KSRTC Good News: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಉಚಿತ ಸೇವೆ | KSRTC Announces Free Bus Travel for 2nd PUC Students During Exam Period in Karnataka: Know details

Karnataka

oi-Madhusudhan KR

KSRTC Good News: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಭರ್ಜರಿ ಸಿಹಿಸುದ್ದಿ ನೀಡಿದೆ. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸುವುದಾಗಿ ನಿಗಮ ಘೋಷಣೆ ಮಾಡಿದೆ.

ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಈ ಮಹತ್ವದ ನಿರ್ಧಾರದಿಂದ ಗ್ರಾಮೀಣ ಹಾಗೂ ನಗರ ಪ್ರದೇಶಗಳ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ ಆಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

KSRTC Announces Free Bus Travel for 2nd PUC Students During Exam Period in Karnataka Know details

ಮಹತ್ವದ ನಿರ್ಧಾರ ಕೈಗೊಳ್ಳಲು ಉದ್ದೇಶವೇನು?

ಪರೀಕ್ಷಾ ದಿನಗಳಲ್ಲಿ ಸಾರಿಗೆ ವೆಚ್ಚದ ಚಿಂತೆಯಿಂದ ಮುಕ್ತರಾಗುವಂತೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಲು ಸಹಕಾರಿ ಆಗಲಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕೈಗೊಳ್ಳಲಾಗಿರುವ ಈ ಮಹತ್ವದ ನಿರ್ಧಾರಕ್ಕೆ ಸಾರ್ವಜನಿಕ ವಲಯದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಬಿಎಂಟಿಸಿ ಗುಡ್‌ ನ್ಯೂಸ್‌: ರಾಜ್ಯ ರಾಜಧಾನಿ ಬೆಂಗಳೂರು ಜೀವನಾಡಿ ಸಾರಿಗೆಗಳಲ್ಲಿ ಒಂದಾಗಿರುವ ಬಿಎಂಟಿಸಿ ಪರೀಕ್ಷೆ ವೇಳೆ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸೇವೆ ನೀಡಲಾಗುವುದು. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದೆ. ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

2025-26ನೇ ಸಾಲಿನ ಪಿಯುಸಿ ಪರೀಕ್ಷೆ-1ರ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಬಿಎಂಟಿಸಿ ಘೋಷಣೆ ಮಾಡಿದೆ. ಇನ್ನೂ ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದು ತಿಳಿದುಬಂದಿದೆ.

2025-26ನೇ ಸಾಲಿನ ಪಿ.ಯು.ಸಿ ಪರೀಕ್ಷೆ-1 ಫೆಬ್ರವರಿ 28 ರಿಂದ ಮಾರ್ಚ್‌ 17 ರವರೆಗೆ ನಡೆಯಲಿದೆ. ಪರೀಕ್ಷೆಯು ಬೇರೆ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಇರುವುದರಿಂದ ಬಿಎಂಟಿಸಿಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿದೆ. ಹಾಗಾದ್ರೆ ವಿದ್ಯಾರ್ಥಿಗಳು ಗಮನಿಸಬೇಕಾದ ಪ್ರಮುಖ ಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಗಮನಿಸಬೇಕಾದ ಪ್ರಮುಖ ಅಂಶಗಳು

* ಪಿಯುಸಿ ಪರೀಕ್ಷೆ-1ರ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
* ಪಿಯುಸಿ ಪರೀಕ್ಷೆ-1ರ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಟ್ರಿಪ್‌ಗಳನ್ನು ಕಾರ್ಯಾಚರಣೆಗೊಳಿಸಲಾಗುವುದು.
* ಹೆಚ್ಚುವರಿ ಟ್ರಿಪ್‌ಗಳನ್ನು ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು.
* ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೋಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ.

ಇನ್ನೂ ಬಿಎಂಟಿಸಿ ಬಸ್‌ಗಳಲ್ಲಿ ಪ್ರತಿದಿನ ಲಕ್ಷಾಂತರ ಜನ ಪ್ರಯಾಣ ಮಾಡುತ್ತಾರೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳನ್ನು ಸಂಪರ್ಕಿಸುವ ಸಾವಿರಾರು ಮಾರ್ಗಗಳಲ್ಲಿ ಬಿಎಂಟಿಸಿ ಬಸ್‌ಗಳು ಸಂಚರಿಸುತ್ತಿದ್ದು, ಉದ್ಯೋಗಿಗಳು, ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲ ವರ್ಗದ ಜನರು ಈ ಸೇವೆಯನ್ನು ಅವಲಂಬಿಸಿದ್ದಾರೆ.

ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಸಾಮಾನ್ಯ ಬಸ್‌ಗಳ ಜೊತೆಗೆ ವಾಯುಸೇವಾ (ವೋಲ್ವೋ), ವಜ್ರ, ವಾಯು ವಜ್ರ, ಸುವರ್ಣ ಹಾಗೂ ಎಲೆಕ್ಟ್ರಿಕ್ ಬಸ್‌ಗಳ ಸೇವೆ ಒದಗಿಸುತ್ತಿದೆ. ಸಮಯಪಾಲನೆ, ಸ್ವಚ್ಛತೆ ಮತ್ತು ಭದ್ರತೆಯನ್ನು ಹೆಚ್ಚಿಸಲು ಬಿಎಂಟಿಸಿ ನಿರಂತರವಾಗಿ ಹೊಸ ಕ್ರಮಗಳನ್ನು ಜಾರಿಗೆ ತರುತ್ತಿದೆ. ಡಿಜಿಟಲ್ ಟಿಕೆಟ್ ವ್ಯವಸ್ಥೆ, ಆನ್‌ಲೈನ್ ಪಾಸ್ ಅಪ್ಡೇಟ್‌, ಮೊಬೈಲ್ ಅಪ್ಲಿಕೇಶನ್ ಮೂಲಕ ಬಸ್ ಸಮಯ ಮಾಹಿತಿ ಪಡೆಯುವ ಸೌಲಭ್ಯಗಳು ಇದ್ದು, ಪ್ರಯಾಣಿಕರಿಗೆ ತುಂಬಾ ಸಹಾಯವಾಗಿದೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/ksrtc-announces-free-bus-travel-for-2nd-puc-students-during-exam-period-in-karnataka-know-details-443631.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo