
Karnataka
oi-Hitesh Y
Karwar Super Specialty Hospital: ಮುಂದಿನ ಆಯವ್ಯಯದಲ್ಲಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾರವಾರ ಲೋಕೋಪಯೋಗಿ ಇಲಾಖೆ ಆಯೋಜಿಸಲಾಗಿದ್ದ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸುವ ಉದ್ದೇಶದಿಂದ 2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ವೈದ್ಯಕೀಯ ಕಾಲೇಜನ್ನು ಪ್ರಾರಂಭಿಸಲಾಗಿದ್ದು, ಇಂದು 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸುಮಾರು 200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಮೊದಲು ಇಲ್ಲಿನ ಜನರು ಉನ್ನತ ಮಟ್ಟದ ಚಿಕಿತ್ಸೆಗಾಗಿ ಉಡುಪಿ, ಮಂಗಳೂರು, ಹುಬ್ಬಳ್ಳಿಗೆ ಹೋಗುತ್ತಿದ್ದರು. ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮುಂದಿನ ಆಯವ್ಯಯದಲ್ಲಿ ಮಂಜೂರು ಮಾಡಿಕೊಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.
ಪ್ರತಿ ಜಿಲ್ಲೆಯಲ್ಲಿಯೂ ಬಡವರಿಗಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಕ್ಯಾನ್ಸರ್ ಯೂನಿಟ್ ಒಂದನ್ನು ಕಾರವಾರದಲ್ಲಿ ಸ್ಥಾಪಿಸಲಾಗುವುದು. ಜಿಲ್ಲಾ ಕೇಂದ್ರಗಳಲ್ಲಿ ಎಲ್ಲಾ ವೈದ್ಯಕೀಯ ವ್ಯವಸ್ಥೆಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಕರ್ನಾಟಕದಲ್ಲಿ ಈಗಾಗಲೇ 22 ಸರ್ಕಾರಿ ಮೆಡಿಕಲ್ ಕಾಲೇಜುಗಳಿದ್ದು, ಮುಂದಿನ ದಿನಗಳಲ್ಲಿ ಕೋಲಾರ, ಪುತ್ತೂರು, ಬಿಜಾಪುರಗಳಲ್ಲಿ ಕಾಲೇಜು ನಿರ್ಮಿಸಲಾಗುವುದು ಎಂದರು.
ಗ್ಯಾರಂಟಿಗಳಿಂದ ಸರ್ಕಾರದ ಬಳಿ ಹಣವಿಲ್ಲ ಎಂದು ವಿರೋಧ ಪಕ್ಷದವರು ಟೀಕಿಸುತ್ತಿದ್ದಾರೆ. ಆದರೆ ನಮ್ಮ ಅಭಿವೃದ್ಧಿಯ ಪಯಣ ನಿರಂತರವಾಗಿ ಸಾಗಿದೆ. ಉತ್ತರ ಕನ್ನಡ ಜಿಲ್ಲೆಗೆ 2,954 ಕೋಟಿ ರೂ.ಗಳನ್ನು ಇಲ್ಲಿವರೆಗೆ ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ. ರಾಜ್ಯದಲ್ಲಿ ಸುಮಾರು 1,18,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಲಾಗಿದೆ. ಬಿಜೆಪಿಯವರು ನಮ್ಮ ಜನಪರ ಯೋಜನೆಗಳನ್ನು ಟೀಕಿಸುತ್ತಾ, ಅಭಿವೃದ್ಧಿಯಾಗುತ್ತಿಲ್ಲವೆಂದು ದೂರುತ್ತಿದ್ದಾರೆ. ಬಿಜೆಪಿಯವರು ತಮ್ಮ ಅವಧಿಯಲ್ಲಿ ಇಲ್ಲಿನ ಸೇತುವೆ ಯೋಜನೆಗಳನ್ನು ಪೂರ್ಣಗೊಳಿಸಲಿಲ್ಲ. ನಮ್ಮ ಸರ್ಕಾರ ಉಳುಗಾ ಕೆರವಡಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಯೋಜನೆಯನ್ನು ಆದ್ಯತೆ ಮೇಲೆ ಪೂರ್ಣಗೊಳಿಸುತ್ತದೆ ಎಂದೂ ಅವರು ಹೇಳಿದ್ದಾರೆ.
ಪ್ರತಿ ಜಿಲ್ಲೆಗೂ ಬಡವರಿಗಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ಪ್ರತಿ ಜಿಲ್ಲೆಯಲ್ಲಿಯೂ ಬಡವರಿಗಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಕ್ಯಾನ್ಸರ್ ಯೂನಿಟ್ ಒಂದನ್ನು ಕಾರವಾರದಲ್ಲಿ ಸ್ಥಾಪಿಸಲಾಗುವುದು. ಜಿಲ್ಲಾ ಕೇಂದ್ರಗಳಲ್ಲಿ ಎಲ್ಲ ವೈದ್ಯಕೀಯ ವ್ಯವಸ್ಥೆಗಳನ್ನು ಕಲ್ಪಿಸುವ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಕರ್ನಾಟಕದಲ್ಲಿ ಈಗಾಗಲೇ 22 ಸರ್ಕಾರಿ ಮೆಡಿಕಲ್ ಕಾಲೇಜಿದ್ದು, ಮುಂದಿನ ದಿನಗಳಲ್ಲಿ ಕೋಲಾರ, ಪುತ್ತೂರು, ಬಿಜಾಪುರಗಳಲ್ಲಿ ಕಾಲೇಜು ನಿರ್ಮಿಸಲಾಗುವುದು ಎಂದರು.
ಬಿಜೆಪಿ ಸರ್ಕಾರ ಕಾರವಾರದ ಅಭಿವೃದ್ಧಿಗೆ ಆದ್ಯತೆ ನೀಡಲಿಲ್ಲ
ಗ್ಯಾರಂಟಿಗಳಿಂದ ಸರ್ಕಾರದ ಬಳಿ ಹಣವಿಲ್ಲ ಎಂದು ವಿರೋಧಪಕ್ಷದವರು ಟೀಕಿಸುತ್ತಿದ್ದಾರೆ. ಆದರೆ ನಮ್ಮ ಅಭಿವೃದ್ಧಿಯ ಪಯಣ ನಿರಂತರವಾಗಿ ಸಾಗಿದೆ. ಉತ್ತರ ಕನ್ನಡ ಜಿಲ್ಲೆಗೆ 2954 ಕೋಟಿ ರೂ.ಗಳನ್ನು ಇಲ್ಲಿವರೆಗೆ ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ. ರಾಜ್ಯದಲ್ಲಿ ಸುಮಾರು 1,18,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಲಾಗಿದೆ. ಬಿಜೆಪಿಯವರು ನಮ್ಮ ಜನಪರ ಯೋಜನೆಗಳನ್ನು ಟೀಕಿಸುತ್ತಾ, ಅಭಿವೃದ್ಧಿಯಾಗುತ್ತಿಲ್ಲವೆಂದು ದೂರುತ್ತಿದ್ದಾರೆ. ಬಿಜೆಪಿಯವರು ತಮ್ಮ ಅವಧಿಯಲ್ಲಿ ಇಲ್ಲಿನ ಸೇತುವೆ ಯೋಜನೆಗಳನ್ನುಪೂರ್ಣಗೊಳಿಸಲಿಲ್ಲ. ನಮ್ಮ ಸರ್ಕಾರ ಉಳುಗಾ ಕೆರವಡಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಯೋಜನೆಯನ್ನು ಆದ್ಯತೆ ಮೇಲೆ ಪೂರ್ಣಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ವಿವಿಧ ಕಾರ್ಯಕ್ರಮಗಳಿಗೆ ಚಾಲನೆ
ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿನ ವಿವಿಧ ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಜಂಟಿಯಾಗಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ, ಕಾರವಾರ ವತಿಯಿಂದ ಅಂಕೋಲಾ ತಾಲೂಕಿನ ಮಂಜಗುಣಿ ಗ್ರಾಮದಿಂದ ಕುಮುಟಾ ತಾಲೂಕಿನ ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲು ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಶುಭ ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಮಂಕಾಳ ವೈದ್ಯ, ಮಾಜಿ ಸಚಿವರು, ಶಾಸಕರಾದ ಆರ್.ವಿ.ದೇಶಪಾಂಡೆ, ಶಾಸಕರಾದ ಸತೀಶ್ ಸೈಲ್, ಭೀಮಣ್ಣ ನಾಯ್ಕ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/big-boost-for-karwar-super-specialty-hospital-to-be-sanctioned-in-this-budget-cm-siddaramaiah-utta-444697.html. xn--babytilbehr-pgb.com does not claim ownership of this content. All rights remain with the original publisher.
