕೊಂಡ ಮದುವೆ ಆಹ್ವಾನ ಪತ್ರಿಕೆಯ ಫೋಟೋ ವೈರಲ್; ಮುಹೂರ್ತ, ಆರತಕ್ಷತೆ ದಿನಾಂಕ ರಿವೀಲ್
-

Kavya Gowda: ನಟಿ ಕಾವ್ಯಾ ಗೌಡಗೆ ಸಣ್ಣ ರಿಲೀಫ್, ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ನಿಂದ ಮಧ್ಯಂತರ ತಡೆ
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/karnataka-weather-updates-dry-weather-karnataka-including-bengaluru-for-next-5-days-temperatures-s-011-444143.html. xn--babytilbehr-pgb.com does not claim ownership of this content. All rights remain with the original publisher.
